AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು: ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!

ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ಸೂರ್ಯಾಸ್ತ ತೋರಿಸುವಾಗ ಪಿಯು ಉಪನ್ಯಾಸಕರೊಬ್ಬರು ಆಯ ತಪ್ಪಿ 50 ಅಡಿ ಆಳಕ್ಕೆ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಉಪನ್ಯಾಸಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಲುಗಳಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು: ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ!
ಉಪನ್ಯಾಸಕImage Credit source: tv9 kannada
Jagadisha B
| Edited By: |

Updated on: Jun 28, 2026 | 5:22 PM

Share

ಮುಖ್ಯಾಂಶಗಳು

  • 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ
  • ಸೂರ್ಯಾಸ್ತ ತೋರಿಸುವ ಭರದಲ್ಲಿ ಪ್ರಾಣಾಪಾಯ ತಂದುಕೊಂಡ ಲೆಕ್ಚರರ್
  • ತುಮಕೂರಿನ ದೇವರಾಯನದುರ್ಗ ಬೆಟ್ಟದಲ್ಲಿ ಘಟನೆ

ತುಮಕೂರು, ಜೂನ್​​ 28: ಹೊರರಾಜ್ಯದ ಸಾಫ್ಟ್‌ವೇರ್ ಇಂಜಿನಿಯರ್‌ಗಳಿಗೆ ಸೂರ್ಯಾಸ್ತ (Sunset) ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು (Lecturer) ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ತುಮಕೂರು (tumakuru) ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ನಡೆದಿದೆ. 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ ಶಿವಪ್ರಸಾದ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ತುಮಕೂರು ತಾಲೂಕಿನ ಒಬಳಾಪುರ ಮೂಲದ ಶಿವಪ್ರಸಾದ್​​, ಪ್ರಸ್ತುತ ಅರಸೀಕೆರೆಯ ಪಿಯು ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶನಿವಾರ ಸಂಜೆ ಅವರು ತಮ್ಮ ಸ್ನೇಹಿತನೊಂದಿಗೆ ದೇವರಾಯನದುರ್ಗ ಬೆಟ್ಟಕ್ಕೆ ತೆರಳಿದ್ದಾರೆ. ಈ ವೇಳೆ ಅಲ್ಲಿಗೆ ಪ್ರವಾಸಕ್ಕೆ ಬಂದಿದ್ದ ಹೊರರಾಜ್ಯದ ಆರು ಮಂದಿ ಟೆಕ್ಕಿಗಳು ಸಿಕ್ಕಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಮಕ್ಕಳ ಯೂನಿಫಾರ್ಮ್, ಪಠ್ಯಪುಸ್ತಕ ಬೆಂಕಿಗಾಹುತಿ

ಸ್ಥಳೀಯರಾದ ಶಿವಪ್ರಸಾದ್, ಬೆಟ್ಟದಿಂದ ಸೂರ್ಯಾಸ್ತ ಅದ್ಭುತವಾಗಿ ಕಾಣಿಸುತ್ತದೆ ಎಂದು ಆ ಟೆಕ್ಕಿಗಳನ್ನು ತಾವೇ ದೇವಾಲಯದ ಹಿಂಭಾಗದ ಅಪಾಯಕಾರಿ ಬಂಡೆಯ ತುದಿಗೆ ಕರೆದೊಯ್ದಿದ್ದಾರೆ. ಆದರೆ, ದುರದೃಷ್ಟವಶಾತ್ ಬಂಡೆಯ ತುದಿಯಲ್ಲಿ ಹೆಜ್ಜೆ ಇಡುತ್ತಿದ್ದಂತೆ ಆಯತಪ್ಪಿ ಸುಮಾರು 50 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದಾರೆ.

ಕಾಲಿಗೆ ಗಾಯ: ಆಸ್ಪತ್ರೆಗೆ ದಾಖಲು

ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಉಪನ್ಯಾಸಕ ಶಿವಪ್ರಸಾದ್​​​ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಕಾರ್ಯಪ್ರವೃತ್ತರಾಗಿ ಅವರನ್ನು ಪ್ರಪಾತದಿಂದ ರಕ್ಷಿಸಿದ್ದು, ಇದೀಗ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕುರಿತು ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಶಾಲಾ ಆವರಣದಲ್ಲಿದ್ದ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಸರ್ಕಾರಿ ಶಾಲಾ ಆವರಣದಲ್ಲಿದ್ದ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮುತ್ತಕದಹಳ್ಳಿಯಲ್ಲಿ ನಡೆದಿದೆ. ಮರದ ಮಧ್ಯಭಾಗದಲ್ಲಿ ಒಲೆ ರೀತಿ ಮಾಡಿ ಬೆಂಕಿ ಹಚ್ಚಿದ್ದು, ಬುಡದಿಂದ ಮೇಲ್ಭಾಗದವರೆಗೂ ಮರ ಹೊತ್ತಿ ಊರಿದಿದೆ.

ಇದನ್ನೂ ಓದಿ: ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಮೊದಲಿಗೆ ಮರದಲ್ಲಿ ಬೆಂಕಿ ಕಂಡು ಆತಂಕಗೊಂಡಿದ್ದ ಗ್ರಾಮಸ್ಥರು ಬಳಿಕ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us