ತುಮಕೂರು: ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುಮಕೂರು: ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಸಾಂದರ್ಭಿಕ ಚಿತ್ರ

ಮೊದಲಿಗೆ ಸಾಂಬಾರ್ನಲ್ಲಿ ಹುಳುಗಳು ಕಂಡು ಬಂದಿದ್ದವು ಎನ್ನಲಾಗಿದೆ. ಹುಳುಗಳು ಕಂಡು ಕೆಲ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಆದ್ರೆ ಊಟ ಸೇವಿಸಿದ್ದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.

TV9kannada Web Team

| Edited By: Ayesha Banu

Mar 07, 2022 | 9:00 PM

ತುಮಕೂರು: ಮಧುಗಿರಿ ತಾಲೂಕಿನ ಹೊನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಶುರುವಾಗಿದ್ದು ವಿದ್ಯಾರ್ಥಿಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಡಿಡಿಪಿಐ ರೇವಣಸಿದ್ದಪ್ಪ ಅಸ್ವಸ್ಥ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಮೊದಲಿಗೆ ಸಾಂಬಾರ್ನಲ್ಲಿ ಹುಳುಗಳು ಕಂಡು ಬಂದಿದ್ದವು ಎನ್ನಲಾಗಿದೆ. ಹುಳುಗಳು ಕಂಡು ಕೆಲ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಆದ್ರೆ ಊಟ ಸೇವಿಸಿದ್ದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ನೇರಳೆಕೆರೆ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಧುಗಿರಿ ಡಿಡಿಪಿಐ ರೇವಣಸಿದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅರಣ್ಯ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ನೋಟಿಸ್ ನೀಡದೇ ಏಕಾಏಕಿ ರೈತನ ಜಮೀನು ತೆರವು ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತಿರುಗಿ ಬಿದ್ದಿದ್ದಾರೆ. ಜಮೀನು ತೆರವು ವೇಳೆ ಅರಣ್ಯ ಅಧಿಕಾರಿಗಳಿಂದ ನೂರಕ್ಕೂ ಹೆಚ್ಚು ಅಡಿಕೆ, ತೆಂಗು ನಾಶವಾಗಿದೆ ಹೀಗಾಗಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ. ತೆರವುಗೊಳಿಸಿದ್ದ ಅಡಿಕೆ, ತೆಂಗಿನ ಮರಗಳ ಸಮೇತ, ಗುಬ್ಬಿ ತಹಶೀಲ್ದಾರ್ ಕಚೇರಿಗೆ ರೈತ ಕುಟುಂಬ ಆಗಮಿಸಿ ಪ್ರತಿಭಟನೆ ನಡೆಸಿದೆ.

ಟ್ರ್ಯಾಕ್ಟರ್ ಮೂಲಕ ತೆರವು ಗೊಳಿಸಿದ್ದ ಅಡಿಕೆ, ತೆಂಗಿನ ಮರಗಳನ್ನ ತುಂಬಿಕೊಂಡು ಬಂದ ರೈತರು ನ್ಯಾಯ ಕೊಡಿಸುವಂತೆ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಗುಬ್ಬಿ ಅರಣ್ಯ ಸಂರಕ್ಷಣಾ ಅಧಿಕಾರಿ ದುಗ್ಗಪ್ಪನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಭಾರಿ ಅನ್ಯಾಯವಾದರೂ ನಮ್ಮ ಸಂಸದರು ಮತ್ತು ಸರ್ಕಾರ ಮೌನ: ಸಿದ್ದರಾಮಯ್ಯ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಹಾಲಿ ಸಚಿವ ಆನಂದ್ ಸಿಂಗ್, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

Follow us on

Related Stories

Most Read Stories

Click on your DTH Provider to Add TV9 Kannada