ತುಮಕೂರು: ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ

ನಿನ್ನೆ(ಏ.17) ನಾಡಿನೆಲ್ಲೆಡೆ ರಾಮನವಮಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಅದರಂತೆ ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್(Kunigal) ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಸ್ವಸ್ಥರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ತುಮಕೂರು: ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ
ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 18, 2024 | 3:55 PM

ತುಮಕೂರು, ಏ.18: ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ(ಏ.17) ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಮಸ್ಕಿಯ ಅಶೋಕ‌ ಶಿಲಾಶಾಸನ ರಸ್ತೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಧನೂರು ಮೂಲದ ಶಾಮೀದ್ (22) ಹಾಗೂ ಸಲ್ಮಾ(10) ಮೃತರು. ಸಿಂಧನೂರಿನಿಂದ ಮುದಗಲ್‌ಗೆ ಮದುವೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಈ ಘಟನೆ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೆಲ್ಮೆಟ್​ ಧರಿಸಿ ಬಂದು ಮೆಡಿಕಲ್​ ಪ್ರಾಡಕ್ಟ್​​, ಹಣ ದೋಚಿ ಕಳ್ಳ ಪರಾರಿ

ಹುಬ್ಬಳ್ಳಿ: ವಿದ್ಯಾನಗರದ ಅಪೋಲೋ ಮೆಡಿಕಲ್​ ಸ್ಟೋರ್​ಗೆ ಹೆಲ್ಮೆಟ್​ ಧರಿಸಿಬಂದು ಔಷಧ​​, ಹಣ ದೋಚಿ ಖದೀಮನೊಬ್ಬ ಪರಾರಿಯಾಗಿದ್ದಾನೆ. ಮೆಡಿಕಲ್​ ಸ್ಟೋರ್​ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕಳ್ಳ ಕೈಚಳಕ ತೋರಿಸಿದ್ದಾನೆ. ಇನ್ನು ಮೆಡಿಕಲ್​ ಸ್ಟೋರ್​ನಲ್ಲಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ ಮೆಡಿಕಲ್ ಶಾಫ್​ಗಳನ್ನೇ ಟಾರ್ಗೆಟ್ ಮಾಡಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Thu, 18 April 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ