AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸಾರ್ವಜನಿಕರಿಗೆ ಬಿತ್ತು ತೆರಿಗೆ ಬರೆ; ಪಾಲಿಕೆಯ ಹೊಸ ನೀತಿಗೆ ಜನ ಕಂಗಾಲು

ತುಮಕೂರು ಮಹಾನಗರ ಪಾಲಿಕೆ ಯುಜಿಡಿ, ನೀರು ಮತ್ತು ಆಸ್ತಿ ತೆರಿಗೆ ದರಗಳನ್ನು ದಿಢೀರ್ ಹೆಚ್ಚಿಸಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. ಇಸ್ರೇಲ್-ಇರಾನ್ ಯುದ್ಧ ಹಾಗೂ ಬೆಲೆ ಏರಿಕೆ ಸಮಸ್ಯೆಯ ನಡುವೆ ಈ ನಿರ್ಧಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 10 ವರ್ಷಗಳ ಬಳಿಕ ಏರಿದ ಶುಲ್ಕಕ್ಕೆ ಪಾಲಿಕೆ ನಿಯಮಗಳನ್ನು ಉಲ್ಲೇಖಿಸಿದರೂ, ಜನರಿಗೆ ಇದು ನುಂಗಲಾರದ ತುತ್ತಾಗಿದೆ.

ತುಮಕೂರು: ಸಾರ್ವಜನಿಕರಿಗೆ ಬಿತ್ತು ತೆರಿಗೆ ಬರೆ; ಪಾಲಿಕೆಯ ಹೊಸ ನೀತಿಗೆ ಜನ ಕಂಗಾಲು
ತುಮಕೂರು ಮಹಾನಗರ ಪಾಲಿಕೆImage Credit source: tv9 kannada
ಜಗದೀಶ ಬಿ.
| Edited By: |

Updated on: Apr 06, 2026 | 8:06 PM

Share

ತುಮಕೂರು, ಏಪ್ರಿಲ್​ 06: ಸದ್ಯ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಹೊಡೆತ ಎಲ್ಲೆಡೆ ತಟ್ಟಿದೆ. ಅನಿಲ ಅಭಾವದಿಂದ ಜನ ತತ್ತರಿಸಿದ್ದಾರೆ. ಅತ್ತ ಅಡುಗೆ ಅನಿಲ ಕೊರತೆ ಉಂಟಾದರೆ, ಇತ್ತ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ಮಧ್ಯೆ ಮುಂದೇನಾಗುತ್ತೋ ಎಂಬ ಆತಂಕದಲ್ಲಿರುವ ತುಮಕೂರು (tumakuru) ನಗರದ ಜನರಿಗೆ ಪಾಲಿಕೆ ಈಗ ಶಾಕ್ ಕೊಟ್ಟಿದೆ. ತುಮಕೂರು ಮಹಾನಗರ ಪಾಲಿಕೆ ತೆರಿಗೆ ದರವನ್ನು (tax hike) ದಿಢೀರ್ ಏರಿಕೆ ಮಾಡಿದೆ. ಯುಜಿಡಿ, ನೀರಿನ ತೆರಿಗೆ ಸೇರಿದಂತೆ ಹಲವು ಶುಲ್ಕಗಳಲ್ಲಿ ಭಾರೀ ಏರಿಕೆಯಾಗಿದ್ದು, ಜನ ಕಂಗಾಲಾಗಿದ್ದಾರೆ.

ಮಹಾನಗರ ಪಾಲಿಕೆಯಿಂದ ದಿಢೀರ್ ತೆರಿಗೆ ದರ ಹೆಚ್ಚಳ

ತುಮಕೂರು ನಗರದ ಜನರಿಗೆ ಪಾಲಿಕೆಯಿಂದ ತೆರಿಗೆ ಶಾಕ್ ಎದುರಾಗಿದೆ. ಕಳೆದ 10 ವರ್ಷಗಳಿಂದ ಏರಿಕೆಯಾಗದ ಯುಜಿಡಿ ಮತ್ತು ನೀರಿನ ತೆರಿಗೆ ದರವನ್ನು ಮಹಾನಗರ ಪಾಲಿಕೆ ಈ ವರ್ಷ ದಿಢೀರ್ ಹೆಚ್ಚಳ ಮಾಡಿದೆ. ಈ ಮೂಲಕ 2026-27ನೇ ಸಾಲಿನ ಆಸ್ತಿ ತೆರಿಗೆಯ ಮೇಲೂ ಶೇಕಡ 5ರಷ್ಟು ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ಹೊಸ ದರ ಜಾರಿಯಾಗಿದೆ. ಆದರೆ ಜನರಿಗೆ ತುಮಕೂರು ಮಹಾನಗರ ಪಾಲಿಕೆಯ ಈ ಲೆಕ್ಕಾಚಾರವೇ ಕಂಗಾಲಾಗಿಸಿದೆ.

ಇದನ್ನೂ ಓದಿ: ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ಯುಜಿಡಿ ತೆರಿಗೆ 480 ರೂ ಇಂದ ನೇರವಾಗಿ 1,440 ರೂ.ಗೆ ಏರಿಕೆಯಾಗಿದೆ. ಇದೇ ರೀತಿ ನೀರಿನ ತೆರಿಗೆ 2,400 ರೂ, ಇಂದ 3,600 ರೂ. ಗೆ ಹೆಚ್ಚಳ ಕಂಡಿದೆ. ಖಾತಾ ವರ್ಗಾವಣೆ ಶುಲ್ಕವೂ 100 ರೂಪಾಯಿಯಿಂದ 200 ರೂಪಾಯಿಗೆ ಡಬಲ್ ಆಗಿದೆ. ದಿಢೀರ್ ಏರಿಕೆಯ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಒಂದು ಕಡೆ ಹಣ ಕೊಡುತ್ತೇವೆ ಅಂತ ಹೇಳಿ ಗ್ಯಾರಂಟಿ ಯೋಜನೆ ಅಂತ ಎರಡು ಸಾವಿರ ರೂ ಕೊಟ್ಟು, ಇನ್ನೊಂದು ಕಡೆ ತೆರಿಗೆ ರೂಪದಲ್ಲಿ ನಮ್ಮಿಂದಲೇ ಹಣ ವಾಪಸ್ ಪಡೆಯುತ್ತಿದ್ದಾರೆ. ಪಾಶ್ಚಿಮಾತ್ಯದ ಯುದ್ಧ ಪರಿಸ್ಥಿತಿ, ಬೆಲೆ ಏರಿಕೆ ಸಮಸ್ಯೆಗಳ ನಡುವೆ ಈ ತೆರಿಗೆ ಹೆಚ್ಚಳ ಸರಿಯಲ್ಲ ಎಂದು ಚಾಂದ್ ಪಾಷ ಎನ್ನುವವರು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾಲಿಕೆ ಆಯುಕರು ಹೇಳುವುದೇನು?

ಮಹಾನಗರ ಪಾಲಿಕೆ ಆಯುಕ್ತೆ ಶುಭ ಅವರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. 10 ವರ್ಷಗಳಿಂದ ಏರಿಕೆಯಾಗದ ಯುಜಿಡಿ ಮತ್ತು ನೀರಿನ ತೆರಿಗೆ ದರವನ್ನು ಸರ್ಕಾರದ ನಿಯಮದಂತೆ ಈ ವರ್ಷ ಹೆಚ್ಚಿಸಲಾಗಿದೆ ಎಂದಿದ್ದಾರೆ. ಜೊತೆಗೆ, ಪ್ರತಿ ವರ್ಷದಂತೆ ಶೇಕಡ 5ರಷ್ಟು ಆಸ್ತಿ ತೆರಿಗೆ ಏರಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ ತಿಂಗಳಲ್ಲೇ ತೆರಿಗೆ ಪಾವತಿಸಿದರೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ಒಟ್ಟಾರೆ, ತೆರಿಗೆ ಏರಿಕೆಗೆ ಕಾರಣ ಕೊಟ್ಟ ಪಾಲಿಕೆ ಕಡ್ಡಾಯ ಪಾವತಿಗೆ ಸೂಚಿಸಿದ್ದು, ಏಪ್ರಿಲ್​ ವಿನಾಯಿತಿಯ ಲೆಕ್ಕಾಚಾರ ನೀಡಿದೆ. ಆದರೆ ತೆರಿಗೆ ಹೆಚ್ಚಳದ ಬಳಿಕ ಕೊಟ್ಟ ಈ ಆಫರ್ ಜನರಿಗೆ ನುಂಗಲಾರದ ತುತ್ತಾಗಿದ್ದು, ಪಾಲಿಕೆಯ ಚಿಂತನೆಗೆ ಜನ, ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್