ತುಮಕೂರು, ಅ.22: ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ (MLA Dr Ranganath) ಅವರು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡಿ ಅನೇಕರ ಬಾಳಿಗೆ ಬೆಳಕಾಗಿದ್ದಾರೆ. ಈಗ ಮತ್ತೊಮ್ಮೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮಂಡಿ ನೋವಿನಿಂದ ಬಳಲುತ್ತಿದ್ದ ಮಹಿಳಾ ಕ್ರೀಡಾಪಟುವಿಗೆ ಉಚಿತವಾಗಿ ಖುದ್ದಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಶಾಸಕ ಡಾ. ರಂಗನಾಥ್ ಅವರು ಮತ್ತೊಮ್ಮೆ ಮಾನವೀಯತೆಯನ್ನು ಮೆರೆದಿದ್ದಾರೆ.
ಕುಣಿಗಲ್ ನಿವಾಸಿ ರಗ್ಬಿ ಆಟಗಾರ್ತಿಯಾಗಿರುವ ಭವ್ಯ ಅವರಿಗೆ ಮಂಡಿ ನೋವಿನ ಚಿಕಿತ್ಸೆಯ ಅಗತ್ಯವಿತ್ತು. ಬಡತನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಹಣ ಒದಗಿಸಲು ಕುಟುಂಬ ಸಂಕಷ್ಟ ಎದುರಿಸುತ್ತಿತ್ತು. ಈ ವಿಚಾರ ಶಾಸಕರ ಗಮನಕ್ಕೆ ಬಂದ ಕೂಡಲೇ, ಮಂಡಿ ನೋವಿನಿಂದ ಬಳಲುತ್ತಿದ್ದ ಭವ್ಯಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಸ್ವತಃ ಶಾಸಕ ಡಾ ರಂಗನಾಥ್ ಅವರೇ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ರಂಗನಾಥ್ ತಂಡ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಭವ್ಯಾ ಕುಟುಂಬ ಶಾಸಕರಿಗೆ ಕೃತಜ್ಞತೆಯನ್ನು ಸಲ್ಲಿಸಿದೆ. ಶಾಸಕ ರಂಗನಾಥ್ ಅವರು ಈ ಹಿಂದೆ ತನ್ನ ಕ್ಷೇತ್ರದ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಾಸಕ ಡಾ ರಂಗನಾಥ್ ಕಾರ್ಯ ವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‘
ಇದನ್ನೂ ಓದಿ: Dr Ranganath: ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಆಪರೇಷನ್ ಮಾಡಿ ಜನ ಮನ ಗೆದ್ದ ಕುಣಿಗಲ್ ಕಾಂಗ್ರೆಸ್ ಶಾಸಕ
ಮೂಲತಃ ವೈದ್ಯರಾದ ಡಾ.ರಂಗನಾಥ್ ಅವರು ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾದ ಬಳಿಕವೂ ತಮ್ಮ ಕ್ಷೇತ್ರದ ಹಲವರಿಗೆ ಉಚಿತ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ. ಕೊರೊನಾ ಸಮಯದಲ್ಲೂ ಸಂಕಷ್ಟ ಎದುರಿಸುತ್ತಿದ್ದ ಅನೇಕರಿಗೆ ಶಾಸಕ ಡಾ.ರಂಗನಾಥ್ ಚಿಕಿತ್ಸೆ ನೀಡಿ ಮನವೀಯತೆ ಮೆರೆದಿದ್ದರು. ಈ ಹಿಂದೆ ತಮ್ಮ ಕ್ಷೇತ್ರದ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿಯ ಕಲ್ಲನಾಯಕನಹಳ್ಳಿಯ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದರು. ಅದರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿತ್ತು. ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ಕಂಡ ಶಾಸಕ ಡಾ.ರಂಗನಾಥ್, ಗಾಯಾಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕಳಿಸಿ ತಾವೂ ಆಸ್ಪತ್ರೆಗೆ ತೆರಳಿ ತಾವೇ ಖುದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ್ದಿದ್ದರು.