ತುಮಕೂರು, ಜನವರಿ 09: ದೂರು ನೀಡಲು ಬಂದಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮಧುಗಿರಿ (Madhugiri) ಡಿವೈಎಸ್ಪಿ ರಾಮಚಂದ್ರಪ್ಪ (DYSP Ramchandrappa) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಸಂತ್ರಸ್ತ ಮಹಿಳೆ ಮಧುಗಿರಿ ಪೋಲಿಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಡಿವೈಎಸ್ ಪಿ ರಾಮಚಂದ್ರಪ್ಪ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಂದು ದೂರು ದಾಖಲು ಹಿನ್ನೆಲೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು ಎಂದು ಹೇಳಿದ್ದರು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿದ್ದರಯ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದರು.
ಈ ಸಂಬಂಧ ಮಾತುಕತೆ ನಡೆಸಬೇಕು, ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ಪಿ ರಾಮಚಂಪ್ಪ ಮಹಳೆಯನ್ನು ಕಚೇರಿಗೆ ಕರೆಸಿದ್ದರು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.
ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್: ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಳಿಕ ಮಹಿಳೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇರೆಗೆ ಸೆಕ್ಷನ್ 68, 75, 79 ಅತ್ಯಾಚಾರ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ದೂರಿನ ಮೇರೆಗೆ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿತ್ತು. ಸದ್ಯ ಡಿವೈಎಸ್ಪಿ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ