AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HAL Helicopter Factory: ಏಷ್ಯಾದ ಅತಿ ದೊಡ್ಡ ಹೆಲಿಕಾಪ್ಟರ್​ ತಯಾರಿಕಾ ಘಟಕ ​ಉದ್ಘಾಟಿಸುವ ಮೋದಿ; ಇಲ್ಲಿದೆ ಅದರ ವೈಶಿಷ್ಟ್ಯ

Tumakuru HAL Helicopter Factory: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 615 ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಈ ಹೆಲಿಕಾಪ್ಟರ್ ಘಟಕ, ಹೆಲಿಪ್ಯಾಡ್, ಫ್ಲೈಟ್ ಹ್ಯಾಂಗಾರ್, ಅಡ್ಮಿನ್ ಕಟ್ಟಡ ಸೇರಿ ಕೆಲವಾರು ಸೌಲಭ್ಯಗಳನ್ನು ಒಳಗೊಂಡಿದೆ. ಇಂದಿನಿಂದ ಮೊದಲ ಹಂತದ ಕಾರ್ಯಾಚರಣೆಗಳು ನಡೆಯುತ್ತವೆ ಎನ್ನಲಾಗಿದೆ.

HAL Helicopter Factory: ಏಷ್ಯಾದ ಅತಿ ದೊಡ್ಡ ಹೆಲಿಕಾಪ್ಟರ್​ ತಯಾರಿಕಾ ಘಟಕ ​ಉದ್ಘಾಟಿಸುವ ಮೋದಿ; ಇಲ್ಲಿದೆ ಅದರ ವೈಶಿಷ್ಟ್ಯ
ತುಮಕೂರಿನ ಹೆಚ್​ಎಎಲ್​ನ ಹೆಲಿಕಾಪ್ಟರ್​ ಉತ್ಪಾದನಾ ಘಟಕ
TV9 Web
| Edited By: ವಿವೇಕ ಬಿರಾದಾರ|

Updated on: Feb 06, 2023 | 7:55 AM

Share

ತುಮಕೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು (ಫೆ. 6) ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಗ್ರಾಮದ ಬಳಿಯ ಏಷ್ಯಾದಲ್ಲೇ ಅತಿ ದೊಡ್ಡ ಹೆಚ್​ಎಎಲ್​ನ ಹೆಲಿಕಾಪ್ಟರ್​ ಉತ್ಪಾದನಾ ಘಟಕವನ್ನು (HAL Helicopter Factory) ​ಉದ್ಘಾಟಿಸಲಿದ್ದಾರೆ. 2016ರಲ್ಲಿ ಪ್ರಧಾನಿಯವರೇ ಈ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. 615 ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಈ ಹೆಲಿಕಾಪ್ಟರ್ ಘಟಕ, ಹೆಲಿಪ್ಯಾಡ್, ಫ್ಲೈಟ್ ಹ್ಯಾಂಗಾರ್, ಅಡ್ಮಿನ್ ಕಟ್ಟಡ ಸೇರಿ ಕೆಲವಾರು ಸೌಲಭ್ಯಗಳನ್ನು ಒಳಗೊಂಡಿದೆ. ಇಂದಿನಿಂದ ಮೊದಲ ಹಂತದ ಕಾರ್ಯಾಚರಣೆಗಳು ನಡೆಯುತ್ತವೆ ಎನ್ನಲಾಗಿದೆ.

ಹೆಚ್​ಎಎಲ್ ಬಳಿ ಭಾರತೀಯ ಮಿಲಟರಿಗೆ ಯುದ್ಧ ಹೆಲಿಕಾಪ್ಟರ್ ನಿರ್ಮಿಸುವ ಬಹಳಷ್ಟು ಯೋಜನೆಗಳಿವೆ. ಬೆಂಗಳೂರಿನಲ್ಲಿರುವ ಹೆಚ್​ಎಲ್​ನ ಮುಖ್ಯ ತಯಾರಕಾ ಸಂಕೀರ್ಣ ಸಾಕಾಗದೇ ಇರುವುದರಿಂದ ತುಮಕೂರಿನಲ್ಲಿ ಹೊಸದಾದ ಬೃಹತ್ ಘಟಕ ನಿರ್ಮಿಸಲಾಗಿದೆ.

ಮುಂದಿನ 20 ವರ್ಷದಲ್ಲಿ 3-15 ಟನ್ ಸಾಮರ್ಥ್ಯದ ಹೆಲಿಕಾಪ್ಟರ್ ಉತ್ಪಾದನೆ

ತುಮಕೂರಿನ ಈ ಹೆಲಿಕಾಪ್ಟರ್ ಫ್ಯಾಕ್ಟರಿಯಲ್ಲಿ ಮೊದಲಿಗೆ ಲೈಟ್ ಯುಟಿಲಿಟಿ ಹೆಲಿಕಾಪ್ಟರುಗಳನ್ನು (LUH Copters) ತಯಾರಿಸಲಾಗುತ್ತದೆ. ನಂತರ ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರುಗಳು (LCH) ಮತ್ತು ಮಲ್ಟಿರೋಲ್ ಹೆಲಿಕಾಪ್ಟರುಗಳನ್ನು (IMRH) ತಯಾರಿಸುವ ಯೋಜನೆ ಇದೆ.

ಇದನ್ನೂ ಓದಿ: ಇಂದು ಪ್ರಧಾನಿ ಮೋದಿ ಬೆಂಗಳೂರು, ತುಮಕೂರು ಭೇಟಿ; 6 ಪ್ರಮುಖ ಯೋಜನೆಗಳಿಗೆ ಚಾಲನೆ

ಮುಂದಿನ 20 ವರ್ಷದ ಕಾಲಾವಧಿಯಲ್ಲಿ 3-15 ಟನ್ ಶ್ರೇಣಿಯ 1 ಸಾವಿರಕ್ಕೂ ಹೆಚ್ಚು ಹೆಲಿಕಾಪ್ಟರುಗಳು ಹೆಚ್​ಎಎಲ್ ತಯಾರಿಸಲಿದೆ. ಇದರ ಒಟ್ಟು ಮೌಲ್ಯ 4 ಲಕ್ಷ ಕೋಟಿ ರೂಗೂ ಹೆಚ್ಚು ಎನ್ನಲಾಗಿದೆ. ಈಗಾಗಲೇ ಒಂದು ಹೆಲ್​ಯುಎಚ್ ಹೆಲಿಕಾಪ್ಟರ್ ತಯಾರಿಸಲಾಗಿದ್ದು ಅದರ ಪರೀಕ್ಷೆಯೂ ಯಶಸ್ವಿಯಾಗಿ ಉದ್ಘಾಟನೆಗೆ ಅಣಿಯಾಗಿದೆ. ಕಾರ್ಖಾನೆಯಲ್ಲಿ 6,000ಕ್ಕೂ ಹೆಚ್ಚು ಜನರಿಗೆ ಉದ್ಯೋಗದ ನಿರೀಕ್ಷೆ ಇದೆ.

ತುಮಕೂರಿನ ಈ ಹೊಸ ಫ್ಯಾಕ್ಟರಿಯಲ್ಲಿ ಆರಂಭದಲ್ಲಿ ವರ್ಷಕ್ಕೆ 30 ಹೆಲಿಕಾಪ್ಟರ್​ಗಳನ್ನು ತಯಾರಿಸುವ ಉದ್ದೇಶ ಇದೆ. ನಂತರ ಹಂತ ಹಂತವಾಗಿ ಈ ಸಂಖ್ಯೆಯನ್ನು 90ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

ಎಲ್​ಯುಎಚ್ ಅಗತ್ಯತೆ ಹೆಚ್ಚು

ಭಾರತೀಯ ವಾಯಪಡೆ ಬಳಿ ಈಗ ಚೀತಾ ಮತ್ತು ಚೇತಕ್ ಎಂಬೆರಡು ಮಾದರಿಯ ಹೆಲಿಕಾಪ್ಟರುಗಳಿವೆ. ಆದರೆ, ಇವುಗಳು ಹಳೆಯದಾಗಿದ್ದು, ಹೊಸ ತಂತ್ರಜ್ಞಾನದೊಂದಿಗೆ ತಯಾರಿಸಲಾಗಿರುವ ಲೈಟ್ ಯುಟಿಲಿಟಿ ಹೆಲಿಕಾಪ್ಟರುಗಳು ಈ ಚೀತಾ ಮತ್ತು ಚೇತಕ್ ಸ್ಥಾನಗಳನ್ನು ತುಂಬಲಿವೆ. ಒಮ್ಮೆ ಎಲ್​ಯುಎಚ್ ಕಾಪ್ಟರುಗಳು ತಕ್ಕ ಪ್ರಮಾಣದಲ್ಲಿ ನಿರ್ಮಾಣಗೊಂಡು ನಿಯೋಜನೆಗೊಂಡ ಬಳಿಕ ಚೀತಾ ಮತ್ತು ಚೇತಕ್ ಹೆಲಿಕಾಪ್ಟರುಗಳು ಕಾರ್ಯಾಚರಣೆ ನಿಲ್ಲಿಸಲಿವೆ. ಈ ಹಳೆಯ ಹೆಲಿಕಾಪ್ಟರುಗಳನ್ನು ಹೆಚ್​​ಎಎಲ್ ಸಂಸ್ಥೆಯೇ ನಿರ್ಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ