AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
TV9 Web
| Updated By: ಆಯೇಷಾ ಬಾನು|

Updated on: Dec 16, 2021 | 2:36 PM

Share

ತುಮಕೂರು: ಸರ್ಕಾರದ ಸ್ವತ್ತನ್ನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರೊಂದಿಗೆ ಶಾಮೀಲಾಗಿ ಅಕ್ರಮವಾಗಿ ಒತ್ತುವರಿಯಾಗಿರುವ ಕೆರೆ ಜಾಗವನ್ನ ತೆರವುಗೊಳಿಸಲು ಮೀನಾಮೀಷ ಎಣಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಒಂದೇ ಕುಟುಂಬದ ಚಿಕ್ಕತಾಯಮ್ಮ, ಕೆಂಪಶಂಕರಯ್ಯ, ಕುಳ್ಳಯ್ಯ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅಂತಾ ಆರೋಪಿಸಿದ್ದಾರೆ. ಅಲ್ಲದೇ ಜೆಸಿಬಿ ಯಂತ್ರ ಬಳಸಿ ಕೆರೆಯ ತೂಬು ಹಾಗೂ ಏರಿಯನ್ನ ಧ್ವಂಸ ಮಾಡಿ ಮಾವಿನ ಗಿಡ, ನೀಲಗಿರಿ ನಡುತೋಪಿಗೆ ಬಳಸಿಕೊಳ್ಳುತ್ತಿದ್ದಾರೆ ಅಂತಾ ಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ ಕೆರೆಗಳ ಒತ್ತುವರಿಯಿಂದ ಅಂತರ್ಜಲ ಮಟ್ಟ ಕುಸಿತವಾಗಲಿದ್ದು, ಒತ್ತುವರಿಯಾಗಿರುವ ಕೆರೆಯ ಜಾಗವನ್ನ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಕೂಡಲೇ ಅಧಿಕಾರಿಗಳು ತೆರವು ಗೊಳಿಸಿಲ್ಲ ಎಂದರೇ ಸಂರಕ್ಷಣೆ ಹೋರಾಟ ಸಮಿತಿ ಸೇರಿದಂತೆ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ.

ಅಧಿಕಾರಿಗಳ ಶಾಮೀಲು ಆರೋಪ ಇನ್ನೂ ಇದರಲ್ಲಿ ತಾಲೂಕು ಕಚೇರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೇ ಶಾಮಿಲಾಗಿರುವ ಆರೋಪ ಕೇಳಿಬಂದಿದೆ. ಸಾಕಷ್ಟು ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿ ಕೆರೆ ಜಾಗವನ್ನ ತೆರವುಗೊಳಿಸುವಂತೆ ಮನವಿ ಮಾಡಿದರೂ ಸ್ಪಂದಿಸಿಲ್ಲ ಎನ್ನಲಾಗಿದೆ. ಹೀಗಾಗಿ ಈ ಅಕ್ರಮಕ್ಕೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಅಂತಾ ಆರೋಪ ಕೇಳಿಬಂದಿದೆ. ಒಟ್ಟಾರೆ ಸರ್ಕಾರ ಇದನ್ನ ಗಮನಹರಿಸಿ ಕೂಡಲೇ ಕೆರೆ ಜಾಗವನ್ನ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕಿದೆ.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?