ತುಮಕೂರಿನಲ್ಲಿ ಆಯಿಲ್ ಟ್ಯಾಂಕ್ ದುರಂತ: ಇಬ್ಬರು ಕಾರ್ಮಿಕರು ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Jan 28, 2025 | 6:56 PM

ತುಮಕೂರಿನ ಅಂತಸರನಹಳ್ಳಿಯ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಆಯಿಲ್ ಟ್ಯಾಂಕ್ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಬತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಪೊಲೀಸರು ಮತ್ತು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ತುಮಕೂರಿನಲ್ಲಿ ಆಯಿಲ್ ಟ್ಯಾಂಕ್ ದುರಂತ: ಇಬ್ಬರು ಕಾರ್ಮಿಕರು ಸಾವು
ಥಿನ್ನರ್ ಸೇವಿಸಿ ಬಾಲಕ ಸಾವು, ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ
Follow us on

ತುಮಕೂರು, ಜನವರಿ 28: ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ನಡೆದಿದೆ. ಬಿಹಾರ ಮೂಲದ ಸಂತೋಷ್, ಹಾಗೂ ಚಂದನ್ ಶರ್ಮ ಮೃತ ದುರ್ದೈವಿಗಳು. ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬತ್ತದ ಹೊಟ್ಟಿನಿಂದ ಪರಿಮಳ ಆಗ್ರೋ ಫ್ಯಾಕ್ಟರಿಯಲ್ಲಿ ಎಣ್ಣೆ ತೆಗೆಯಲಾಗುತ್ತೆ. ಐವರು ಕಾರ್ಮಿಕರು ಆಯಿಲ್ ಟ್ಯಾಂಕ್ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್​ ಟ್ಯಾಂಕ್​ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಎಸ್​ಪಿ ಅಶೋಕ್ ಕೆ.ವಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರ್ಬನ್ ಮೊನಾಕ್ಸೈಡ್​ನಿಂದ ಓರ್ವ ಕಾರ್ಮಿಕ ಸಾವು

ಮತ್ತೊಂದು ಪ್ರಕರಣದಲ್ಲಿ ಕಾರ್ಬನ್ ಮೊನಾಕ್ಸೈಡ್​ನಿಂದ ಓರ್ವ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಕೊಪ್ಪಳ ತಾಲೂಕಿನ ಅಲ್ಲಾನಗರ ಬಳಿಯ ಹೊಸಪೇಟೆ ಇಸ್ಪಾಥ್ ಸ್ಟೀಲ್ ಪ್ಯಾಕ್ಟರಿಯಲ್ಲಿ ದುರಂತ ಸಂಭವಿಸಿದೆ. ಅಲ್ಲಾ ನಗರ ನಿವಾಸಿ ಮಾರುತಿ(27) ಮೃತ ಕಾರ್ಮಿಕ. ನಾಲ್ಕೈದು ಕಾರ್ಮಿಕರು ಅಸ್ವಸ್ಥರಾಗಿದ್ದು, ಕೊಪ್ಪಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶಾಲಾ ಶಿಕ್ಷಕಿ ಶವ ಪತ್ತೆ

ಫೈನಾನ್ಸ್​ನವರ ಕಿರುಕುಳದಿಂದ ಬೇಸತ್ತು ಶಿಕ್ಷಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಭದ್ರಾ ನದಿಯಲ್ಲಿ ಶಾಲಾ ಶಿಕ್ಷಕಿ ಪುಷ್ಪಲತಾ(46) ಶವ ಪತ್ತೆಯಾಗಿದೆ. ಜ.26ರಂದು ನದಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?

ದಾವಣಗೆರೆ ಜಿಲ್ಲೆಯ ಹೊನ್ನಾಳಿ ರಾಘವೇಂದ್ರ ಮಠದ ಬಳಿ ಘಟನೆ ನಡೆದಿತ್ತು. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆಯಿಂದ ಈಜು ಪರಿಣಿತರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಶವಕ್ಕಾಗಿ ಶೋಧ ಮಾಡಿದ್ದರು. ರಾಘವೇಂದ್ರ ಮಠದಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಜಾಕ್ ವೆಲ್ ಬಳಿ ಶವ‌ ತೆಲುತ್ತಿದ್ದು, ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ‌ ನೀಡಲಾಗಿದೆ. ಪತ್ನಿಯನ್ನು ನೆನೆದು ಪತಿ ಹಾಲೇಶ್ ಗೋಳಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.