AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ

ತುಮಕೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಇನ್ನು ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನಕ್ಕೆ ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್(Heat Stroke) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು(Tumkuru) ಜಿಲ್ಲಾಸ್ಪತ್ರೆ ಸೇರಿದಂತೆ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ.

Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ
ತುಮಕೂರಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 03, 2024 | 2:52 PM

Share

ತುಮಕೂರು, ಮೇ.03: ದಿನೇ ದಿನೇ ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನಕ್ಕೆ ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್(Heat Stroke) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು(Tumkuru) ಜಿಲ್ಲಾಸ್ಪತ್ರೆ ಸೇರಿದಂತೆ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಇನ್ನು ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಪರಿಣಾಮ ನಿತ್ಯ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಯಾರಿಗಾದರೂ ಹೀಟ್ ಸ್ಟ್ರೋಕ್ ಕಂಡು ಬಂದಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 5 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ.

ಅದರಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ ಪ್ರತ್ಯೇಕವಾಗಿ ಎರಡು ಹಾಸಿಗೆಗಳನ್ನ ಮೀಸಲಿರಿಸಲಾಗಿದೆ. ಜೊತೆಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಸಹ ಸಿದ್ಧತೆ ಮಾಡಿಕೊಂಡಿದೆ. ಸುಸ್ತು, ಆಯಾಸ ಎಂದು ಆಸ್ಪತ್ರೆಗೆ ಬರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ‌‌. ಈವರೆಗೆ ಯಾವುದೇ ಹೀಟ್ ಸ್ಟ್ರೋಕ್ ಪ್ರಕರಣ ಜಿಲ್ಲೆಯಾದ್ಯಂತ ಕಂಡುಬಂದಿಲ್ಲ. ಆದರೆ ಏಪ್ರಿಲ್ ತಿಂಗಳಲ್ಲಿ ಬಿಸಿಲಿನಿಂದ ಸುಸ್ತಾಗಿ ಬಿದ್ದಂತಹ ಎರಡು ಪ್ರಕರಣ ಕಂಡುಬಂದಿತ್ತು. ಆದರೆ, ಅದು ಹೀಟ್ ಸ್ಟ್ರೋಕ್ ಪ್ರಕರಣವಾಗಿರಲಿಲ್ಲ.

ಇದನ್ನೂ ಓದಿ:ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ

ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಈ ಮಧ್ಯೆ ಆಗಾಗ ಕೆಲಸದ ಸಂಬಂಧ ನಗರಕ್ಕೆ ಬರುವವರು, ಬಿಸಿಲಿನಿಂದ ದೇಹವನ್ನು ತಣ್ಣಗೀರಿಸಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!