ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ಜಾತ್ರೆಗೆ ಕರೆತರಲಾಗಿದ್ದ ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಅಪಹರಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಈ ಹಿನ್ನೆಲೆ ಶಿರಾ ಪೊಲೀಸರು ಕೂಡಲೇ ವಿಶೇಷ ತಂಡ ರಚಿಸಿ, ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬೆಂಗಳೂರಿನ ಕೊರಮಂಗಲದಲ್ಲಿ ಮಗುವನ್ನು ಪತ್ತೆ ಹಚ್ಚಿ, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ.

ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!
ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಮಗುವನ್ನೇ ಕಿಡ್ನ್ಯಾಪ್ ಮಾಡಿದ್ರು!
Edited By:

Updated on: Feb 10, 2026 | 11:16 AM

ತುಮಕೂರು, ಫೆಬ್ರವರಿ 10: ಇಂದಿನ 21ನೇ ಶತಮಾನದಲ್ಲಿ ಹೆಣ್ಣು-ಗಂಡು ಸಮಾನರು ಎಂಬ ಆಲೋಚನೆ ತಕ್ಕಮಟ್ಟಿಗೆ ನಮ್ಮ ಸಮಾಜದಲ್ಲಿದೆ. ಆದರೂ ಇಲ್ಲೊಬ್ಬ ಮಹಿಳೆ ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದು, ಎರಡೂವರೆ ವರ್ಷದ ಮಗುವನ್ನೇ ಅಪರಹಿಸಿದ್ದಾಳೆ. ತುಮಕೂರಿನ (Tumkuru) ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಪರಹಿಸಲಾಗ ಮಗುವನ್ನು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಗಿದೆ.

ಜಾತ್ರೆಯಲ್ಲಿ ಕಾಣೆಯಾದ ಮಗು ಬೆಂಗಳೂರಿನಲ್ಲಿ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರೆ ವೇಳೆ ಅಪಹರಣಗೊಂಡಿದ್ದ ಎರಡುವರೆ ವರ್ಷದ ಗಂಡು ಮಗುವನ್ನು ಶಿರಾ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿ ವಾಸಿಸುವ ದಂಪತಿಯ ಮಗುವನ್ನು ಫೆಬ್ರವರಿ 1ರಂದು ಶಿರಾ ಜಾತ್ರಾ ಮಹೋತ್ಸವದ ವೇಳೆ ಅಪಹರಿಸಲಾಗಿತ್ತು. ಮಗುವನ್ನು ಅದರ ತಾತ ಪುಟ್ಟರಂಗಯ್ಯ ತಮ್ಮೊಂದಿಗೆ ಜಾತ್ರೆಗೆ ಕರೆತಂದಿದ್ದರು.

ಇದನ್ನೂ ಓದಿ ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ

ಜಾತ್ರೆಯಲ್ಲಿ ಅಂಗಡಿ ಹಾಕಿದ್ದ ತಾತನೊಂದಿಗೆ ಇದ್ದ ಮಗುವನ್ನು ನೋಡಿದ ಆರೋಪಿಗಳು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಮಗುವನ್ನು ಕರೆದೊಯ್ದಿದ್ದರು. ಈ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿರಾ ಡಿವೈಎಸ್‌ಪಿ ಶೇಖರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತು.

ಗಂಡು ಮಗು ಬೇಕೆಂಬಾಸೆಗೆ ಮಗು ಕಿಡ್ನ್ಯಾಪ್

ಕೊನೆಗೆ ಬೆಂಗಳೂರಿನ ಕೊರಮಂಗಲದಲ್ಲಿರುವ ಶಾಂತಮೇರಿ ಎಂಬ ಮಹಿಳೆಯ ಮನೆಯಲ್ಲಿ ಮಗು ಪತ್ತೆಯಾಗಿದೆ. ಆರೋಪಿ ಶಾಂತಮೇರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರೂ ಗಂಡು ಮಗು ಬೇಕೆಂಬ ಹಂಬಲದಿಂದ ಸಂಬಂಧಿ ನರಸಯ್ಯನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ರೆಗೂ ಎರಡು ದಿನ ಮೊದಲು ತುಮಕೂರಿಗೆ ಬಂದಿದ್ದ ಶಾಂತಮೇರಿ ಮತ್ತು ನರಸಯ್ಯ, ಪೂರ್ವ ಯೋಜನೆಯೊಂದಿಗೆ ಮಗುವಿನ ಅಪಹರಣ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಜಾತ್ರೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಚಲನವಲನ ಗಮನಿಸಿದ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us