ತುಮಕೂರು: ಯಲಗಲವಾಡಿ ಕೆರೆಯಲ್ಲಿ ಮುಳುಗಿ ತಾಯಿ, ಮಗ ಸಾವು
ತಾಯಿ ಮತ್ತು ಮಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಗಲವಾಡಿ ಗ್ರಾಮದಲ್ಲಿ ನಡೆದಿದೆ. ಮಗ ಶಾಲೆಗೆ ಹೋಗುತ್ತಿಲ್ಲ ಎಂದು ಮನೆಯಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಈ ಜಗಳದಿಂದ ಬೇಸತ್ತು ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ತುಮಕೂರು, ಸೆ.8: ತಾಯಿ ಮತ್ತು ಮಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ (Tumkur) ಕುಣಿಗಲ್ ತಾಲೂಕಿನ ಯಲಗಲವಾಡಿ ಗ್ರಾಮದಲ್ಲಿ ನಡೆದಿದೆ. ಮಗ ಶಾಲೆಗೆ ಹೋಗುತ್ತಿಲ್ಲ ಎಂದು ಮನೆಯಲ್ಲಿ ಪ್ರತಿನಿತ್ಯ ಜಗಳ ನಡೆಯುತ್ತಿತ್ತು. ಈ ಜಗಳದಿಂದ ಬೇಸತ್ತು ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮಂಗಳಗೌರಮ್ಮ (40) ಮತ್ತು ಈಕೆಯ ಮಗ ರುದ್ರೇಶ್ (13) ಮೃತರು.
ಅನಾರೋಗ್ಯ ಹಿನ್ನೆಲೆ ರುದ್ರೇಶ್ ಶಾಲೆಗೆ ಹೋಗದೆ ಮನೆಯಲ್ಲಿರುತ್ತಿದ್ದನು. ಈ ವಿಚಾರವಾಗಿ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಅದರಂತೆ ಇಂದು ಕೂಡ ಜಗಳ ನಡೆದಿದ್ದು, ಬಳಿಕ ಕೆರೆಯತ್ತ ರುದ್ರೇಶ್ ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮಗನ ಹಿಂದೆ ಹೋಗಿ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 16 ಮಂದಿ ಅರೆಸ್ಟ್
ಬೀದರ್: ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು 16 ಮಂದಿಯನ್ನು ಬಂಧಿಸಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಅಖಾಡಕ್ಕಿಳಿದಿದ್ದು.
ಇದನ್ನೂ ಓದಿ: ತುಮಕೂರು: ಶಿರಾದ ಚಿಕ್ಕಕೆರೆ ಬಾವಿಯಲ್ಲಿ ಎರಡು ಅಪರಿಚಿತ ಶವಗಳು ಪತ್ತೆ
ಅದರಂತೆ, ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 3 ಪ್ರಕರಣಗಳು, ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣಗಳು, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ 2 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಒಟ್ಟು 9 ಪ್ರಕರಣದಲ್ಲಿ 16 ಜನ ಆರೋಪಿಗಳನ್ನು ಬಂಧಿಸಿ 29 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Fri, 8 September 23