ತುಮಕೂರು: ಬಾಳೆಗೊನೆ ಕದ್ದ ಎಂಬ ಕಾರಣಕ್ಕೆ ಗುಡಿಸಲಿಗೆ ಬೆಂಕಿ ಹಚ್ಚಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೆಂಕಟೇಶ್ ಎನ್ನುವವರ ತೋಟದ ಗುಡಿಸಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ವೆಂಕಟೇಶ್ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬ. ಅಡಿಕೆ, ತೆಂಗು, ರಾಗಿ ನೋಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಆ ಗುಡಿಸಲಿಗೆ ಬೆಂಕಿ ಇಟ್ಟು ಕೆಲ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ.
ಗ್ರಾಮದ ರಾಜ್ ಕುಮಾರ್ ಹಾಗೂ ಲಿಂಗಮೂರ್ತಿ ಎನ್ನುವವರು ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಕಾರಣ ವೆಂಕಟೇಶ್ ಅವರ ತೋಟದಲ್ಲಿ ಬಾಳೆಗೋನೆ ಕದ್ದ ಅಂತಾ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕೂಡ ವೆಂಕಟೇಶ್ ನನ್ನ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ. ಆದರೆ ಅನಾರೋಗ್ಯದ ಕಾರಣ ವೆಂಕಟೇಶ್ ಠಾಣೆ ಹಾಜರಾಗಿರಲಿಲ್ಲ. ಹೀಗಾಗಿ ಠಾಣೆಗೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಇಬ್ಬರು ಏಕಾಏಕಿ ಹೋಗಿ ವೆಂಕಟೇಶ್ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಬೆಂಕಿಯ ಕೆನ್ನಾಲಿಗೆಗೆ ಗುಡಿಸಲಿನ ಅಕ್ಕ ಪಕ್ಕ ಇದ್ದ ಅಡಿಕೆ, ತೆಂಗು, ರಾಗಿ ಸ್ವಲ್ಪ ಮಟ್ಟಿಗೆ ಆಹುತಿಯಾಗಿದೆ. ಸದ್ಯ ಆರೋಪಗಳಿಗೆ ಪೂರಕವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯಾಂಶ ತನಿಖೆಯ ನಂತರವಷ್ಟೇ ಹೊರಬರಬೇಕಿದೆ.
ಬಾಗಲಕೋಟೆ: ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಚಾಕು ಇರಿದ ಯುವಕ
ಪ್ರೀತಿಸಲು ನಿರಾಕರಿಸಿದ ಬಾಲಕಿಗೆ ಯುವಕ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ. ಅಪ್ರಾಪ್ತೆಯ ಕುತ್ತಿಗೆ ಹಾಗೂ ಕಿವಿಗೆ ಚಾಕುವಿನಿಂದು ಇರಿದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಪ್ರಾಪ್ತೆ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ, 23 ವರ್ಷದ ರವಿ ಅಥಣಿ ಎಂಬ ಯುವಕ ಒನ್ ಸೈಡ್ ಲವ್ ಹೆಸರಿನಲ್ಲಿ
ಕೆಲ ದಿನಗಳಿಂದ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ, ಬಾಲಕಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದು, ಯುವಕ ಚಾಕು ಇರಿದಿದ್ದಾನೆ.
ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಅಪ್ರಾಪ್ತೆ ಅಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಯುವಕನನ್ನು ತೇರದಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:
ಗುಡಿಸಲಿಗೆ ಬೆಂಕಿ: ಅಗ್ನಿ ಅವಘಡದಲ್ಲಿ ಸೂರು ಕಳೆದುಕೊಂಡ ವೃದ್ಧೆ ಬೀದಿಪಾಲು..
Samsung Galaxy A21: ಸ್ಯಾಮ್ಸಂಗ್ ಗ್ಯಾಲಕ್ಸಿಯ ಈ ಸ್ಮಾರ್ಟ್ಫೊನ್ನಲ್ಲಿ ಬೆಂಕಿ: ನಿಮ್ಮಲ್ಲಿದೆಯಾ ಈ ಫೋನ್
Published On - 9:32 am, Sat, 18 September 21