Tumakuru: ಕಷ್ಟಪಟ್ಟು ನೆಟ್ಟಿದ್ದ 400ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು

ಜಿಲ್ಲೆಯ ಶಿರಾ ತಾಲೂಕಿನ ಯರದಕಟ್ಟೆಯಲ್ಲಿ 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು(areca plants) ದುಷ್ಕರ್ಮಿಗಳು ಕಡಿದು ಹಾಕಿದ ಘಟನೆ ನಡೆದಿದೆ. ಗಿಣ್ಣಪ್ಪನಹಟ್ಟಿ ಗ್ರಾಮದ ಹನುಮಂತಯ್ಯ ಅವರಿಗೆ ಸೇರಿದ ಅಡಿಕೆ ಗಿಡಗಳು ಇದಾಗಿದ್ದು, 2 ವರ್ಷದ ಹಿಂದೆ 1100ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನೆಟ್ಟಿ ಬೆಳೆಸಿದ್ದರು.

Tumakuru: ಕಷ್ಟಪಟ್ಟು ನೆಟ್ಟಿದ್ದ 400ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದ ದುಷ್ಕರ್ಮಿಗಳು
ತುಮಕೂರಿನಲ್ಲಿ ಅಡಿಕೆ ಬೆಳೆ ನಾಶ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 04, 2023 | 9:20 AM

ತುಮಕೂರು: ಜಿಲ್ಲೆಯ ಶಿರಾ(Sira) ತಾಲೂಕಿನ ಯರದಕಟ್ಟೆಯಲ್ಲಿ 400ಕ್ಕೂ ಹೆಚ್ಚು ಅಡಕೆ ಗಿಡಗಳನ್ನು(areca plants) ದುಷ್ಕರ್ಮಿಗಳು ಕಡಿದು ಹಾಕಿದ ಘಟನೆ ನಡೆದಿದೆ. ಗಿಣ್ಣಪ್ಪನಹಟ್ಟಿ ಗ್ರಾಮದ ಹನುಮಂತಯ್ಯ ಅವರಿಗೆ ಸೇರಿದ ಅಡಿಕೆ ಗಿಡಗಳು ಇದಾಗಿದ್ದು, 2 ವರ್ಷದ ಹಿಂದೆ 1100ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನೆಟ್ಟು, ಮಗುವಿನಂತೆ ಫೋಷಿಸುತ್ತಾ ಬಂದಿದ್ದರು. ಅದರಲ್ಲೀಗ 400ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನ ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಈ ಕುರಿತು ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತರೊಬ್ಬರು ಕಷ್ಟಪಟ್ಟು ಬೆಳೆದ ಅಡಿಕೆ ಮರಗಳಿಗೆ ದುಷ್ಕರ್ಮಿಗಳಿಂದ ಕತ್ತರಿ

ಹಾವೇರಿ: ಇಂತಹ ಘಟನೆಗಳು ಇದೇ ಮೊದಲಲ್ಲ, ಅನೇಕ ಬಾರಿ ನಡೆಯುತ್ತಾ ಬಂದಿದೆ. ಆಳೆತ್ತರಕ್ಕೆ ಬಂದ, ಇನ್ನೇನು ಫಸಲು ನೀಡಬೇಕು ಅನ್ನುವಷ್ಟರಲ್ಲಿ ನೂರಾರು ಅಡಿಕೆ ಮರಗಳನ್ನು ಕಡಿದು ದುಷ್ಕೃತ್ಯ ಮೆರೆದಿದ್ದಾರೆ. ಹೌದು ಇತ್ತೀಚೆಗಷ್ಟೇ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸುನೂರು ಗ್ರಾಮದ ಅಡಿವೆಪ್ಪ ಆಲದಕಟ್ಟಿ ಎಂಬ ರೈತರೊಬ್ಬರು ತಮ್ಮ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಬೆಳಿಸಿದ್ದರು. ಕಳೆದ ದೀಪಾವಳಿಯಂದು ಹಬ್ಬ ಆಚರಿಸುವುದರಲ್ಲಿ ಕುಟುಂಬದವರು ಮಗ್ನರಾಗಿದ್ದರು. ಇದೇ ಸಮಯಕ್ಕೆ ಕಾದಿದ್ದ ಕಿಡಿಗೇಡಿಗಳು ತೋಟಕ್ಕೆ ನುಗ್ಗಿ ಅಡಿಕೆ ಗಿಡಗಳನ್ನು ಕತ್ತರಿಸಿ ಹಾಕಿದ್ದರು. ಈ ಕುರಿತು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಉತ್ತರ ಕನ್ನಡದಲ್ಲಿ 350ಕ್ಕೂ ಹೆಚ್ಚು ಅಡಕೆ ಮರಗಳ ಮಾರಣಹೋಮ! ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆರೋಪ

ಫಸಲಿಗೆ ಬಂದಿದ್ದ 500 ಕ್ಕೂ ಹೆಚ್ಚು ಅಡಿಕೆ ಮರಗಳ ನಾಶ

ಇನ್ನು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಜ್ಜೇನಹಳ್ಳಿಯಲ್ಲಿ ಫಸಲಿಗೆ ಬಂದಿದ್ದ 500 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ್ದರು. ಬೆಳಿಗ್ಗೆ ಅಡಿಕೆ ಮರಗಳಿಗೆ ನೀರು ಹಾಯಿಸಲು ಹೋದಾಗ ಕೃತ್ಯ ಬೆಳಕಿಗೆ ಬಂದಿತ್ತು. ಈ ಕುರಿತು ಹಳೇಬೀಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?