ಭೀಕರ ಅಪಘಾತ: ತುಮಕೂರಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಬಸ್ ಪಲ್ಟಿ; 4 ಮಂದಿ ಸ್ಥಳದಲ್ಲೇ ಸಾವು

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಭೀಕರ ಅಪಘಾತ: ತುಮಕೂರಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಬಸ್ ಪಲ್ಟಿ; 4 ಮಂದಿ ಸ್ಥಳದಲ್ಲೇ ಸಾವು
ಪಾವಗಡ ಬಸ್ ಅಪಘಾತದ ದೃಶ್ಯ
Follow us
TV9 Web
| Updated By: ganapathi bhat

Updated on:Mar 20, 2022 | 11:15 AM

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಎಸ್​ವಿಟಿ ಬಸ್ ಪಲ್ಟಿ ಆಗಿ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಬಳಿಕ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಎಸ್​ಪಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಸ್​ನ ಮೇಲೆ ಕೂಡ ಸುಮಾರು 40 ಜನ ಕುಳಿತಿದ್ದರು ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಎಸ್​ಪಿ ರಾಹುಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿ ಟಿವಿ9ಗೆ ಪ್ರತ್ಯಕ್ಷದರ್ಶಿ ಅನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗಾಯಾಳುಗಳ ಪೈಕಿ ಹೆಚ್ಚಿನವರು ವಿದ್ಯಾರ್ಥಿಗಳೇ ಇದ್ದಾರೆ. ಬಸ್​ ಮೇಲೆ 60 ಜನ ಕುಳಿತು ಪ್ರಯಾಣಿಸುತ್ತಿದ್ದರು. ಗಾಯಾಳುಗಳು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿಸಿದ್ದಾರೆ. ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಆಗಿದೆ. 8 ಜನ ಸಾವನ್ನಪ್ಪಿದ್ದಾರೆ. ಬಸ್ ಮೇಲೆ ಸುಮಾರು 40ಕ್ಕೂ ಹೆಚ್ಚು ಜನರು ಇದ್ದರು. ಓವರ್ ಲೋಡ್ ಆಗಿದ್ದ ಹಿನ್ನೆಲೆ ಸ್ಟಾಪ್ ಕೊಟ್ಟಿರಲಿಲ್ಲ. ಕೆಲ ಗ್ರಾಮಗಳಲ್ಲಿ ಬಸ್ ಸ್ಟಾಪ್ ನೀಡದೆ ಹೋಗಿತ್ತು. ಅಪಘಾತವಾದ ಕೂಡಲೇ ಚಾಲಕ, ನಿರ್ವಾಹಕ ಪರಾರಿ ಆಗಿದ್ದಾರೆ. ಖಾಸಗಿ ಬಸ್ ಚಕ್ರಕ್ಕೂ ಸಿಲುಕಿ ಕೆಲವರು ಮೃತಪಟ್ಟಿದ್ದಾರೆ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ಗೋಪಾಲ್ ಮಾಹಿತಿ ನೀಡಿದ್ದಾರೆ.

ಶ್ರೀನಿವಾಸ್ ಮೂರ್ತಿ ಒಡೆತನದ ಎಸ್‌ವಿಟಿ ಬಸ್ ಪಲ್ಟಿ ಆಗಿದೆ. ಪ್ರತಿ ದಿನ ಪಾವಗಡ- ವೈ.ಎನ್. ಕೋಟೆ ಮಧ್ಯೆ ಈ ಬಸ್ ಸಂಚರಿಸುತ್ತಿತ್ತು ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ಪಳವಳ್ಳಿಯ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸಿದ ಪಳವಳ್ಳಿ ಕಟ್ಟೆ ಬಳಿ ಜನರ ಜಮಾವಣೆ ಆಗಿದೆ. ಅಪಘಾತ ನೋಡಲು ನೂರಾರು ಜನರು ಗುಂಪುಗೂಡಿದ್ದಾರೆ. ಸ್ಥಳದಲ್ಲಿ ಗುಂಪುಗೂಡಿದ್ದ ಜನರನ್ನು ಪೊಲೀಸರು ಚದುರಿಸಿದ್ದಾರೆ. ಗಾಯಾಳುಗಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲ ಗಾಯಾಳುಗಳು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಾಲಕ ಅತಿ ವೇಗವಾಗಿ ಖಾಸಗಿ ಬಸ್ ಚಲಾಯಿಸುತ್ತಿದ್ದ. ಹೀಗಾಗಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ನಮ್ಮ ಮಾರ್ಗದಲ್ಲಿ ಎಲ್ಲಾ ಬಸ್ ವೇಗವಾಗಿ ಓಡಿಸ್ತಾರೆ. ಇವರಿಗೆ ಯಾರೂ ಹೇಳೋರು ಕೇಳೋರೇ ಇಲ್ಲ ಎಂದು ಟಿವಿ9ಗೆ ಪ್ರತ್ಯಕ್ಷದರ್ಶಿ ಪ್ರಸಾದ್ ಹೇಳಿದ್ದಾರೆ. ಬೆಳಗ್ಗೆ 9.20ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಬೆಳಗ್ಗೆ 8.30 ಕ್ಕೆ ವೈ.ಎನ್. ಹೊಸಕೋಟೆಯಿಂದ ಹೊರಟಿತ್ತು. ವೈ.ಎನ್. ಹೊಸಕೋಟೆ, ಪಾವಗಡದ ಮಧ್ಯೆ ಬಸ್ ಸಂಚಾರ ನಡೆಸುತ್ತಿತ್ತು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಮೂಲ್ಯ, ಅಜೀತ್ ಎಂಬವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್‌ನಲ್ಲಿದ್ದ ಪೋತಗಾನಹಳ್ಳಿಯ ಅಮೂಲ್ಯ, ಸೂಲನಾಯಕನಹಳ್ಳಿಯ ಅಜಿತ್, ವೈ.ಎನ್. ಹೊಸಕೋಟೆಯ ಕಲ್ಯಾಣ್, ಬೆಸ್ತರಹಳ್ಳಿಯ ಶಾನವಾಜ್ ಸೇರಿ ಒಟ್ಟು 8 ಜನರು ದುರ್ಮರಣವನ್ನಪ್ಪಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಕೈ ಕಾಲು ಮುರಿತ ಆಗಿದೆ. 10ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರಕರಣಕ್ಕೆ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ಇದೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಖಾಸಗಿ ಬಸ್ ಪಲ್ಟಿಯಾಗಿ 8 ಜನ ದುರ್ಮರಣ ಪ್ರಕರಣಕ್ಕೆ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ಇದೆ. ಕೂಡಲೇ ಘಟನಾ ಸ್ಥಳಕ್ಕೆ ತೆರಳಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ನಾನು ಕೂಡ ಕೆಲವೇ ಕ್ಷಣಗಳಲ್ಲಿ ಘಟನಾ ಸ್ಥಳಕ್ಕೆ ಹೋಗುವೆ ಎಂದು ಟಿವಿ9ಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಡಿಸಿ, ಎಸ್‌ಪಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಲು ಸೂಚಿಸಿದ್ದೇನೆ. ಚಿಕಿತ್ಸೆಗೆ ಕೂಡಲೇ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಹಲವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಇದೆ. ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಪ್ರಾಣಹಾನಿಯಾಗದಂತೆ ಎಲ್ಲ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಖಾಸಗಿ ಬಸ್ ಮಾಹಿತಿ ಪಡೆಯುವಂತೆಯೂ ಸೂಚಿಸಿದ್ದೇನೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರಕಿಸಲು ನಿರ್ದೇಶಿಸಿದ್ದೇನೆ: ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಗ್ರಾಮದಲ್ಲಿ ನಡೆದ ಭೀಕರ ಬಸ್ ಅಪಘಾತದ ಸುದ್ದಿ ತಿಳಿದು ಆಘಾತವಾಗಿದೆ. ಅಪಘಾತದಲ್ಲಿ ಎಂಟು ಮಂದಿ ಪ್ರಯಾಣಿಕರು ಮರಣ ಹೊಂದಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಸಿಬ್ಬಂದಿ, ದುರಂತ ಸ್ಥಳಕ್ಕೆ ತಕ್ಷಣ ಧಾವಿಸಿ ಎಲ್ಲಾ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರಕಿಸಲು ನಿರ್ದೇಶಿಸಿದ್ದೇನೆ. ಜಿಲ್ಲಾ ಎಸ್​ಪಿ ಸ್ಥಳಕ್ಕೆ ತೆರಳಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಜವಾಬ್ದಾರಿ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಸಹಾಯ ಮಾಡ್ತೇವೆ: ಬಿ ಶ್ರೀರಾಮುಲು

ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ. ಬಸ್ ಫಿಟ್‌ನೆಟ್ ಸೇರಿದಂತೆ ಎಲ್ಲ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಸ್ಥರು, ಗಾಯಾಳುಗಳಿಗೆ ಸಹಾಯ ಮಾಡ್ತೇವೆ. RTO ಅಧಿಕಾರಿಗಳ ತಪ್ಪಿದ್ದರೂ ಕೂಡಲೇ ಕ್ರಮಕೈಗೊಳ್ತೇವೆ ಎಂದು ಟಿವಿ9ಗೆ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸರ್ಕಾರ ಸಾರಿಗೆ ಸಚಿವರು ಅಥವಾ ಸಂಬಂಧಪಟ್ಟ ಅಧಿಕಾರಿಯನ್ನ ಸ್ಥಳಕ್ಕೆ ಕಳುಹಿಸಬೇಕು. ಸಾವನ್ನಪ್ಪಿದವರಿಗೆ ದೊಡ್ಡ ಮಟ್ಟಿನ ಪರಿಹಾರವನ್ನ ಸರ್ಕಾರ ಕೊಡಬೇಕು. ಪಾವಗಡ ಅತ್ಯಂತ ಬರಗಾಲ ಹೊಂದಿರುವ ತಾಲ್ಲೂಕು. ಹೀಗಾಗಿ ಬಡತನ ಇರುವವರಿಗೆ ಹೆಚ್ಚಿನ ಪರಿಹಾರ ಕೊಡಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಪಲ್ಟಿಯಾದ ಖಾಸಗಿ ಬಸ್‌ನ ಎಲ್ಲಾ ದಾಖಲೆಗಳು ಸರಿಯಾಗಿವೆ

ಪಲ್ಟಿಯಾದ ಖಾಸಗಿ ಬಸ್‌ನ ಎಲ್ಲಾ ದಾಖಲೆಗಳು ಸರಿಯಾಗಿವೆ ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ನರೇಂದ್ರ ಹೋಳ್ಕರ್ ಹೇಳಿದ್ದಾರೆ. ಪಲ್ಟಿಯಾದ ಖಾಸಗಿ ಬಸ್‌ನಲ್ಲಿ ಓವರ್ ಲೋಡ್ ಮಾಡಿದ್ದರು. ಅತಿ ವೇಗವಾಗಿ ಬಸ್ ಚಾಲನೆಯಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಆಗಿದೆ. ಸ್ಥಳಕ್ಕೆ ತೆರಳಿ ಪರಿಶೀಲನೆ ಬಳಿಕ ಎಲ್ಲ ಮಾಹಿತಿ ಸಿಗಲಿದೆ ಎಂದು ಟಿವಿ9ಗೆ ಜಂಟಿ ಆಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರ ಸಾವು

ಇದನ್ನೂ ಓದಿ: ಮಡಿಕೇರಿ ಬಳಿ ಹೊಳೆಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯ

Published On - 9:52 am, Sat, 19 March 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್