ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ

| Updated By: ಆಯೇಷಾ ಬಾನು

Updated on: Dec 16, 2021 | 2:36 PM

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
Follow us on

ತುಮಕೂರು: ಸರ್ಕಾರದ ಸ್ವತ್ತನ್ನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರೊಂದಿಗೆ ಶಾಮೀಲಾಗಿ ಅಕ್ರಮವಾಗಿ ಒತ್ತುವರಿಯಾಗಿರುವ ಕೆರೆ ಜಾಗವನ್ನ ತೆರವುಗೊಳಿಸಲು ಮೀನಾಮೀಷ ಎಣಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಒಂದೇ ಕುಟುಂಬದ ಚಿಕ್ಕತಾಯಮ್ಮ, ಕೆಂಪಶಂಕರಯ್ಯ, ಕುಳ್ಳಯ್ಯ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅಂತಾ ಆರೋಪಿಸಿದ್ದಾರೆ. ಅಲ್ಲದೇ ಜೆಸಿಬಿ ಯಂತ್ರ ಬಳಸಿ ಕೆರೆಯ ತೂಬು ಹಾಗೂ ಏರಿಯನ್ನ ಧ್ವಂಸ ಮಾಡಿ ಮಾವಿನ ಗಿಡ, ನೀಲಗಿರಿ ನಡುತೋಪಿಗೆ ಬಳಸಿಕೊಳ್ಳುತ್ತಿದ್ದಾರೆ ಅಂತಾ ಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
ಕೆರೆಗಳ ಒತ್ತುವರಿಯಿಂದ ಅಂತರ್ಜಲ ಮಟ್ಟ ಕುಸಿತವಾಗಲಿದ್ದು, ಒತ್ತುವರಿಯಾಗಿರುವ ಕೆರೆಯ ಜಾಗವನ್ನ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಕೂಡಲೇ ಅಧಿಕಾರಿಗಳು ತೆರವು ಗೊಳಿಸಿಲ್ಲ ಎಂದರೇ ಸಂರಕ್ಷಣೆ ಹೋರಾಟ ಸಮಿತಿ ಸೇರಿದಂತೆ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ.

ಅಧಿಕಾರಿಗಳ ಶಾಮೀಲು ಆರೋಪ
ಇನ್ನೂ ಇದರಲ್ಲಿ ತಾಲೂಕು ಕಚೇರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೇ ಶಾಮಿಲಾಗಿರುವ ಆರೋಪ ಕೇಳಿಬಂದಿದೆ. ಸಾಕಷ್ಟು ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿ ಕೆರೆ ಜಾಗವನ್ನ ತೆರವುಗೊಳಿಸುವಂತೆ ಮನವಿ ಮಾಡಿದರೂ ಸ್ಪಂದಿಸಿಲ್ಲ ಎನ್ನಲಾಗಿದೆ. ಹೀಗಾಗಿ ಈ ಅಕ್ರಮಕ್ಕೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಅಂತಾ ಆರೋಪ ಕೇಳಿಬಂದಿದೆ. ಒಟ್ಟಾರೆ ಸರ್ಕಾರ ಇದನ್ನ ಗಮನಹರಿಸಿ ಕೂಡಲೇ ಕೆರೆ ಜಾಗವನ್ನ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕಿದೆ.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು