AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಗ್ರಾ.ಪಂ ಸದಸ್ಯ, ವಾಟರ್ ಮ್ಯಾನ್ ಮೇಲೆ ಹಲ್ಲೆ

ಬಿರುಬಿಸಿಲಿಗೆ ರಾಜ್ಯಾದ್ಯಂತ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಂತೆ ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ತುರುವೇಕೆರೆ (Turuvekere) ತಾಲೂಕಿನ ಡಿ.ಕಲ್ಕೆರೆ ಗ್ರಾಮದಲ್ಲಿ ವಾಟರ್ ಮ್ಯಾನ್ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯನ ಮೇಲೂ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಗ್ರಾ.ಪಂ ಸದಸ್ಯ, ವಾಟರ್ ಮ್ಯಾನ್ ಮೇಲೆ ಹಲ್ಲೆ
ವಾಟರ್​ ಮ್ಯಾನ್​, ಪಂಚಾಯತ್​ ಸದಸ್ಯ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 23, 2024 | 6:33 PM

Share

ತುಮಕೂರು, ಏ.23: ಜಿಲ್ಲೆಯ ತುರುವೇಕೆರೆ(Turuvekere) ತಾಲೂಕಿನ ಡಿ.ಕಲ್ಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಹಾಗೂ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೌದು, ಹೆಚ್ಚುವರಿ ನೀರು ಬಿಟ್ಟಿಲ್ಲ ಎಂದು ಅದೇ ಗ್ರಾಮದ ನಾಲ್ವರು ಸೇರಿಕೊಂಡು ವಾಟರ್ ಮ್ಯಾನ್ ಶಬ್ಬಿರ್ ಎಂಬಾತನ ಮೇಲೆ ಹಲ್ಲೆ ಮುಂದಾಗಿದ್ದು, ಮಧ್ಯೆ ಪ್ರವೇಶಿಸಿದ ಗ್ರಾಮ ಪಂಚಾಯತಿ ಸದಸ್ಯ ನಯಾಜ್ ಮೇಲೂ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಕುರಿತು ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾವಿಯೊಳಗೆ ಉಸಿರುಗಟ್ಟಿ ಕಾರ್ಮಿಕರಿಬ್ಬರು ಸಾವು

ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಬಾವಿಯೊಳಗೆ ಉಸಿರುಗಟ್ಟಿ ರಿಂಗ್ ಕಾರ್ಮಿಕರಿಬ್ಬರ ದುರ್ಮರಣ ಹೊಂದಿದ ಧಾರುಣ ಘಟನೆ ನಡೆದಿದೆ. ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಮೃತಪಟ್ವವರು. ಕಾರ್ಮಿಕರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಲು ಇಳಿದಿದ್ದರು. ಈ ವೇಳೆ ಬಾವಿಯೊಳಗೆ ಆಕ್ಸಿಜನ್ ಸಿಗದೇ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಬಳಿಕ ಬಾವಿಯೊಳಗಿದ್ದ ಇಬ್ಬರ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಇನ್ನು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಮೃತ ಇಬ್ರಾಹಿಂ ಪರಿಣಿತರಾಗಿದ್ದ ಎನ್ನಲಾಗಿದೆ.

ಇದನ್ನೂ ಓದಿ:ಪಿಯುಸಿ ವಿದ್ಯಾರ್ಥಿಗಳ ನಡುವೆ ಗಲಾಟೆ; ಊರಿಂದ ಬಂದವನಿಗೆ ಸ್ಥಳೀಯ ವಿದ್ಯಾರ್ಥಿಗಳಿಂದ ಹಲ್ಲೆ

ವಿದ್ಯುತ್ ಶಾಕ್​ನಿಂದ ಲೈನ್ ಮ್ಯಾನ್ ಸಾವು

ಚಿಕ್ಕಮಗಳೂರು: ವಿದ್ಯುತ್ ಶಾಕ್​ನಿಂದ ಲೈನ್ ಮ್ಯಾನ್​ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಮಹದೇವ್ (30) ವಿದ್ಯುತ್ ಶಾಕ್​ನಿಂದ ಮೃತಪಟ್ಟ ಲೈನ್ ಮ್ಯಾನ್. ಟಾನ್ಸ್ ಫಾರ್ಮ್ ರಿಪೇರಿ ಹಿನ್ನಲೆ ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಏಕಾಏಕಿ ಕರೆಂಟ್ ಬಂದಿದ್ದು, ವಿದ್ಯುತ್ ಶಾಕ್​ಗೆ ಕಂಬದ ಮೇಲೆಯೇ ಮಹದೇವ್ ಅವರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ