Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು

ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ.

Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು
ಸಾಂದರ್ಭಿಕ ಚಿತ್ರ

Updated on: May 20, 2023 | 11:59 AM

ತುಮಕೂರು: ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ. ಇದೀಗ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿದ್ದು, ಹೃದಯ ಕಲಕುವಂತಿದೆ. ಮೊಬೈಲ್​ ಫೋನ್​ ಬಳಸುತ್ತಿದ್ದುದರಿಂದ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಲಾಗುತ್ತಿದೆ.

ಮೃತ ಯುವತಿಯನ್ನು ಭವ್ಯಾ ಎಂದು ಗುರುತಿಸಲಾಗಿದೆ. ಜತೆಗೆ ಆಕೆಯ ತಾಯಿ ರತ್ನಮ್ಮ ಕೂಡ ಇದ್ದರು. ಗಂಭೀರ ಗಾಯಗೊಂಡಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭವ್ಯ ಹಾಗೂ ರತ್ನಮ್ಮ ಸಿರಾ ತಾಲೂಕಿನ ನಿವಾಸಿಗಳಾಗಿದ್ದಾರೆ.

ಪ್ಲಾಸ್ಟಿಕ್ ಕ್ಯಾನೊಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹೋಗಲು ಇಬ್ಬರೂ ಬಂಕ್​ಗೆ ಬಂದಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿದ ಪ್ರಕಾರ, ರತ್ನಮ್ಮ ಅವರು ರತ್ನಮ್ಮ ಅವರು ದ್ವಿಚಕ್ರ ವಾಹನದಿಂದ ಇಳಿದು ಪ್ಲಾಸ್ಟಿಕ್ ಕ್ಯಾನ್​ಗೆ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದರು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಕುಳಿತ ಯುವತಿ ಮೊಬೈಲ್​ ಫೋನ್​ನಲ್ಲಿ ಮಗ್ನಳಾಗಿದ್ದರು. ದೀಢೀರ್ ಆಗಿ ಬೆಂಕಿ ಹೊತ್ತಿಕೊಂಡು ಧಗ್ಗನೆ ಆವರಿಸಿದೆ. ಸಿಬ್ಬಂದಿ, ರತ್ನಮ್ಮ ಹಾಗೂ ಇತರರು ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

(Disclaimer: Disturbing visuals, viewer discretion advised)

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಭವ್ಯಾ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us