ತುಮಕೂರು: ತಾಯಿ, ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ಸೆಷನ್ಸ್ ಕೋರ್ಟ್

ತುಮಕೂರು: ತಾಯಿ, ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ಸೆಷನ್ಸ್ ಕೋರ್ಟ್
ಸಾಂದರ್ಭಿಕ ಚಿತ್ರ

ಘಟನೆಯಲ್ಲಿ ತಾಯಿ ರಾಮಾಂಜಿನಮ್ಮ, ಮಗಳು ನಾಗಮಣಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಮಧುಗಿರಿ ಸೆಷನ್ಸ್ ನ್ಯಾಯಾಲಯ ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

TV9kannada Web Team

| Edited By: ganapathi bhat

Apr 07, 2022 | 2:56 PM


ತುಮಕೂರು: ತಾಯಿ ಮತ್ತು ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿ ಮಧುಗಿರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಪಾವಗಡ ತಾಲೂಕಿನ ಗೌಡೇಟಿ ಗ್ರಾಮದಲ್ಲಿ 2018 ರ ಏಪ್ರಿಲ್ 9 ರಂದು ಮಂಜುನಾಥ್ ತನ್ನ ಪತ್ನಿಯೊಂದಿಗೆ ವ್ಯಕ್ತಿಯೊಬ್ಬ ಅನೈತಿಕ ಸಂಬಂಧ ಹೊಂದಿದ್ದಾರೆಂದು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ. ಈ ವೇಳೆ ಜಗಳ ಬಿಡಿಸಲು ಹೋದ ಮಗಳಿಗೂ ಕಟ್ಟಿಗೆಯಿಂದ ಹೊಡೆದಿದ್ದ. ಘಟನೆಯಲ್ಲಿ ತಾಯಿ ರಾಮಾಂಜಿನಮ್ಮ, ಮಗಳು ನಾಗಮಣಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಮಧುಗಿರಿ ಸೆಷನ್ಸ್ ನ್ಯಾಯಾಲಯ ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ತುಮಕೂರು ಅಪರಾಧ, ಅಪಘಾತ ಸುದ್ದಿಗಳು

ಇತ್ತ, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನ ಮಧುಗಿರಿ ತಾಲೂಕಿನ ಜಡಗೊಂಡನಹಳ್ಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಸಿದ್ದು (22) ಎಂಬವರು ಸಾವನ್ನಪ್ಪಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು ಬಳಿಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮತಿಘಟ್ಟ ಗ್ರಾಮದ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೆಹಬೂಬ್ (15) ಮೃತ ದುರ್ದೈವಿ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು ಪಾವಗಡದಲ್ಲಿ ಜೂಜಾಡುತ್ತಿದ್ದ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರ ಬಳಿಯಿದ್ದ ನಗದನ್ನು ಪಾವಗಡ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಂಗಳೂರು: ಪ್ರಿಯತಮೆ ಹಾಗೂ ಶೋಕಿಗಾಗಿ ಪರಿಚಯಸ್ಥರ ಮನೆಯಲ್ಲೇ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಪ್ರಿಯತಮೆ ಹಾಗೂ ಶೋಕಿಗಾಗಿ ಪರಿಚಯಸ್ಥರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ನವೀನ್ ಕುಮಾರ್ (26) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ 4 ಲಕ್ಷ 90 ಸಾವಿರ ನಗದು, 109 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿ ನವೀನ್ ಕುಮಾರ್ ಸೆರೆ ಹಿಡಯಲಾಗಿದೆ.

ಮೈಸೂರು: ಹೊಮ್ಮರಗಳ್ಳಿ ಬಳಿ ಬೈಕ್ ಮೇಲೆ ಕೊಂಬೆ ಬಿದ್ದು ಸವಾರ ಸಾವು

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಬಳಿ ಬೈಕ್ ಮೇಲೆ ಕೊಂಬೆ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿ, ಬೆಳಗನಹಳ್ಳಿಯ ನವೀನ್​​ (18) ಸಾವನ್ನಪ್ಪಿರುವ ದುರ್ದೈವಿ. ಗಾಯಾಳು ಶಿವಮಣಿ ಹೆಚ್.ಡಿ. ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime News: ರಾತ್ರಿ ಬಸ್​ನಲ್ಲಿ ಮೈ-ಕೈ ಮುಟ್ಟಿದವನಿಗೆ ಪಿನ್​ನಲ್ಲಿ ಚುಚ್ಚಿ, ಪೊಲೀಸ್ ಠಾಣೆಗೆ ಎಳೆದೊಯ್ದ ಮಹಿಳೆ

ಇದನ್ನೂ ಓದಿ: Crime News: ಹಣಕಾಸಿನ ವಿಚಾರಕ್ಕೆ ನಡೆದ ಜಗಳದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ

Follow us on

Related Stories

Most Read Stories

Click on your DTH Provider to Add TV9 Kannada