ಕ್ಷೀರಭಾಗ್ಯ ದಶಮಾನೋತ್ಸವ : ಹಿಂದೆ ಎಂದೂ ನೋಡದ ಕಾರ್ಯಕ್ರಮ ಮಧುಗಿರಿಯಲ್ಲಿ ಆಯೋಜನೆ; ಜಿ ಪರಮೇಶ್ವರ

ಕ್ಷೀರಭಾಗ್ಯ ಯೋಜನೆ ಜಾರಿಗೆಯಾಗಿ 10 ವರ್ಷಗಳು ಪೂರೈಕೆಯಾಗುತ್ತಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಜಾರಿಗೆ ತಂದಿದ್ದರು. ಕರ್ನಾಟಕದಲ್ಲಿ 65 ಲಕ್ಷ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಅನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ 10 ವರ್ಷಗಳ ಸಂಭ್ರಮ ಆಚರಣೆ ಮಾಡುವುದಕ್ಕೆ ತೀರ್ಮಾನ ಮಾಡಕಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.

ಕ್ಷೀರಭಾಗ್ಯ ದಶಮಾನೋತ್ಸವ : ಹಿಂದೆ ಎಂದೂ ನೋಡದ ಕಾರ್ಯಕ್ರಮ ಮಧುಗಿರಿಯಲ್ಲಿ ಆಯೋಜನೆ; ಜಿ ಪರಮೇಶ್ವರ
ಗೃಹ ಸಚಿವ ಡಾ.ಜಿ ಪರಮೇಶ್ವರ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on: Sep 04, 2023 | 1:57 PM

ತಮಕೂರು: ಕ್ಷೀರ ಭಾಗ್ಯ (Ksheera bhagya) ಜಾರಿಯಾಗಿ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು (Tumkur) ಜಿಲ್ಲೆ ಮಧುಗಿರಿ (Madhugiri) ಪಟ್ಟಣದಲ್ಲಿ ಸೆಪ್ಟೆಂಬರ್ 6 ರಂದು ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara)​ ಮಾತನಾಡಿ ಹಿಂದೆ ಎಂದೂ ನೋಡದ ಕಾರ್ಯಕ್ರಮ ಮಧುಗಿರಿಯಲ್ಲಿ ಆಯೋಜನೆ ಮಾಡುತ್ತೇವೆ ಎಂದು ಹೇಳಿದರು.

ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತಾನಡಿದ ಅವರು ಕ್ಷೀರಭಾಗ್ಯ ಯೋಜನೆ ಜಾರಿಗೆಯಾಗಿ 10 ವರ್ಷಗಳು ಪೂರೈಕೆಯಾಗುತ್ತಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ಜಾರಿಗೆ ತಂದಿದ್ದರು. ಕರ್ನಾಟಕದಲ್ಲಿ 65 ಲಕ್ಷ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಅನುಕೂಲವಾಗಿದೆ. 1 ರಿಂದ 10ನೇ ತರಗತಿ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಿಂದ ಅನುಕೂಲವಾಗಿ. ಈ ಹಿನ್ನೆಲೆಯಲ್ಲಿ 10 ವರ್ಷಗಳ ಸಂಭ್ರಮ ಆಚರಣೆ ಮಾಡುವುದಕ್ಕೆ ತೀರ್ಮಾನ ಮಾಡಕಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗಿಯಾಗುತ್ತಾರೆ. ಇದೇ ಕಾರ್ಯಕ್ರಮದಲ್ಲಿ 156 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರುತ್ತದೆ. 13 ಸ್ಟಾಲ್ ಹಾಕಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗದರ್ಶನ ನೀಡಲಾಗುತ್ತದೆ ಎಂದರು.

ಇದನ್ನೂ ಓದಿ: ಮಧುಗಿರಿಯಲ್ಲಿ ಬುಧವಾರ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ -ಸಹಕಾರ ಸಚಿವ ಕೆ.ಎನ್.ರಾಜಣ್ಣ

ಇನ್ನು ಐದು ಗ್ಯಾರಂಟಿಗಳಿಗೆ ವಿರೋಧ ಪಕ್ಷದವರು ಟೀಕೆ ಟಿಪ್ಪಣಿ ಮಾಡಿದರು. ಆದರೆ ಇವತ್ತು ನಮ್ಮ ಸರ್ಕಾರ ಟೀಕೆಗಳನ್ನು ಸುಳ್ಳು ಮಾಡಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನ ಅನುಷ್ಠಾನಕ್ಕೆ ತರಲಾಗಿದೆ. ನಮ್ಮ ಜಿಲ್ಲೆಯಲ್ಲಿ ಪ್ರತಿ ಕಾರ್ಯಕ್ರಮ ಯಶಸ್ವಿಯಾಗಿದೆ. 2 ಕೋಟಿ 19 ಲಕ್ಷ ಗ್ರಾಹಕರಿಗೆ ವಿದ್ಯುತ್ ಉಚಿತವಾಗಿ ಕೋಡುತ್ತಿದ್ದೇವೆ. ಸುಮಾರು 13,910 ಕೋಟಿಯಷ್ಟು ವಿದ್ಯುತ್ ಗ್ರಾಹಕರಿಗೆ ಸೇರಿದೆ. ಗೃಹಲಕ್ಷ್ಮಿ ಯೋಜನೆ 1.28 ಕೋಟಿ ಮಹಿಳೆಯರಿಗೆ ಸಹಕಾರವಾಗಿದೆ. 33 ಸಾವಿರ ಕೋಟಿ ಒಂದು ವರ್ಷಕ್ಕೆ ಆಗುವಂತದ್ದು ಮಾಡಿದೆ. ಶಕ್ತಿ ಯೋಜನೆ ಮೂರು ತಿಂಗಳಲ್ಲಿ 1.5 ಕೋಟಿ ಜನ ತುಮಕೂರು ಜಿಲ್ಲೆಯಲ್ಲಿ ಓಡಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಸಾಕಷ್ಟು ಅಕ್ಕಿ ಇದ್ದರು ಕೊಡಲಿಲ್ಲ. ನಾವು ಕೊಟ್ಟ ಮಾತು ಉಳಿಸಿಕೊಳ್ಳಲು ಅಕ್ಕಿ ಸಿಗುವವರೆಗೆ 5 ಕೆಜಿ ಅಕ್ಕಿಗೆ ಹಣ ಕೊಡುತ್ತಿದ್ದೇವೆ. 1.28 ಕೋಟಿ ಪಡಿತರ ಚೀಟಿದಾರರಿದ್ದಾರೆ ಅವರಿಗೆ ಅನುಕೂಲವಾಗುತ್ತಿದೆ ಎಂದರು.

ಇಡೀ ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದೆ. ನಮ್ಮ ಜಿಲ್ಲೆಯಲ್ಲಿ ಶೇ 98 ರಷ್ಟು ಮಳೆ ಆಗಿಲ್ಲ. ಸರ್ಕಾರಕ್ಕೆ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ಎಂದು ಹೇಳಿದ್ದೇನೆ. ನಾನು ಸಿಎಂ ಅವರಿಗೆ ಪತ್ರ ಬರೆದಿದ್ದೇನೆ. ಇವತ್ತು ಸಂಪುಟದ ಉಪಸಮಿತಿಯಲ್ಲಿ ಈ ವಿಷಯ ಬರುತ್ತೆ. ಉಪಸಮಿತಿಯಲ್ಲಿ ರಾಜಣ್ಣ ಸದಸ್ಯರಿದ್ದಾರೆ ಅವರಿಗೂ ಮನವಿ ಮಾಡುತ್ತೇವೆ. ನಮ್ಮ ಜಿಲ್ಲೆಯ ಹೆಚ್ಚು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಅಂತಾ ಒತ್ತಾಯ ಮಾಡುತ್ತೇನೆ. ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ ಯಾವತ್ತು ಕೂಡ ಹಿಂದುಳಿದಿರುವ ಪ್ರದೇಶಗಳು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ