AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ: ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ!

ತುಮಕೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ 24ನೇ ಅಂಡರ್-20 ರಾಷ್ಟ್ರೀಯ ಕ್ರೀಡಾಕೂಟ ನಡೆಯಲಿದೆ. ಆದರೆ ಮೊದಲ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಆ ಮೂಲಕ ಕೆಲ ಸ್ಪರ್ಧಿಗಳು ಕಳ್ಳಾಟ ನಡೆಸಿರುವ ಶಂಕೆ ಮೂಡಿದೆ. ಈ ಬಗ್ಗೆ NADA ತನಿಖೆ ನಡೆಸಲಿದೆ.

ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ: ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ!
ಕ್ರೀಡಾಕೂಟದ ಮೊದಲ ದಿನ ಸಿರಿಂಜ್​ಗಳು ಪತ್ತೆ Image Credit source: tv9 kannada
ಜಗದೀಶ ಬಿ.
| Edited By: |

Updated on: Apr 24, 2026 | 5:19 PM

Share

ತುಮಕೂರು, ಏಪ್ರಿಲ್​ 24: ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ (National level Sports) ಕಲ್ಪತರು ನಾಡು ತುಮಕೂರು (Tumkur) ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು (Syringe) ಪತ್ತೆಯಾಗಿದ್ದು, ಗೊಂದಲ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಕ್ರೀಡಾಕೂಟದ ಪಾರದರ್ಶಕತೆಯ ಬಗ್ಗೆ ಅನುಮಾನಗಳು ಮೂಡಿವೆ.

ದೇಶದ 28 ರಾಜ್ಯಗಳಿಂದ ಸುಮಾರು 1,500ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಇನ್ನು 40 ವಿವಿಧ ಕ್ರೀಡಾ ಚಟುವಟಿಕೆ ನಡೆಯಲಿದ್ದು, ಬಿಸಿಲಿನ ತಾಪಮಾನಕ್ಕೆ ಅನುಗುಣವಾಗಿ ಕ್ರೀಡಾಚಟುವಟಿಕೆಗಳು ಬೆಳಿಗ್ಗೆ ಹಾಗೂ ಸಂಜೆ ನಂತರ ಫೆಡ್ ಲೈಟ್​ನಲ್ಲಿ ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ವಿಜೇತರು ಆಗಸ್ಟ್ ತಿಂಗಳಲ್ಲಿ ಅಮೆರಿಕಾದ ಓರೆಗಾನ್​​ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತ ಪ್ರತಿನಿಧಿಸಲು ಆಯ್ಕೆ‌ ಆಗಲಿದ್ದಾರೆ.

ಶೌಚಾಲಯದಲ್ಲಿ ಸಿರಿಂಜ್​​ಗಳು ಪತ್ತೆ

ಇನ್ನು ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣದ ಬಳಿಯ ಜಿ. ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆದರೆ ಚಾಲನೆ ಸಿಕ್ಕ ಮೊದಲ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್​​ಗಳು ಪತ್ತೆಯಾಗಿದ್ದು, ಉದ್ದೀಪನ ಮದ್ದು ಬಳಕೆಯ ಅನುಮಾನ ಮೂಡಿದೆ.

ಸಿರಿಂಜುಗಳು ಪತ್ತೆಯಾಗಿದ್ದು ನಿಜ: ಸತ್ಯನಾರಾಯಣ

ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕ್ರೀಡಾಕೂಟದ ಸ್ಪರ್ಧಾ ನಿರ್ದೇಶಕ ಸತ್ಯನಾರಾಯಣ, ಸಿರಿಂಜುಗಳು ಪತ್ತೆಯಾದ ಬಗ್ಗೆ NADA (national anti doping agency)ಗೆ ಮಾಹಿತಿ ನೀಡಲಾಗುವುದು. ಅವರು ಪರಿಶೀಲಿಸಿ, ತನಿಖೆ ನಡೆಸಲಿದ್ದಾರೆ ಎಂದರು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ NADAದಿಂದ ಟೆಸ್ಟ್ ಮಾಡಲಾಗುತ್ತದೆ. ಒಂದು ಟೆಸ್ಟ್ 30 ರಿಂದ 40 ಸಾವಿರ ರೂ ವೆಚ್ಚದಾಗಿರುತ್ತದೆ, ಆದರೂ ಸಹ ನಾವು ಮಾಡುತ್ತೇವೆ. ನೋ‌ ನೀಡಲ್ ಪಾಲಿಸಿ ಇದೆ. ಅವರು ಬಾತ್ ರೂಂನಲ್ಲಿ ತೆಗೆದುಕೊಂಡಾಗ ಗೊತ್ತಾಗುವುದಲ್ಲ. ಖಂಡಿತ ಇದನ್ನು ಕೂಲಂಕುಷವಾಗಿ ನೋಡಲಾಗುವುದು. ಬಾಹಿರವಾರವಾಗಿ ಚುಚ್ಚು ಮದ್ದು ಪಡೆದಿದ್ದರೇ NADA ಕ್ರಮಗೈಕೊಳ್ಳಿದೆ. ಯಾರೇ ಸಿರಿಂಜ್ ತೆಗೆದುಕೊಂಡಿರುವುದು ಪತ್ತೆಯಾದರೆ ಅವರಿಗೆ ನಾಲ್ಕು ವರ್ಷ ಕ್ರೀಡೆಯಿಂದ ಬ್ಯಾನ್ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ 35 ನವಿಲುಗಳು ಸಾವು! ಸುಡುವ ಬಿಸಿಲಿನ ಪರಿಣಾಮವೋ? ಹಕ್ಕಿ ಜ್ವರವೋ?

ದೇಶದ ವಿವಿಧ ರಾಜ್ಯಗಳಿಂದ ಸಣ್ಣಪುಟ್ಟ ಹಳ್ಳಿಗಳಿಂದ ತಮ್ಮದೇ ಕನಸು ಹೊತ್ತು ಬಂದ 20 ವರ್ಷದೊಳಗಿನ ಪ್ರತಿಭೆಗಳ ಭವಿಷ್ಯ ರೂಪಿಸುವ ಕ್ರೀಡ್ರಾಕೂಟದ ನಡುವೆ ಶೌಚಾಲಯದಲ್ಲಿ ಕಂಡ ಸಿರಿಂಜ್​​ಗಳು, ಉದ್ದೀಪನ ಅನುಮಾನ ಮೂಡಿಸಿದ್ದು, ಕೆಲ ಸ್ಪರ್ಧಿಗಳು ಕಳ್ಳಾಟ ನಡೆಸಿರುವ ಶಂಕೆ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ