ಅಪಘಾತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ವೈ.ಎನ್. ಹೊಸಕೋಟೆ- ಪಾವಗಡ ಮಧ್ಯೆ 9 KSRTC ಬಸ್‌ಗಳ ಸಂಚಾರ ಆರಂಭ

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರೂ ವೈದ್ಯರು ಗಾಯಾಳುಗಳನ್ನು ಡಿಸ್ಚಾರ್ಜ್ ಆಗಿ ಎನ್ನುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ನಡೆಗೆ ಗಾಯಾಳುಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಘಾತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ; ವೈ.ಎನ್. ಹೊಸಕೋಟೆ- ಪಾವಗಡ ಮಧ್ಯೆ 9 KSRTC ಬಸ್‌ಗಳ ಸಂಚಾರ ಆರಂಭ
ಪಾವಗಡ ಬಸ್ ಅಪಘಾತದ ದೃಶ್ಯ
Follow us
TV9 Web
| Updated By: ganapathi bhat

Updated on: Mar 23, 2022 | 10:03 AM

ತುಮಕೂರು: ಇಲ್ಲಿನ ಪಾವಗಡದ ಪಳವಳ್ಳಿ ಕಟ್ಟೆ ಬಳಿ ಬಸ್ ದುರಂತ ಪ್ರಕರಣದ ಬಳಿಕ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ವೈ.ಎನ್. ಹೊಸಕೋಟೆಯಿಂದ 9 KSRTC ಬಸ್ ಸೇವೆ ಆರಂಭ ಮಾಡಲಾಗಿದೆ. ವೈ.ಎನ್. ಹೊಸಕೋಟೆ- ಪಾವಗಡ ಮಧ್ಯೆ 9 ಬಸ್‌ಗಳ ಸಂಚಾರ ಶುರುವಾಗಿದೆ. ಮೊದಲು ಈ ಮಾರ್ಗದಲ್ಲಿ 2 ಬಸ್ ಮಾತ್ರ ಸಂಚರಿಸುತ್ತಿತ್ತು. ಇದೀಗ ಹೆಚ್ಚುವರಿಯಾಗಿ ಈ ಮಾರ್ಗದಲ್ಲಿ 7 ಬಸ್ ಸಂಚಾರ ಆರಂಭವಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಮಧ್ಯೆ ಬಸ್ ಸಂಚಾರ ಶುರು ಮಾಡಲಾಗಿದೆ.

ಇನ್ನು, ಪಾವಗಡದಲ್ಲಿ ನಡೆದ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಈಗಲೂ ಗಾಯಾಳು‌‌ಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗಾಗಿ ಪರದಾಟ ಕಂಡುಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರೂ ವೈದ್ಯರು ಗಾಯಾಳುಗಳನ್ನು ಡಿಸ್ಚಾರ್ಜ್ ಆಗಿ ಎನ್ನುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ನಡೆಗೆ ಗಾಯಾಳುಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡದೇ ವೈದ್ಯರು ಬೇಜವ್ದಾರಿತನ ಮಾಡ್ತಿದ್ದಾರೆಂದು ಆರೋಪ ಮಾಡಲಾಗಿದೆ. ಹೊರಗಡೆಯಿಂದ ಔಷಧಿ ತರಲು ಚೀಟಿ ಬರೆದುಕೊಡುವ ವೈದ್ಯರ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 7 ಗಾಯಾಳುಗಳು ಇದ್ದಾರೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವರು ಹೇಳಿದ್ದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಾರಿಗೆ ಸಚಿವ ಶ್ರೀರಾಮುಲು ಹೊರಗಡೆ ಔಷಧಿ ಬರೆದುಕೊಡದಂತೆ ಎಚ್ಚರಿಕೆ ನೀಡಿದ್ರು. ಆದರೂ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ನಮಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಮಂತ್ರಿ, ಎಂಎಲ್​ಎಗಳು ಬಂದಾಗ ಮಾತ್ರ ನಮಗೆ ಚಿಕಿತ್ಸೆ ಕೊಡ್ತಾರೆ. ಮೆಡಿಸನ್ ಎಲ್ಲವನ್ನೂ ಹೊರಗಡೆಯಿಂದಲೇ ತರಿಸ್ತಾರೆ. ಗಾಯಾಳುಗಳು ಇನ್ನೂ ಗಂಭೀರವಾಗಿದ್ದಾರೆ. ಈಗಲೇ ಡಿಸ್ಚಾರ್ಜ್ ಆಗಿ ಅಂದ್ರೆ ನಾವು ಎಲ್ಲಿಗೆ ಹೋಗೋದು ಎಂದು ಕೇಳುತ್ತಿದ್ದಾರೆ.

ಇದನ್ನೂ ಓದಿ: Pavagada Bus Accident: ಟಾಪ್​ನಲ್ಲಿ ಜನರನ್ನು ಕೂರಿಸಿಕೊಂಡು ಬಂದ ಬಸ್; ಅಪಘಾತಕ್ಕೂ ಮೊದಲ ವಿಡಿಯೋ ಇಲ್ಲಿದೆ

ಇದನ್ನೂ ಓದಿ: Bus Accident: ಪಾವಗಡದ ಭೀಕರ ಬಸ್ ಅಪಘಾತಕ್ಕೆ ನಾಲ್ಕು ಮುಖ್ಯ ಕಾರಣಗಳು; ಏನದು?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ