AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದ ಗ್ರಾಮದ ವ್ಯಕ್ತಿಗೆ ಅಪೆಂಡಿಕ್ಸ್ ಇದೆ. ವಿಪರೀತವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆಡ್ ಸಿಗದೆ ಸತತ ನಾಲ್ಕು ದಿನದಿಂದ ನರಕಯಾತನೆ ಅನುಭವಿಸುತ್ತಿದ್ದಾರೆ.

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಗೆ ಆಸ್ಪತ್ರೆಯಲ್ಲಿ ಬೆಡ್ ಇಲ್ಲ; 4 ದಿನದಿಂದ ತುಮಕೂರಿನ ವ್ಯಕ್ತಿ ಪರದಾಟ
ಸಾಂದರ್ಭಿಕ ಚಿತ್ರ
sandhya thejappa
|

Updated on: May 03, 2021 | 11:36 AM

Share

ತುಮಕೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಹೆಚ್ಚಾಗಿದೆ. ಬೆಡ್​ಗಳು ಸಿಗದೆ ರಾಜ್ಯದಲ್ಲಿ ಹಲವರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿದವರಿಗೂ ಹಾಗು ಸೋಂಕಿಲ್ಲದವರಿಗೂ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ನಿನ್ನೆ ನಾನ್ ಕೊವಿಡ್ ರೋಗಿಯೊಬ್ಬರು ಬೆಡ್ ಸಿಗದೆ ಮನೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅದರಂತೆ ಇದೀಗ ತುಮಕೂರಿನಲ್ಲಿ ವ್ಯಕ್ತಿಯೊಬ್ಬರಿಗೆ ವಿಪರೀತವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆದರೆ ಆಸ್ಪತ್ರೆಯಲ್ಲಿ ಬೆಡ್ ಸಿಗದೆ 4 ದಿನದಿಂದ ರೋಗಿ ಪರದಾಟ ಪಡುತ್ತಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದ ಗ್ರಾಮದ ವ್ಯಕ್ತಿಗೆ ಅಪೆಂಡಿಕ್ಸ್ ಇದೆ. ವಿಪರೀತವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆಡ್ ಸಿಗದೆ ಸತತ ನಾಲ್ಕು ದಿನದಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಚಿಕಿತ್ಸೆಗಾಗಿ ಆ್ಯಂಬುಲೆನ್ಸ್​ನಲ್ಲಿ ತುಮಕೂರು ಜಿಲ್ಲಾಸ್ಪತ್ರೆ ಸೇರಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೂ ವ್ಯಕ್ತಿ ಅಲೆದಾಡಿದ್ದಾರೆ. ಆದರೆ ಯಾವ ಆಸ್ಪತ್ರೆಗಳಲ್ಲೂ ದಾಖಲಿಸಿಕೊಂಡಿಲ್ಲ. ಇದರಿಂದ ವ್ಯಕ್ತಿ ಮನೆಗೆ ಮರಳಿದ್ದಾರೆ.

ಮನೆಯಲ್ಲಿ ಹೊಟ್ಟೆ ನೋವು ತಾಳಲಾರದೆ ವ್ಯಕ್ತಿ ಒದ್ದಾಡುತ್ತಿದ್ದಾರೆ. ವೈದ್ಯರು ವ್ಯಕ್ತಿಗೆ ಅಪೆಂಡಿಕ್ಸ್ ಆಪರೇಷನ್ ಮಾಡಬೇಕೆಂದಿದ್ದರು. 48 ವರ್ಷದ ವ್ಯಕ್ತಿಗೆ ಕೊವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆ ಆಪರೇಷನ್ ಮಾಡಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ

ಸಾಲ ತೀರಿಸಲು 3 ತಿಂಗಳು ಕಾಲಾವಕಾಶ ನೀಡಿ, ಇಲ್ಲದಿದ್ದರೆ ಫೈನಾನ್ಸ್ ಹೆಸರು ಬರೆದು ನೇಣು ಹಾಕಿಕೊಳ್ತೀವಿ; ಮೈಸೂರು ಮಹಿಳೆಯರ ಅಳಲು

(patient with abdominal pain is not getting a bed in hospital at tumkur)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!