JDS Pancharatna Rath Yatra: ಜೆಡಿಎಸ್​ನ ಪಂಚರತ್ನ ರಥಯಾತ್ರೆಯಿಂದ ಎರಡು ದಾಖಲೆ ನಿರ್ಮಾಣ

ಜೆಡಿಎಸ್​ನ ಪಂಚರತ್ನ ರಥಯಾತ್ರೆ(Pancharatna rath Yatra)ಯು ಎರಡು ದಾಖಲೆಗಳನ್ನು ನಿರ್ಮಿಸಿದೆ. ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಈ ಎರಡೂ ದಾಖಲೆಗಳನ್ನು ನಾಡಿನ ಜನ ಮತ್ತು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.

JDS Pancharatna Rath Yatra: ಜೆಡಿಎಸ್​ನ ಪಂಚರತ್ನ ರಥಯಾತ್ರೆಯಿಂದ ಎರಡು ದಾಖಲೆ ನಿರ್ಮಾಣ
ಎಚ್​ಡಿ ಕುಮಾರಸ್ವಾಮಿImage Credit source: Hindustan Times
Follow us
TV9 Web
| Updated By: ನಯನಾ ರಾಜೀವ್

Updated on: Dec 30, 2022 | 12:34 PM

ಜೆಡಿಎಸ್​ನ ಪಂಚರತ್ನ ರಥಯಾತ್ರೆ(Pancharatna Rath Yatra)ಯು ಎರಡು ದಾಖಲೆಗಳನ್ನು ನಿರ್ಮಿಸಿದೆ. ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಈ ಎರಡೂ ದಾಖಲೆಗಳನ್ನು ನಾಡಿನ ಜನ ಮತ್ತು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ದಾಖಲೆಗೆ ಪಾತ್ರರಾಗಿದ್ದಾರೆ.

ಆ ಗ್ರಾಮಕ್ಕೆ ಆಗಮಿಸಿದ ‘ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ‘ ತೀರ್ಪುಗಾರರಾದ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರೇ ಬೇಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ, ಮೊದಲ ದಾಖಲೆ ಎಂದರು.

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿದ್ದರು.

ಮತ್ತಷ್ಟು ಓದಿ:

ನಾವು ಸದಾ ದಾಖಲೆಗಳನ್ನು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಭಾರೀ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು. ಅಂದಿನಿಂದಲೇ ನಾವು ಖುದ್ದು ಪರಿಶೀಲನೆ ಮಾಡಿದೆವು. ನಿನ್ನೆಯೂ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾದ ಏಕೈಕ ವ್ಯಕ್ತಿ ಕುಮಾರಸ್ವಾಮಿ ಅವರು ಎಂದು ಮೋಹಿತ್ ಕುಮಾರ್ ಮಾಹಿತಿ ನೀಡಿದರು.

ರೈತರಿಗೆ, ಕಾರ್ಯಕರ್ತರಿಗೆ ಸಮರ್ಪಣೆ: ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದರು.

ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಪಂಚರತ್ನ ಯಾತ್ರೆ ಆರಂಭವಾಗಿ 33ನೇ ದಿನ ಪೂರೈಸಿದೆ. ಈ ಯಾತ್ರೆಯಲ್ಲಿ ಜನರು ಪ್ರೀತಿಯಿಂದ ಹಾಕಿದ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.

ಇನ್ನೊಂದೆಡೆ ಪಂಚರತ್ನ ಯಾತ್ರೆ ಇದೀಗ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಹಾಕಿ ಗೌರವಿಸಲಾಯಿತು.

ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ ಗೂಳೂರು ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ ಇ ಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.

ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜಿನಪ್ಪ ಇದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ