ತುಮಕೂರು, ಮಾ.23: ಲೋಕಸಭಾ ಚುನಾವಣೆ(Lok sabha Election) ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದೆ. ಈ ಮಧ್ಯೆ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಎಂಬ ಪ್ರಶ್ನೆ ಮೂಡಿದೆ. ಹೌದು, ತಿಟಟೂರಿನಲ್ಲಿ(Tiptur) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಮುಖ್ಯಮಂತ್ರಿ ರಾಜೀನಾಮೆ ವಿಷಯವನ್ನ ಪ್ರಸ್ತಾಪ ಮಾಡಿದ್ದಾರೆ.
ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಿನ್ನಲೆ ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಉಳಿಸುವ ಕೆಲಸ ನಾವೆಲ್ಲ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ ಫಲಿತಾಂಶ ಏನೇ ಆಗಲಿ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆ ಉದ್ಭವಿಸಲ್ಲ: ಡಿಕೆ ಶಿವಕುಮಾರ್
ಇನ್ನು ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೇ ಮಾ.17 ರಂದು ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಕಳೆದ ಮಾ.4 ರಂದು ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಸಿಡಿಪಿಓ ಮಹೇಶ್, ತಮ್ಮ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲರ ಎದುರೇ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದ ಶಾಸಕ. ಅವಾಚ್ಯ ಶಬ್ಧಗಳಿಂದಲೂ ಸರ್ಕಾರಿ ಅಧಿಕಾರಿಯನ್ನ ನಿಂದಿಸಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:52 am, Sat, 23 March 24