AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ: ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!

ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ರಾಸಲೀಲೆ ನಡೆಸಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರ ಬಂಧನಾಗಿದೆ.

ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ: ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!
ಡಿವೈಎಸ್‌ಪಿ ರಾಮಚಂದ್ರಪ್ಪ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 03, 2025 | 9:10 PM

Share

ತುಮಕೂರು, (ಜನವರಿ 03): ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ: ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಅಮಾನತು

ಘಟನೆ ಹಿನ್ನೆಲೆ

ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.

ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.

ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ