ನೋಟ್ಸ್ ನೀಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ಎರಗಿದ ಕಾಮುಕ, ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಗೆಳತಿಯ ಮನೆಗೆ ನೋಟ್ಸ್ ನೀಡಲು ಬಂದಿದ್ದಳು. ಈ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಮೃಗನಂತೆ ಎರಗಿದ್ದಾನೆ. ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ.

ನೋಟ್ಸ್ ನೀಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ಎರಗಿದ ಕಾಮುಕ, ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ

ತುಮಕೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿದ್ದು ಆರೋಪಿ ಅಸ್ಲಾಂನನ್ನು ಕೊರಟಗೆರೆ ಪೊಲೀಸರು ಬಂಧಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಗೆಳತಿಯ ಮನೆಗೆ ನೋಟ್ಸ್ ನೀಡಲು ಬಂದಿದ್ದಳು. ಈ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಮೃಗನಂತೆ ಎರಗಿದ್ದಾನೆ. ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಕುಡಿಯುವ ನೀರಿಗೆ ಪ್ರಜ್ಞೆ ತಪ್ಪುವ ಔಷಧ ಬೇರಿಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಆರೋಪಿ ಅತ್ಯಾಚಾರ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗುತ್ತಿದೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಮುಂದಾಗಿದ್ದ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಘಟನೆ ಸಂಬಂಧ ಕೊರಟಗೆರೆ ಪಟ್ಟಣದ ಅಸ್ಲಾಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಇದೇ ರೀತಿ ಮತ್ತೊಂದೆಡೆ 16 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಹನುಮಂತರಾಯಪ್ಪ (24) ಎಂಬ ಯುವಕನನ್ನು ಬಂಧಿಸಲಾಗಿದೆ. ಪೋಕ್ಸೋ ಕಾಯಿದೆಯಡಿ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಡಿಪಿಒ ಅನಿತಾ ನೀಡಿರುವ ದೂರಿನಡಿ ಪ್ರಕರಣ ದಾಖಲು.

ಇದನ್ನೂ ಓದಿ: ಧಾರವಾಡದ ಕಿರೀಟಕ್ಕೆ ಮತ್ತೊಂದು ಗರಿ; ಗೋಧಿ ಹುಗ್ಗಿಗೆ ಸಿಎಫ್​ಟಿಆರ್​ಐ ಮಾನ್ಯತೆಯ ಹಿಗ್ಗು

Click on your DTH Provider to Add TV9 Kannada