Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಮಹಿಳೆ ಕೊಲೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್​

ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಅನ್ಯ ಸಮುದಾಯದವರು ಬೆಂಕಿ ಹಚ್ಚಿದ ಘಟನೆಯಲ್ಲಿ ಆರೋಪಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬರೋಬ್ಬರಿ 101 ಆರೋಪಿಗಳ ಪೈಕಿ 98 ಜನರಿಗೆ ಕೊಪ್ಪಳ ಜಿಲ್ಲಾ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದು ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ದಲಿತ ಮಹಿಳೆಯನ್ನ ಕೊಲೆಗೈದಿದ್ದ 21 ಅಪರಾಧಿಗಳಿಗೆ ತುಮಕೂರು ಕೋ್ಟ್​ ಜೀವಾವಧಿ ಶಿಕ್ಷೆ ನೀಡಿದೆ.

ದಲಿತ ಮಹಿಳೆ ಕೊಲೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್​
21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on: Nov 21, 2024 | 6:27 PM

ತುಮಕೂರು, (ನವೆಂಬರ್ 21): 2010ರಲ್ಲಿ ಇಡೀ ಕರ್ನಾಟಕದಾದ್ಯಂತ ಭಾರೀ ಸುದ್ದಿಯಾಗಿದ್ದ ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿದ್ದು, ಇದೀಗ 14 ವರ್ಷಗಳ ಬಳಿಕ ಒಂದೇ ಗ್ರಾಮದ ಬರೋಬ್ಬರಿ 21 ಆರೋಪಿಗಳಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಹಾಗೂ ತಲಾ ಒಬ್ಬ ಆರೋಪಿಗೆ 13,500 ರೂಪಾಯಿ ದಂಡ ವಿಧಿಸಿದೆ.

2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆಯನ್ನು ಸವರ್ಣೀಯರು ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ‌ ಮಾಡಿದ್ದರು. ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಒಟ್ಟು 27 ಜನರ ಮೇಲೆ ಆರೋಪಿಗಳ ವಿರುದ್ಧ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ಕೊಪ್ಪಳ ದಲಿತರ ಮೇಲೆ ದೌರ್ಜನ್ಯ: 97 ಅಪರಾಧಿಗಳಿಗೆ ಜಾಮೀನು ಮಂಜೂರು

ಬಳಿಕ ಅಂದಿನ ಡಿವೈಎಸ್ ಪಿ ಶಿವರುದ್ರಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶಿಟ್ ಸಲ್ಲಿಸಿದ್ದು, ಆರೋಪ ಆರೋಪ ಸಾಬೀತಾಗಿದೆ. ನಂತರ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶ ನಾಗಿರೆಡ್ಡಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆ ದಂಡ ಹಾಕಿದ್ದಾರೆ.

ಸದ್ಯ 27 ಜನ ಆರೋಪಿಗಳ ಪೈಕಿ 6 ಜನ ಮೃತಪಟ್ಟಿದ್ದರಿಂದ 21 ಆರೋಪಿಗಳಿಗೆ ಶಿಕ್ಷೆಯಾಗಿದೆ. 21 ಜನರಲ್ಲಿ ಇಬ್ಬರು ಮಹಿಳೆಯರು, 19 ಜನ ಪುರುಷ ಆರೋಪಿಗಳು.

ಇದನ್ನೂ ಓದಿ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: 98 ಜನರಿಗೆ ಜೀವಾವಧಿ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

ಇನ್ನು ಇದರಂತೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಕೊಪ್ಪಳ ಜಿಲ್ಲೆ ಮರುಕುಂಬಿ ಗ್ರಾಮದಲ್ಲಿ ದಲಿತ ಓಣಿಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಬರೋಬ್ಬರಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್​ ಪೀಠ ಶಿಕ್ಷೆಗೆ ತಡೆ ನೀಡಿ ಆರೋಪಿಗಳಿಗೆ ಜಾಮೀನು ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ