AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅನೈತಿಕ ಕೃತ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಇದೀಗ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸೋಮವಾರದವರೆಗೆ ಮಧುಗಿರಿ ಜೈಲಿನಲ್ಲಿರಿಸಿ, ನಂತರ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ.

ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 04, 2025 | 5:11 PM

Share

ತುಮಕೂರು, ಜನವರಿ 04: ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ (DySP) ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ.

ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್​​ಪಿ ಆಕೆಯನ್ನ ಪುಸಲಾಯಿಸಿ ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್​​ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್​​ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ: ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!

ಯಾವಾಗ ತಮ್ಮ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಮಾಡಿದರೋ ಡಿವೈಎಸ್​ಪಿ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬಂತು. ಅಲ್ಲದೇ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ತುಮಕೂರು ಎಸ್​​ಪಿ ಅಶೋಕ್ ವೆಂಕಟ್ ರಿಪೋರ್ಟ್ ತರಿಸಿಕೊಂಡು ಮೇಲಾಧಿಕಾರಿಗಳಿಗೆ ಕಳಿಸಿದ್ದಾರೆ. ಕೂಡಲೇ ಸಂಜೆ ವೇಳೆಗೆ ಡಿಜಿ ಆ್ಯಂಡ್​ ಐಜಿಪಿ ಅಲೋಕ್ ಮೋಹನ್ ರಾಸಲಿಲೆ ಪ್ರಕರಣ ಕಂಡು ಡಿವೈಎಸ್​​ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್​ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ: ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಅಮಾನತು

ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್​ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಜಡ್ಜ್ ‌ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್​ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್