ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ

ರೈತ ಮತ್ತು ಗ್ರಾಮೀಣ ಯುವಕರಿಗೆ ಮದುವೆಯಾಗಲು ವಧುಗಳ ಕೊರತೆ ತೀವ್ರವಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕೃಷಿಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ಮತ್ತು ಸ್ಥಾನಮಾನ ಘೋಷಿಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ
ಸಿಎಂಗೆ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಪತ್ರ
Image Credit source: Tv9 Kannada
Edited By:

Updated on: Feb 19, 2026 | 2:06 PM

ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್​​ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ ವೈರಲ್​​ ಆಗಿದೆ.

ರಂಗನಾಥ್​​ ಬರೆದಿರುವ ಪತ್ರದಲ್ಲೇನಿದೆ?

ಸಿಎಂಗೆ ವಿಭಿನ್ನ ಪತ್ರ ಬರೆದು ಗಮನ ಸೆಳೆದ ಶಾಸಕ ಡಾ.ರಂಗನಾಥ್, ಕೃಷಿಯಲ್ಲಿ ತೊಡಗಿರುವ ತಾಲೂಕಿನ ಗಂಡು ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ಆಗ್ರಹಿಸಿದ್ದಾರೆ. ನನ್ನ ಮತ ಕ್ಷೇತ್ರ ಕುಣಿಗಲ್ ತಾಲ್ಲೂಕು ಗ್ರಾಮೀಣ ಪ್ರದೇಶವಾಗಿದ್ದು, ವ್ಯವಸಾಯ ಅವಲಂಭನೆ ಹೆಚ್ಚಿದೆ. ಹೀಗಾಗಿ ಗ್ರಾಮಗಳಲ್ಲಿ ಹೆಚ್ಚಿನ ಯುವಕರು ವಾಸವಿದ್ದು, ಅವರು ವ್ಯವಸಾಯ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಇವರನ್ನು ಮದುವೆ ಆಗಲು ಹೆಣ್ಣು ಮಕ್ಕಳು ನಿರಾಕರಿಸುತ್ತಿದ್ದು, ಮೂವತ್ತು ವರ್ಷ ದಾಟಿದರೂ ಅವರ ವಿವಾಹ ನಡೆಯುತ್ತಿಲ್ಲ. ಹೀಗಾಗಿ ಅವರು ತೊಂದರೆಗೆ ಸಿಲುಕಿದ್ದು,  ವ್ಯವಸಾಯ ಮಾಡಿಕೊಂಡಿರುವವರನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ, ವಿಶೇಷ ಸ್ಥಾನಮಾನವನ್ನು ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​; ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ?

ರೈತಾಪಿ ಕುಟುಂಬಗಳ ಹುಡುಗರಿಗೆ ಮದುವೆಗೆ ಹುಡುಗಿ ಸಿಗದ ವಿಚಾರವನ್ನು ಈ ಹಿಂದೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರೂ ಪ್ರಸ್ತಾಪಿಸಿ ಗಮನ ಸೆಳೆದಿದ್ದರು. ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಠೇವಣಿ ಇಡುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದರು. ಹುಡುಗಿಯರು ಹೆಚ್ಚಾಗಿ ಸರ್ಕಾರಿ ನೌಕರರು, ಸಿಟಿಗಳಲ್ಲಿರುವ ಗಂಡು ಮಕ್ಕಳೇ ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು, ಕೂಲಿಕಾರ್ಮಿಕರ ಮಕ್ಕಳನ್ನು ಮದುವೆ ಆಗಲು ಯಾರೂ ಒಪ್ಪದ ಕಾರಣ ಸರ್ಕಾರ ಹೊಸ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:05 pm, Thu, 19 February 26

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us