ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಯಾವುದೇ ಸಚಿವ ಸಂಪುಟದಖಾತೆ ಹಂಚಿಕೆಯಲ್ಲಿ ಅಸಮಾಧಾನ ಸಹಜ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಣಾಕ್ಷರಿದ್ದಾರೆ, ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸುತ್ತಾರೆ. ಯಾವುದೇ ಖಾತೆಗೆ ಬೇಡಿಕೆ ಇಟ್ಟಿರಲಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.

ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
Follow us
| Updated By: guruganesh bhat

Updated on: Aug 08, 2021 | 10:44 PM

ತುಮಕೂರು: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು. ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಕನಸುಗಳನ್ನು ತೆರೆದಿಟ್ಟರು.

ಯಾವುದೇ ಸಚಿವ ಸಂಪುಟದಖಾತೆ ಹಂಚಿಕೆಯಲ್ಲಿ ಅಸಮಾಧಾನ ಸಹಜ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಣಾಕ್ಷರಿದ್ದಾರೆ, ಅವರು ಎಲ್ಲಾ ಗೊಂದಲಗಳನ್ನು ಬಗೆಹರಿಸುತ್ತಾರೆ. ಯಾವುದೇ ಖಾತೆಗೆ ಬೇಡಿಕೆ ಇಟ್ಟಿರಲಿಲ್ಲ ಎಂದು ಸಹ ಅವರು ಸ್ಪಷ್ಟಪಡಿಸಿದರು.

ವಿನಯ್ ಗುರೂಜಿ ಆರತಿ ಮಾಡುವಾಗ ಬಿತ್ತು ದೇವಿಯ ಪ್ರಸಾದ; ನೂತನ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೊರಕಿತು ಆಶೀರ್ವಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಆಶ್ರಮಕ್ಕೆ ರಾಜ್ಯದ ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ನಿನ್ನೆ (ಆಗಸ್ಟ್ 7)  ಭೇಟಿ ಕೊಟ್ಟು ದರ್ಶನ ಪಡೆದರು. ಈವೇಳೆ ಆಶ್ರಮದಲ್ಲಿ ದೇವಿಗೆ ಆರತಿ ಮಾಡುವಾಗ ದೇವಿಯ‌ ತಲೆ ಮೇಲಿಂದ ಹೂವಿನ ಪ್ರಸಾದದ ಹಾರ ಕೆಳಗೆ ಬಿದ್ದಿದೆ. ಈವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮೊದಲು ದೇವಿಗೆ ಆರತಿ ಮಾಡಿದ್ದಾರೆ. ನಂತರ ವಿನಯ್ ಗುರೂಜಿ ಆ ಬಳಿಕ ದೇವಿಗೆ ಆರತಿ ಮಾಡಿದ್ದಾರೆ. ವಿನಯ್ ಗುರೂಜಿ ಆರತಿ ಮಾಡುವಾಗ ದೇವಿಯ ತಲೆಯಿಂದ ಹೂವಿನ ಪ್ರಸಾದ ಕೆಳಗೆ ಬಿದ್ದಿದೆ. ನಂತರ ದೇವಿಯ ತಲೆಯಿಂದ ಬಿದ್ದ ಹೂವಿನ ಪ್ರಸಾದದ ಹಾರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕೊರಳಿಗೆ ವಿನಯ್ ಗುರೂಜಿ ಹಾಕಿದ್ದಾರೆ.

ಜತೆಗೆ ಇಂದು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ರಂಭಾಪುರಿಶ್ರೀ ಆಶೀರ್ವಾದ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಠದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡ ಅವರಿಗೆ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಜೀವರಾಜ್​ ಜತೆಗೂಡಿದ್ದರು. ಈ ಭೇಟಿಗೂ ಮೊದಲು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಈಬಾರಿಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: 

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್

(Karnataka New Home Minister Araga Jnanendra says will change big change in Police Department and try to adopt Auradkar Report)

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ