ತುಮಕೂರು: ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ: ಪೋಷಕರ ಧರಣಿ
ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಿತ್ಯ ಮದ್ಯ ಕುಡಿದು ಶಾಲೆಗೆ ಬರುತ್ತಾನೆ. ಮದ್ಯದ ಅಮಲಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೆ ಶಿಕ್ಷಕನನ್ನು ವರ್ಗಾಯಿಸುವಂತೆ ಪ್ರತಿಭಟನೆ ನಡೆಸಿದರು.
ತುಮಕೂರು ನ.28: ಮಧುಗಿರಿ (Madhugiri) ತಾಲೂಕಿನ ರಂಟವಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ (School) ಶಿಕ್ಷಕ ಲಕ್ಷ್ಮಿಕಾಂತ್ ವಿದ್ಯಾರ್ಥಿನಿಯರ (Students) ಜೊತೆ ಅಸಭ್ಯವಾಗಿ ವರ್ತಿಸುತ್ತಾನೆಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದರು. ಶಿಕ್ಷಕ ಪ್ರತಿದಿನ ಮದ್ಯ ಸೇವಿಸಿ ಶಾಲೆಗೆ ಬರುತ್ತಾನೆ. ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ. ಹಣದ ಆಮಿಷ ಒಡ್ಡುವುದು, ನಾನು ಮತ್ತು ನಿಮ್ಮ ತಂದೆ ಸ್ನೇಹಿತರು ಎಂದು ಹೇಳಿ, ಮಕ್ಕಳಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಯನ್ನು ಪೋಷಕರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಶಿಕ್ಷಕನನ್ನ ವರ್ಗಾವಣೆ ಮಾಡುವಂತೆ ಪಟ್ಟು ಹಿಡಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಒಂದು ವಾರದಿಂದ ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಎದುರು ಧರಣಿ ನಡೆಸಿದ್ದ ಉಪನ್ಯಾಸಕರು ಇಂದು (ನ.28) ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ಹುದ್ದೆ ಖಾಯಂಗೊಳಿಸಬೇಕು. ಕಾಲೇಜುಗಳಲ್ಲಿನ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆ ಸೃಷ್ಟಿಸಬೇಕು. ಇದಕ್ಕೆ ಕಾನೂನು ತಿದ್ದುಪಡಿ ಮಾಡಿ ಅನುಮೋದನೆ ನೀಡಬೇಕು. ಅತಿಥಿ ಉಪನ್ಯಾಸಕರನ್ನು ಈ ಹುದ್ದೆಗಳಿಗೆ ನಿಯೋಜಿಸಬೇಕು. ಆ ಮೂಲಕ ಸೇವಾ ಸಕ್ರಮಾತಿ ಮಾಡಬೇಕು ಅಂತ ಆಗ್ರಹಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:35 pm, Tue, 28 November 23