ತುಮಕೂರು: ಇಲ್ಲಿನ ಭೀಮಾನಾಯ್ಕನ ತಾಂಡಾದಲ್ಲಿ ತಡರಾತ್ರಿ ಜೋಡಿ ಕೊಲೆಯಾದ ದುರ್ಘಟನೆ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ (46) ಹಾಗೂ ಸೋಮೇಶ್ವರ್ ನಾಯ್ಕ (35) ಕೊಲೆಯಾದವರು. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಶೋಕ್ ನಾಗರಾಜ್ ನಾಯ್ಕ್ ಎಂಬವರ ಬಳಿ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ಸಾಲದ ಹಣ ವಾಪಸ್ ಕೊಡದ ವಿಚಾರಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ. ನಾಗರಾಜ್ ನಾಯ್ಕ್ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಿನ್ನೆ ಮಧ್ಯರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ನಾಗರಾಜ ನಾಯ್ಕ ತನ್ನದೇ ಟಾಟಾ ಏಸ್ ವಾಹನದಿಂದ ಡಿಕ್ಕಿ ಹೊಡೆದು ಕೊಲೆ ಮಾಡಿರೋ ಆರೋಪ ಕೇಳಿಬಂದಿದದೆ. ಇದೀಗ ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ಆರಂಭಿಸಿದ್ದಾರೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಆನೇಕಲ್: ತಲೆಗೆ ಪೆಟ್ಟು ಬಿದ್ದು ಯುವಕ ಸಾವು
ಬೆಂಗಳೂರಿನ ಅತ್ತಿಬೆಲೆ ಬಳಿಯ ದಾಸನಪುರದಲ್ಲಿ ತಲೆಗೆ ಪೆಟ್ಟು ಬಿದ್ದು ಸುರೇಶ್ (23) ಎಂಬವರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮನೆಯಲ್ಲಿ ಪೋಷಕರ ಜತೆ ಜಗಳ ವೇಳೆ ತಲೆಗೆ ಪೆಟ್ಟು ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಪೋಷಕರ ಜತೆ ಜಗಳವಾಡಿದ್ದ ಎಂದು ಶಂಕೆ ಉಂಟಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ದೌಡಾಯಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು: ಪತಿಯಿಂದ ಹಲ್ಲೆಗೊಳಗಾಗಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವು
ಬಾಡಿಗೆ ಹಣ ಒಡವೆಗಾಗಿ ಖರ್ಚು ಮಾಡಿದ್ದಕ್ಕೆ ಹಲ್ಲೆಗೊಳಗಾಗಿದ್ದ ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪತಿಯಿಂದ ಹಲ್ಲೆಗೊಳಗಾಗಿದ್ದ ಪತ್ನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನವೆಂಬರ್ 3 ರಂದು ಪತ್ನಿಯ ಮೇಲೆ ಫಾರೂಕ್ ಎಂಬಾತ ಹಲ್ಲೆ ಮಾಡಿದ್ದ. ಬಳಿಕ, ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪತ್ನಿ ನಾಜಿಯಾ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ದಯಾನಂದನಗರದಲ್ಲಿ ಘಟನೆ ನಡೆದಿತ್ತು. ನಾಜಿಯಾ ಪೋಷಕರ ದೂರು ಆಧರಿಸಿ ಪಾರೂಕ್ನನ್ನು ಬಂಧಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಗೆ ಉರುಳಿದ ಕೆಎಸ್ಆರ್ಟಿಸಿ ಬಸ್; ಅದೃಷ್ಟವಷಾತ್ ಪ್ರಯಾಣಿಕರು ಪಾರು
ಇದನ್ನೂ ಓದಿ: ಪಟಾಕಿ ತರಲು ಹೋಗಿದ್ದ ವಿದ್ಯಾರ್ಥಿಯ ಅಪಹರಣ ಮತ್ತು ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Published On - 10:45 am, Sat, 6 November 21