ಕೊರಟಗೆರೆ: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಆಗಸ್ಟ್ 16 ರಂದು ಬಂದ್​ಗೆ ಕರೆ

ಕೊಬ್ಬರಿಗೆ ಕನಿಷ್ಠ 20 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಆಗಸ್ಟ್ 16 ರಂದು ಕೊರಟಗೆರೆ ಪಟ್ಟಣ ಬಂದ್​ಗೆ ರೈತ ಸಂಘಟನೆಗಳು ಕರೆ ನೀಡಿವೆ. ಕೊಬ್ಬರಿ ಬೆಲೆ ಕುಸಿದಿರುವ ಹಿನ್ನೆಲೆ ತಕ್ಷಣ ನಾಫೆಡ್​ ಮೂಲಕ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ.

ಕೊರಟಗೆರೆ: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಆಗಸ್ಟ್ 16 ರಂದು ಬಂದ್​ಗೆ ಕರೆ
ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಆಗಸ್ಟ್ 16 ರಂದು ಕೊರಟಗೆರೆ ಪಟ್ಟಣ ಬಂದ್​ಗೆ ಕರೆ (ಸಾಂದರ್ಭಿಕ ಚಿತ್ರ)
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Aug 12, 2023 | 9:37 PM

ತುಮಕೂರು, ಆಗಸ್ಟ್ 12: ಕೊಬ್ಬರಿಗೆ ಕನಿಷ್ಠ 20 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಆಗಸ್ಟ್ 16 ರಂದು ಕೊರಟಗೆರೆ (Koratagere) ಪಟ್ಟಣ ಬಂದ್​ಗೆ ರೈತ ಸಂಘಟನೆಗಳು ಕರೆ ನೀಡಿವೆ. ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಲಿದ್ದು, ಕನ್ನಡ ಪರ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಕೂಡ ಬೆಂಬಲ ಸೂಚಿಸಿವೆ.

ಆಗಸ್ಟ್ 16 ರಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್​ಗೆ ಸಹಕಾರ ನೀಡುವಂತೆ ಮಾಲೀಕರಲ್ಲಿ ರೈತ ಸಂಘಟನೆಗಳು ಮನವಿ ಮಾಡಿವೆ. 18 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಕೊಬ್ಬರಿ ಇದೀಗ 7,500 ರೂ.ಗೆ ಮಾರಾಟವಾಗುತ್ತಿದೆ ಎಂದು ರೈತರು ಹೇಳಿದ್ದಾರೆ.

ಕೊಬ್ಬರಿ ಬೆಲೆ ಕುಸಿತದಿಂದ ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು, ತಕ್ಷಣ ನಾಫೆಡ್​ ಮೂಲಕ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಅಲ್ಲದೆ, ಕೊಬ್ಬರಿಗೆ ಕೇಂದ್ರ ಸರ್ಕಾರ ಕೇವಲ 11,750 ರೂ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದನ್ನು 20 ಸಾವಿರ ರೂ.ಗೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಕೊರಟಗೆರೆ ಪಟ್ಟಣ ಬಂದ್​ಗೆ ಕರೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಆಗಸ್ಟ್ 14 ರಂದು ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ

ಕೊಬ್ಬರಿಗೆ ಕೇಂದ್ರ ಸರ್ಕಾರ ಕೇವಲ 11,750 ರೂ. ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದು ನ್ಯಾಯಸಮ್ಮತವಾದ ಬೆಲೆ ಅಲ್ಲ. ನುಸಿ ಪೀಡೆ, ಕಾಂಡ ಕೊರೆತ, ಅತಿವೃಷ್ಟಿ, ಅನಾವೃಷ್ಟಿಯಿಂದ ಇಳುವರಿ ಕುಂಟಿತವಾಗಿದೆ. ಈಗ ಬೆಲೆ ಕುಸಿತದಿಂದ ಮತ್ತಷ್ಟು ನಷ್ಟವಾಗುತ್ತಿದೆ ಎಂದು ರೈತರು ಹೇಳಿದ್ದಾರೆ.

ದಿನಗಳ ಹಿಂದೆಯಷ್ಟೇ, ಉಂಡೆ ಕೊಬ್ಬರಿ ಕ್ವಿಂಟಾಲ್​ಗೆ 25 ಸಾವಿರ ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತುಮಕೂರಿನ ತಿಪಟೂರಿನಲ್ಲಿ ಬಂದ್ ನಡೆಸಲಾಗಿತ್ತು. ನೀಲಕಂಠಸ್ವಾಮಿ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 pm, Sat, 12 August 23

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ