AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​​ಸಿ ಹಗರಣದ ಕಿಂಗ್​​ಪಿನ್​​ ಬಸವರಾಜ್​​ ಕನ್ನಾಳೆಗೆ ಮತ್ತೊಂದು ಆಘಾತ: ತುಮಕೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯತ್ವಕ್ಕೂ ಕಂಟಕ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಮುಖ್ಯ ಆರೋಪಿ ಬಸವರಾಜ್ ಕನ್ನಾಳೆಗೆ ಶೋಕಾಸ್ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನ ರದ್ದಾಗುವ ಸಾಧ್ಯತೆ ನಿಶ್ಚಿತವಾಗಿದೆ. ಎರಡನೇ ನೋಟಿಸ್​​ ನೀಡಿ ಸೆಪ್ಟೆಂಬರ್ 28ಕ್ಕೆ 7 ದಿನ ಮುಗಿದರೂ ಕನ್ನಾಳೆಯಿಂದ ಉತ್ತರ ಬಾರದ ಕಾರಣ ವಿಚಾರವನ್ನು ವಿವಿಯ ಕುಲಪತಿಗಳು ರಾಜ್ಯಪಾಲರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ.

ಕೆಪಿಎಸ್​​ಸಿ ಹಗರಣದ ಕಿಂಗ್​​ಪಿನ್​​ ಬಸವರಾಜ್​​ ಕನ್ನಾಳೆಗೆ ಮತ್ತೊಂದು ಆಘಾತ: ತುಮಕೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯತ್ವಕ್ಕೂ ಕಂಟಕ
ಬಸವರಾಜ್​​ ಕನ್ನಾಳೆImage Credit source: Basavaraj Kannale Facebook Page
ಜಗದೀಶ ಬಿ.
| Edited By: |

Updated on: Sep 30, 2026 | 6:58 PM

Share

ತುಮಕೂರು, ಸೆಪ್ಟೆಂಬರ್​​ 30: ಪಶು ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಕಿಂಗ್ ಪಿನ್ ಆಗಿರುವ ಬಸವರಾಜ್ ಕನ್ನಾಳೆಗೆ ಮತ್ತೊಂದು ಶಾಕ್​​ ಎದುರಾಗಿದೆ. ತುಮಕೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಸವರಾಜ್​​ ಸ್ಥಾನ ರದ್ದಾಗುವ ಸಾಧ್ಯತೆ ಬಹುತೇಕ ನಿಶ್ಚಿತ ಎನ್ನಲಾಗಿದೆ. ರಾಜಕಾರಣಿಗಳ ಪ್ರಭಾವ ಹೊಂದಿದ್ದ ಈತ ರಾಜ್ಯಪಾಲರ ಕೋಟಾದಲ್ಲಿ ನಾಮ ನಿರ್ದೇಶಿತಗೊಂಡು, ಕಳೆದ ಒಂದು ವರ್ಷದಿಂದಲೂ ಯೂನಿವರ್ಸಿಟಿಯ ಸಿಂಡಿಕೇಟ್ ಸದಸ್ಯನಾಗಿದ್ದ. ಆದರೀಗ ಅದಕ್ಕೂ ಕಂಟಕ ಎದುರಾಗಿದೆ.

ತುಮಕೂರು ವಿಶ್ವ ವಿದ್ಯಾಲಯದಿಂದ ಎರಡು ಬಾರಿ ನೋಟಿಸ್​​

ಕೆಪಿಎಸ್​​ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹುದ್ದೆಯಲ್ಲಿ ಕನ್ನಾಳೆಯೇ ಪ್ರಮುಖ ಆರೋಪಿ ಎನ್ನಲಾಗಿರುವ ಕಾರಣ ರಾಜ್ಯಪಾಲರ ನಿರ್ದೇಶನದಂತೆ ತುಮಕೂರು ವಿಶ್ವ ವಿದ್ಯಾಲಯದಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ಸೆಪ್ಟೆಂಬರ್ 10 ಮತ್ತು 21ರಂದು ಎರಡು ಬಾರಿ ನೋಟಿಸ್​​ ಕೊಡಲಾಗಿದ್ದು, ವಿಶ್ವವಿದ್ಯಾಲಯದ ಸಿಬ್ಬಂದಿ ಬಿದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿರುವ ಬಸವರಾಜ್​​ ಮನೆಗೇ ಹೋಗಿ ಆತನ ಪೋಷಕರಿಗೂ ನೋಟಿಸ್​​ ತಲುಪಿಸಿದ್ದರು. ಕೆಪಿಎಸ್ಸಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಬಗ್ಗೆ ಅದರಲ್ಲಿ ಉಲ್ಲೇಖಿಸಲಾಗಿದ್ದು, ನೋಟಿಸ್ ತಲುಪಿದ 7 ದಿನದೊಳಗೆ ಉತ್ತರ ಕೊಡುವಂತೆ ಸೂಚಿಸಲಾಗಿತ್ತು. ಒಂದು ವೇಳೆ ಉತ್ತರಿಸದೇ ಇದ್ದರೆ ವಜಾಗೊಳಿಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು.

LIVE TV

ಇದನ್ನೂ ಓದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ: ಇಡಿ ತನಿಖೆಯಲ್ಲಿ ಆರೋಪಿಗಳ ಕಳ್ಳಾಟ ಬಹಿರಂಗ

ಇನ್ನು ಎರಡನೇ ನೋಟಿಸ್​​ ನೀಡಿ ಸೆಪ್ಟೆಂಬರ್ 28ಕ್ಕೆ 7 ದಿನ ಮುಗಿದರೂ ಕನ್ನಾಳೆಯಿಂದ ಉತ್ತರ ಬಾರದ ಕಾರಣ ವಿಚಾರವನ್ನು ವಿವಿಯ ಕುಲಪತಿಗಳು ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅಲ್ಲದೆ ಕೆಪಿಎಸ್​​ಸಿ ಹಗರಣದ ತನಿಖೆ ನಡೆಸುತ್ತಿರುವ ತಂಡದಿಂದಲೂ ಕನ್ನಾಳೆ ಪಾತ್ರದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದ್ದು, ಇದನ್ನೂ ಸಹ ರಾಜ್ಯಪಾಲರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈಗ ಚೆಂಡು ರಾಜ್ಯಪಾಲರ ಅಂಗಳದಲ್ಲಿ ಇದ್ದು, ಸಿಂಡಿಕೇಟ್ ಸದಸ್ಯ ಕನ್ನಾಳೆ ವಜಾ ಪಕ್ಕಾ ಎನ್ನಲಾಗ್ತಿದೆ. ಹೀಗಿದ್ದರೂ ಅಂತಿಮವಾಗಿ ರಾಜ್ಯಪಾಲರ ನಿರ್ಧಾರ ಏನೆಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!