ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಮಠದಲ್ಲಿ ಸಂಭ್ರಮ ಕಳೆಗಟ್ಟಿದ್ದು, ಇಂದು (ಮೇ 01) ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಶ್ರೀಗಳ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತರೊಬ್ಬರು ದುರಂತ ಸಾವು ಕಂಡಿದ್ದಾರೆ.

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು
Siddaganga Mutt
Edited By:

Updated on: Apr 01, 2026 | 2:46 PM

ತುಮಕೂರು, (ಏಪ್ರಿಲ್.01): ಡಾ. ಶಿವಕುಮಾರ ಸ್ವಾಮೀಜಿಗಳ (Dr Shivakumar Swamiji) 119ನೇ ಜನ್ಮದಿನೋತ್ಸಕ್ಕೆಂದು ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ (siddaganga mutt) ಬಂದಿದ್ದ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟರಾಜು(60) ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಆದ್ರೆ, ಈ ಬಾರಿ ಮಠದಲ್ಲೇ ಅಸುನೀಗಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್, ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿ. ಹೀಗಾಗಿ ಪ್ರತಿ ವರ್ಷವೂ ಸಹ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸಕ್ಕೆಂದು ಬರುತ್ತಿದ್ದರು. ಅದರಂತೆ ಶ್ರೀಗಳ 119ನೇ ಜನ್ಮದಿನೋತ್ಸ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ನಿನ್ನೆ (ಮಾರ್ಚ್ 31) ರಾತ್ರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದರು. ಆದ್ರೆ, ದುರದೃಷ್ಟವಶಾತ್ ಇಂದು (ಏಪ್ರಿಲ್ 01) ಶೌಚಾಲಯಕ್ಕೆ ಹೋಗಿ ಬರುವಾಗ ಶಿವಕುಮಾರ ಶ್ರೀಗಳ ಗದ್ದುಗೆ ಹಿಂಭಾಗದಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರತಿವರ್ಷ ಶಿವಕುಮಾರ ಶ್ರೀಗಳ ಕಾರ್ಯಕ್ರಮಕ್ಕೆ ಬರುತ್ತಿದ್ದ ನಟರಾಜ್ ಅವರಿಗೆ ಕೆಲ ದಿನಗಳ ಹಿಂದೆ ಹಾರ್ಟ್​ ಸರ್ಜರಿತಾಗಿತ್ತು ಎಂದು ತಿಳಿದುಬಂದಿದೆ. ಇನನ್ಉ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us