AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿ ಸರ್ಕಾರದ ಪತನಕ್ಕೆ ಫೋನ್ ಕದ್ದಾಲಿಕೆ ಕಾರಣ: ಮಾಜಿ ಡಿಸಿಎಂ ಪರಮೇಶ್ವರ

ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ದೂರವಾಣಿ ಕದ್ದಾಲಿಕೆಯೇ ಕಾರಣ ಎಂದು ಹಿಂದಿನ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಡಾ.ಜಿ.ಪರಮೇಶ್ವರ ಹೇಳಿದರು.

ಮೈತ್ರಿ ಸರ್ಕಾರದ ಪತನಕ್ಕೆ ಫೋನ್ ಕದ್ದಾಲಿಕೆ ಕಾರಣ: ಮಾಜಿ ಡಿಸಿಎಂ ಪರಮೇಶ್ವರ
ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 21, 2021 | 6:50 PM

Share

ತುಮಕೂರು: ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ದೂರವಾಣಿ ಕದ್ದಾಲಿಕೆಯೇ ಕಾರಣ ಎಂದು ಹಿಂದಿನ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಡಾ.ಜಿ.ಪರಮೇಶ್ವರ ಹೇಳಿದರು. ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಗಾಸಸ್ ಕು-ತಂತ್ರಾಂಶದ ಮೂಲಕ ಫೋನ್ ಕದ್ದಾಲಿಕೆ ನಡೆದಿರಬಹುದು ಎಂದು ಶಂಕಿಸಿದರು.

ಹಿಂದಿನ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಮತ್ತು ನನ್ನ ಫೋನ್​ ಟ್ಯಾಪಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಕಾನೂನಿಗೆ ವಿರುದ್ಧವಾಗಿ ಪೆಗಾಸಸ್ ಮೂಲಕ ಫೋನ್​ ಕದ್ದಾಲಿಕೆ ಮಾಡಲಾಗಿದೆ ಎಂದು ಆರೋಪ ಮಾಡಿದರು. ಫೋನ್ ಕದ್ದಾಲಿಕೆ ಮಾಡಿದ ಅನೇಕ ಸರ್ಕಾರಗಳು ಈ ಹಿಂದೆಯೂ ಬಿದ್ದು ಹೋಗಿವೆ ಎಂದು ಅಭಿಪ್ರಾಯಪಟ್ಟರು.

ಬಿಜೆಪಿಗೆ ಹೋದವರು ಸುಮ್ಮನೆ ಹೋಗಿದ್ದಾರೆ ಎಂದು ಅನ್ನಿಸುತ್ತಿಲ್ಲ. ಹಣ ಪಡೆದುಕೊಂಡ ನಂತರವೇ 17 ಶಾಸಕರು ಬಿಜೆಪಿಗೆ ಹೋಗಿರಬಹುದು. ಇಂಥ ಪ್ರಕ್ರಿಯೆ ನಡೆಯುತ್ತಿದ್ದಾಗಲೇ ನಮ್ಮೆಲ್ಲರ ಫೋನ್ ಟ್ಯಾಪಿಂಗ್ ನಡೆದಿದೆ. ಬಹುಶಃ ಜುಲೈ ತಿಂಗಳಲ್ಲಿ ಟೆಲಿಫೋನ್ ಟ್ಯಾಪಿಂಗ್ ನಡೆದಿರಬಹುದು. ಆಗಿನ ಫೋನ್ ಸಂಭಾಷಣೆ ಬಳಸಿ ಸರ್ಕಾರ ಕೆಡವಿರಬಹುದು ಎಂದು ಪರಮೇಶ್ವರ ನೇರ ಆರೋಪ ಮಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹದ್ದು ನಡೆಯಬಾರದಿತ್ತು ಎಂದು ವಿಷಾದಿಸಿದರು.

ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರದಲ್ಲಿ ಇರುವವರೆಗೂ ಕಾಂಗ್ರೆಸ್​ ಪಕ್ಷಕ್ಕೆ ಒಳ್ಳೆಯದು. ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಸರ್ಕಾರ ನೀಡುತ್ತಿದ್ದ ಅಕ್ಕಿಯ ಪ್ರಮಾಣವನ್ನೂ ಈ ಸರ್ಕಾರ ಕಡಿಮೆ ಮಾಡಿದೆ. ರಾಜ್ಯದ ಬಡವರು ಉಪವಾಸವಿರಬೇಕಾದ ಸ್ಥಿತಿ ಬಂದಿದೆ, ಜನರು ಅನುಭವಿಸುತ್ತಿರುವ ಕಷ್ಟಗಳಿಗೆ ಈ ಸರ್ಕಾರವೇ ಕಾರಣ. ಜನರು ಸಹ ಈ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ ಎಂದು ರಾಜಣ್ಣ ತಿಳಿಸಿದರು.

(Phone Tapping May be the Reason for JDS Congress Coalition govt losing power)

ಇದನ್ನೂ ಓದಿ: ಪ್ರಣಬ್ ಮುಖರ್ಜಿ ಸೇರಿದಂತೆ ತನ್ನದೇ ಪಕ್ಷದ ನಾಯಕರ ಫೋನ್​ಗಳನ್ನೂ ಕಾಂಗ್ರೆಸ್ ಸರ್ಕಾರ ಕದ್ದಾಲಿಕೆ ಮಾಡಿತ್ತು!

ಇದನ್ನೂ ಓದಿ: ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣ: ಜುಲೈ 22ರಂದು ಕಾಂಗ್ರೆಸ್ ಶಾಸಕರಿಂದ ರಾಜಭವನ ಮುತ್ತಿಗೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ