AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ?; ಸಿಬ್ಬಂದಿ ಸೋಗಿನಲ್ಲಿ ಬಂದು ವಿಕೃತಿ ಮೆರೆದ ಕಿರಾತಕನಿಗೆ ಬಿತ್ತು ಧರ್ಮದೇಟು

Kunigal News:ಶಕ್ತಿ ಯೋಜನೆ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳಾ ಸುರಕ್ಷತೆ ಕುರಿತು ಆತಂಕ ಹೆಚ್ಚಿದೆ. ಕುಣಿಗಲ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಸಹಪ್ರಯಾಣಿಕರು ಚಪ್ಪಲಿಯಿಂದ ಧರ್ಮದೇಟು ನೀಡಿದ್ದಾರೆ. ಇಂತಹ ಘಟನೆಗಳ ತಡೆಗೆ ಕಠಿಣ ಕ್ರಮಗಳು ಹಾಗೂ ಜಾಗೃತಿ ಅತ್ಯಗತ್ಯ, ಇದರಿಂದ ಮಹಿಳೆಯರು ನಿರ್ಭೀತಿಯಿಂದ ಪ್ರಯಾಣಿಸಲು ಸಾಧ್ಯವಾಗುತ್ತದೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ?; ಸಿಬ್ಬಂದಿ ಸೋಗಿನಲ್ಲಿ ಬಂದು ವಿಕೃತಿ ಮೆರೆದ ಕಿರಾತಕನಿಗೆ ಬಿತ್ತು ಧರ್ಮದೇಟು
ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕಿರುಕುಳ
ಅಕ್ಷಯ್​ ಪಲ್ಲಮಜಲು​​
|

Updated on:Jun 23, 2026 | 3:06 PM

Share

ತುಮಕೂರು, ಜೂ.23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಇದೀಗ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆಯ (Women Safety) ಕುರಿತು ಆತಂಕ ಮೂಡಿಸುವ ಘಟನೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಸೋಲೂರು ಬಳಿ ನಡೆದ ಘಟನೆಯೊಂದು ಭಾರೀ ವೈರಲ್​​ ಆಗಿತ್ತು. ಈಗ ಅದರ ಬೆನ್ನಲ್ಲೇ ಕುಣಿಗಲ್​​​ನ ಬಿಲಿದೇವಾಲಯದ (Bilidevalaya) ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆಸಾಮಿಗೆ ಸಹಪ್ರಯಾಣಿಕರು ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ @Karnataka Portfolio  ಎಂಬ ಎಕ್ಸ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ತಾನು ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಂದು ಸುಳ್ಳು ಹೇಳಿ ನಿರ್ವಾಹಕನನ್ನು (Conductor) ದಾರಿ ತಪ್ಪಿಸಿ ಬಸ್ ಹತ್ತಿದ್ದ ಎನ್ನಲಾಗಿದೆ. ಬಸ್ ಚಲಿಸುತ್ತಿದ್ದಂತೆ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಜೊತೆ ಈತ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಆರೋಪಿಯ ಈ ಅಸಭ್ಯ ವರ್ತನೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಮಹಿಳೆ ಮತ್ತು ಬಸ್‌ನಲ್ಲಿದ್ದ ಇತರೆ ಪ್ರಯಾಣಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಲ್ಲಿದೆ ನೋಡಿ ಸ್ಟೋರಿ:

ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಕಿರುಕುಳ ನೀಡಿದ ವ್ಯಕ್ತಿಗೆ ಪ್ರಯಾಣಿಕರು ಬಸ್‌ನೊಳಗೇ ಚಪ್ಪಲಿಯಿಂದ ಧರ್ಮದೇಟು ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಆರೋಪಿಯು ಬಸ್‌ನಿಂದ ಇಳಿದು ತಪ್ಪಿಸಿಕೊಳ್ಳಲು (Escape) ಯತ್ನಿಸಿದ್ದಾನೆ. ಆದರೆ, ಕಿರುಕುಳಕ್ಕೊಳಗಾದ ಮಹಿಳೆಯ ಪತಿ ತಕ್ಷಣ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ!

ಇಂತಹ ಘಟನೆಗಳು ಸಮಾಜ ತಲೆತಗ್ಗಿಸುವಂತೆ ಮಾಡಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹಿಳೆಯರ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ. “ಇಂತಹ ವಿಕೃತ ಮನಸ್ಸುಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಸಂಸ್ಥೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆಗ ಮಾತ್ರ ಇತರರಿಗೆ ಇದೊಂದು ಪಾಠವಾಗಲಿದ್ದು, ಬಸ್‌ಗಳಲ್ಲಿ ಮಹಿಳೆಯರು ನಿರ್ಭೀತಿಯಿಂದ ಪ್ರಯಾಣಿಸಲು ಸಾಧ್ಯವಾಗುತ್ತದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Tue, 23 June 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್