ತುಮಕೂರು: ಬ್ಯಾಂಕ್​ನಲ್ಲಿದ್ದ ಹಣಕ್ಕಾಗಿ ಇಸ್ತ್ರಿ ಪೆಟ್ಟಿಗೆಯಿಂದ ಮಗಳ ತೊಡೆ ಸುಟ್ಟ ದೊಡ್ಡಮ್ಮ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬ್ಯಾಂಕ್​ನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿದ್ದಾಳೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರು: ಬ್ಯಾಂಕ್​ನಲ್ಲಿದ್ದ ಹಣಕ್ಕಾಗಿ ಇಸ್ತ್ರಿ ಪೆಟ್ಟಿಗೆಯಿಂದ ಮಗಳ ತೊಡೆ ಸುಟ್ಟ ದೊಡ್ಡಮ್ಮ
ನರಸಮ್ಮ, ಸುಟ್ಟ ಗಾಯ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on:Mar 13, 2024 | 12:26 PM

ತುಮಕೂರು, ಮಾರ್ಚ್​ 13: ಬ್ಯಾಂಕ್​ನಲ್ಲಿ ಬಾಲಕಿಯ ಹೆಸರಿನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಘಟನೆ ಶಿರಾ (Sira) ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ. ಲಕ್ಷ್ಮೀ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮೃತ ತಾಯಿ ನರಸಮ್ಮ ಹಾಗೂ ಬಾಲಕಿ ಲಕ್ಷ್ಮೀ ಹೆಸರಿನಲ್ಲಿ ಜಂಟಿ ಖಾತೆ (Joint Account) ಇತ್ತು. ಮೃತ ತಾಯಿ ತನ್ನ ಮಗಳಿಗಾಗಿ ನಾಲ್ಕು ಲಕ್ಷ ಫಿಕ್ಸ್ ಡೆಪಾಸಿಟ್ ಮಾಡಿದ್ದರು. ಇದು ನರಸಮ್ಮ ಅವರ ಕಣ್ಣು ಕುಕ್ಕುವಂತೆ ಮಾಡಿತು. ಹೀಗಾಗಿ ನರಸಮ್ಮ ಶಿವರಾತ್ರಿ ಹಬ್ಬಕ್ಕೆಂದು (ಮಾ.09) ಲಕ್ಷ್ಮೀಯನ್ನು ತಮ್ಮ ಊರಿಗೆ ಕರೆಸಿದ್ದಾಳೆ.

ಬಳಿಕ ನರಸಮ್ಮ ಚೆಕ್​ಗೆ ಸಹಿ‌ ಮಾಡು ಅಂತ ಬಾಲಕಿ ಲಕ್ಷ್ಮೀಗೆ ಕಿರುಕುಳ ನೀಡಿದ್ದಾಳೆ. ಆದರೂ ಬಾಲಕಿ ಲಕ್ಷ್ಮೀ ಒಪ್ಪದಿದ್ದಾಗ ನರಸಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಬಾಲಕಿ ಲಕ್ಷ್ಮೀ ತೊಡೆಗೆ ಸುಟ್ಟಿದ್ದಾಳೆ. ನಂಜಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟದ್ದಾಳೆ. ಈ ವೇಳೆ ಬಾಲಕಿ ಲಕ್ಷ್ಮೀ ಕಿರುಚದಂತೆ ನಂಜಮ್ಮ ಮಗ ಬಸವರಾಜ್​ ಆಕೆಯ ಬಾಯಿ ಮುಚ್ಚಿದ್ದಾನೆ.

ಇದನ್ನೂ ಓದಿ: ಪ್ರಯಾಣಿಸುತ್ತಿದ್ದ ಮಹಿಳೆಗೆ KSRTC ಬಸ್​ನಲ್ಲಿ ಕಂಡಕ್ಟರ್​ನಿಂದ ಲೈಂಗಿಕ ಕಿರುಕುಳ

ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದೊಡ್ಡಮ್ಮ ನರಸಮ್ಮ ಮತ್ತು ಮಗ ಬಸವರಾಜ್​ ವಿರುದ್ಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ 323, 324, 504, 506, 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡ ಬಾಲಕಿ ಲಕ್ಷ್ಮೀಯನ್ನು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ  ವಿಧಾನಪರಿಷತ್​ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ, ಘಟನೆ ಬಗ್ಗೆ ಬಾಲಕಿ ಲಕ್ಷ್ಮೀಯಿಂದ ಮಾಹಿತಿ ಪಡೆದುಕೊಂಡರು. ಮಕ್ಕಳ ರಕ್ಷಣಾಧಿಕಾರಿಗಳ‌ ಜೊತೆ ಚರ್ಚೆ ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು. ಬಾಲಕಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:12 am, Wed, 13 March 24