ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಎಎಸ್ಐ(ASI) ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಜನವರಿ 31 ರಂದು ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಲಿದೆ. 2017ರ ಜ.15ರಂದು ತುಮಕೂರಿನ ಅಂತರಸನಹಳ್ಳಿ ಸೇತುವೆ ಬಳಿ ಅತ್ಯಾಚಾರವೆಸಗಿದ್ದ(Rape) ಎಎಸ್ಐ ಉಮೇಶಯ್ಯ ಸದ್ಯ ಜೈಲು(Jail) ಸೇರುವಂತಾಗಿದೆ. ತುಮಕೂರು ಗ್ರಾಮಾಂತರ ಠಾಣೆ ಎಎಸ್ಐ ಆಗಿದ್ದ ಉಮೇಶಯ್ಯ, ಡ್ರಾಪ್ ಕೊಡುವ ನೆಪದಲ್ಲಿ ಬೊಲೆರೊ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಸಂತ್ರಸ್ತೆಯ ಸಂಬಂಧಿಕರು ಈ ಸಂಬಂಧ ದೂರು ನೀಡಿದ್ದರು. ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಎಎಸ್ಐ ಅತ್ಯಾಚಾರ ಪ್ರಕರಣದ ಕುರಿತು ಸರ್ಕಾರಿ ಅಭಿಯೋಜಕಿ ವಿ.ಎ.ಕವಿತಾ ವಾದ ಮಂಡಿಸಿದ್ದರು. ಜಡ್ಜ್ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ವಾದ ಪ್ರತಿವಾದ ಆಲಿಸಿದ್ದು, ಇಂದು ತೀರ್ಪು ಪ್ರಕಟಿಸಿದ್ದಾರೆ.
ಎರಡನೇ ಆರೋಪಿ ಖಾಸಗಿ ವಾಹನ ಚಾಲಕ ಈಶ್ವರನನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ ಆದೇಶ ನೀಡಿದೆ. ಇದೇ ಜನವರಿ 31 ರಂದು ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟ ಮಾಡಲಿದ್ದು, ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ ಪರಿಹಾರ ಸಿಗುವ ಸಾಧ್ಯತೆ ಇದೆ.
ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ; ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್
ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್.ಡಿ.ಕೋಟೆ ತಾಲೂಕಿನ ಪ್ರೌಢ ಶಾಲೆ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮುಖ್ಯ ಶಿಕ್ಷಕ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಪರಿಶೀಲಿಸಿ ಕ್ರಮಕ್ಕೆ ಬಿಇಒ ಚಂದ್ರಕಾಂತ್ ಸೂಚಿಸಿದ್ದರು. ಸದ್ಯ ಮುಖ್ಯ ಶಿಕ್ಷಕನ ವಿರುದ್ಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ: ಪತಿಯಿಂದ ವಿಚ್ಛೇದಿತ ಪತ್ನಿ ಹತ್ಯೆ
ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಪತಿ ತನ್ನ ವಿಚ್ಛೇದಿತ ಪತ್ನಿಯನ್ನು ಹತ್ಯೆ ಮಾಡಿದ್ದಾರೆ. ಶಾಲಿನಿ ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಪತ್ನಿ ಶಾಲಿನಿ (32) ಕೊಲೆಯಾದ ಮಹಿಳೆ. ಪತ್ನಿ ಹತ್ಯೆಗೈದು ವಿಚ್ಛೇದಿತ ಪತಿ ಸುರೇಶ್(40) ಪರಾರಿಯಾಗಿದ್ದಾನೆ. 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ಸದ್ಯ ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿಚ್ಛೇದನದ ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಶಾಲಿನಿ ಜೀವನ ಸಾಗಿಸುತ್ತಿದ್ದಳು. ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಖಿನ್ನತೆ ಒಳಗಾಗಿದ್ದ ಸುರೇಶ್. ಪತ್ನಿ ಕೆಲಸದಿಂದ ಬರುವುದನ್ನೇ ಕಾದು ಕತ್ತು ಕೂಯ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:
ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯ ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; ನಾಲ್ವರ ಬಂಧನ
ಅಪ್ರಾಪ್ತ ಬಾಲಕಿ ಮೇಲೆ ಉಪನ್ಯಾಸಕನಿಂದ ಅತ್ಯಾಚಾರ ಆರೋಪ; ಆರೋಪಿ ಜಾಮೀನು ರದ್ದುಪಡಿಸಿದ ಹೈಕೋರ್ಟ್