ಪಕ್ಷದ ನಡವಳಿಕೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಎಂ.ಡಿ.ಲಕ್ಷ್ಮೀ ನಾರಾಯಣ

| Updated By: ಆಯೇಷಾ ಬಾನು

Updated on: Aug 31, 2022 | 1:58 PM

ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಘೋಷಿಸಿದ್ದಾರೆ.

ಪಕ್ಷದ ನಡವಳಿಕೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಎಂ.ಡಿ.ಲಕ್ಷ್ಮೀ ನಾರಾಯಣ
ಎಂ.ಡಿ.ಲಕ್ಷ್ಮೀ ನಾರಾಯಣ
Follow us on

ತುಮಕೂರು: ಕಾಂಗ್ರೆಸ್ ಪಕ್ಷಕ್ಕೆ ಎಂ.ಡಿ.ಲಕ್ಷ್ಮೀ ನಾರಾಯಣ ರಾಜೀನಾಮೆ ನೀಡುವುದಾಗಿ ಸುದ್ದಿಗೋಷ್ಠಿ ನಡೆಸಿ ಲಕ್ಷ್ಮೀ ನಾರಾಯಣ ಘೋಷಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದೇನೆ. ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಎಂ.ಡಿ.ಲಕ್ಷ್ಮೀನಾರಾಯಣ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ತಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವ ಬಗ್ಗೆ ಘೋಷಿಸಿದ್ದಾರೆ. ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ, ಡಿಕೆ ಶಿವಕುಮಾರ್​ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ರಾಜೀನಾಮೆ ನೀಡುತ್ತೆದೇನೆ ಎಂದು ಒಕ್ಕಣೆ ಬರೆದಿದ್ದಾರೆ. ಹಾಗೂ ಮುಂದಿನ ದಿನದಲ್ಲಿ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ