AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ: ಮತ್ತೋರ್ವ ಅಧಿಕಾರಿ ತಲೆದಂಡ

ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ ಸಿದ್ಧಗಂಗಾ ಮಠದಿಂದ ಅಕ್ಕಿ ಎರವಲು ಪಡೆದು ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಇದರೊಂದಿಗೆ ಸೂಕ್ತ ಪ್ರಮಾಣದಲ್ಲಿ ಅಕ್ಕಿಯನ್ನು ಸರಬರಾಜು ಮಾಡಿದ್ದರೂ ಅದನ್ನು ಸೂಕ್ತ ಸಮಯದಲ್ಲಿ ಬಿಸಿಎಂ ಹಾಸ್ಟೆಲ್‌ ಸರಬರಾಜು ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಂತಾಗಿದೆ.

ಸಿದ್ದಗಂಗಾ ಮಠದಿಂದ ಅಕ್ಕಿ ಎರವಲು ಪ್ರಕರಣ: ಮತ್ತೋರ್ವ ಅಧಿಕಾರಿ ತಲೆದಂಡ
ವಿಧಾನಸೌಧ
TV9 Web
| Edited By: |

Updated on: Feb 21, 2024 | 8:40 PM

Share

ತುಮಕೂರು, (ಫೆಬ್ರವರಿ, 21): ತುಮಕೂರು (Tumkur) ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್​ಗೆ (BCM Hostel) ಸಿದ್ದಂಗಾ ಮಠದಿಂದ(Siddaganga Matt) ಅಕ್ಕಿ ಎರವಲು ಪಡೆದು ವಿತರಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ಎತ್ತಂಗಡಿ ಮಾಡಿದೆ. ಈ ಮೂಲಕ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಇಬ್ಬರೂ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಂತಾಗಿದೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಂಗಪ್ಪ ಅವರನ್ನು ವರ್ಗಾವಣೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೇಮಲತಾ ಎಂ. ಅವರು ಆದೇಶ ಹೊರಡಿಸಿದ್ದಾರೆ. ಗಂಗಪ್ಪ ಅ ಮಾತೃ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿದೆ.ಇನ್ನು ಗಂಗಪ್ಪ ಅವರ ಸ್ಥಾನಕ್ಕೆ ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯಾಗಿದ್ದ ಸೋನಿಯಾ ವರ್ಣಿಕರ್ ಅವರನ್ನು ನೇಮಕ ಮಾಡಲಾಗಿದೆ.

ಸಚಿವ ಶಿವರಾಜ್‌ ತಂಗಡಗಿ ಸ್ಪಷ್ಟನೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನಿದ್ದು, ಯಾವುದೇ ಕೊರತೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ಜಿಲ್ಲೆಯಲ್ಲಿ 111 ಹಾಸ್ಟೆಲ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿನ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಮಾಸಿಕ ಬೇಡಿಕೆಗಳಿಗೆ ಅನುಗುಣವಾಗಿ ಅಕ್ಕಿ ಮತ್ತು ಗೋಧಿ ಹಂಚಿಕೆಯಾಗಿರುತ್ತದೆ.‌ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ‌ ಅಕ್ಕಿ ಕೊರತೆ ಇಲ್ಲ. ಅಕ್ಕಿ ಇಲ್ಲ ಎಂಬ ವದಂತಿ ಬೆನ್ನಲ್ಲೇ ತುಮಕೂರಿನ ಹಿಂದುಳಿದ ವರ್ಗದ ಜಿಲ್ಲಾ ಕಲ್ಯಾಣ ಅಧಿಕಾರಿಯಿಂದ ಕೂಡ ಮಾಹಿತಿ ಪಡೆದಿದ್ದೇನೆ. ಅಕ್ಕಿ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದರು.

ಏನಿದು ಪ್ರಕರಣ?

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಿಗೆ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲ ಪಡೆಯಲಾಗಿತ್ತು. ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್‌ಗಳಿಗೆ ಸರ್ಕಾರದಿಂದ ಸಕಾಲಕ್ಕೆ ರೇಷನ್ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಿಸಿಎಂ ಇಲಾಖೆ ಅಧಿಕಾರಿಗಳು ಸಿದ್ದಗಂಗಾ ಮಠದಿಂದ ಅಕ್ಕಿ ದಾಸ್ತಾನು ಸಾಲ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 500 ಚೀಲ ಅಕ್ಕಿಯನ್ನು ಸಾಲವಾಗಿ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರಿಂದ ರಾಜ್ಯ ಸರ್ಕಾರ ಮುಜುಗರ ಉಂಟಾಗಿತ್ತು.  ಇನ್ನು ಅಕ್ಕಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ದಾಸ್ತಾನು ಇದ್ದರೂ ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ ಎನ್ನುವುದು ರಾಜ್ಯ ಸರ್ಕಾರದ ಆರೋಪವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.​

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ