AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣಕ್ಕೆ ಸರ್ಕಾರಕ್ಕೆ ಸೋಮಣ್ಣ ಪತ್ರ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸ್ವಾಮೀಜಿಗಳ ಹೆಸರಿಡುವುದರಿಂದ ಅವರ ಸ್ಮರಣೆ ಉಳಿಯುವುದಲ್ಲದೆ, ಯುವಜನರಿಗೆ ಸ್ಪೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ.

ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣಕ್ಕೆ ಸರ್ಕಾರಕ್ಕೆ ಸೋಮಣ್ಣ ಪತ್ರ
ವಿ ಸೋಮಣ್ಣ
Jagadisha B
| Updated By: ವಿವೇಕ ಬಿರಾದಾರ|

Updated on:Aug 23, 2025 | 9:31 PM

Share

ಬೆಂಗಳೂರು, ಆಗಸ್ಟ್​ 23: ತುಮಕೂರು ವಿಶ್ವವಿದ್ಯಾಲಯಕ್ಕೆ (Tumakuru University) ಡಾ. ಶಿವಕುಮಾರ ಸ್ವಾಮೀಜಿ (Shivakumar Swamiji) ಹೆಸರು ಮರು ನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

“ಕರ್ನಾಟಕ ರತ್ನ, ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರು ಎಂದೆನಿಸಿದ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬರುವ ಎಲ್ಲಾ ವರ್ಗದ ಸಹಸ್ರಾರು ಕುಟುಂಬಗಳಿಗೆ ನೆರವಾಗಿ ಉಚಿತ ಶಿಕ್ಷಣ, ವಸತಿ ಮತ್ತು ದಾಸೋಹ ಕಲ್ಪಿಸುವುದರೊಂದಿಗೆ ಅವರೆಲ್ಲರೂ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕಾರಣೀಭೂತರಾಗಿದ್ದಾರೆ. ಇಂತಹ ಶ್ರೇಷ್ಠ ಸಂತರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವುದರ ಮೂಲಕ ಪೂಜ್ಯರಿಗೆ ಗೌರವ ಸಲ್ಲಿಸಬೇಕಾಗಿದೆ”

ಇದನ್ನೂ ಓದಿ: ಸತ್ಯ ಎಷ್ಟೇ ಕಹಿಯಾದರೂ ಅದು ಸತ್ಯವೇ, ಸರ್ಕಾರಕ್ಕೆ ಅರ್ಥವಾಗಲಿಲ್ಲ: ಸೋಮಣ್ಣ

“ಆದುದರಿಂದ ತಾವುಗಳು ದಯಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ “ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ” ವಿಶ್ವವಿದ್ಯಾಲಯ ಎಂದಯ ಮರುನಾಮಕರಣ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತುಮಕೂರು ಜಿಲ್ಲೆಯ ಮಹಾಜನತೆಯ ಪರವಾಗಿ ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಪತ್ರ ಬರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Sat, 23 August 25