ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ ಸೋಮವಾರ ಅಂದ್ರೆ ಹತ್ತು ದಿನಗಳ ಹಿಂದೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿತ್ತು. ಬಾಂಡ್ ಶ್ಯೂರಿಟಿ ಸಮಸ್ಯೆಯಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಇಂದು ಕಾನೂನು ಪ್ರಕ್ರಿಯೆ ಜೊತೆಗೆ ಬಾಂಡ್ ಶ್ಯೂರಿಟಿ ಸಿಕ್ಕ ಹಿನ್ನೆಲೆ ಬಿಡುಗಡೆಯಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
ರೇಣುಕಾಸ್ವಾಮಿ ಕೊಲೆ: ಬೇಲ್ ಸಿಕ್ಕು 10 ದಿನದ ಬಳಿಕ ಜೈಲಿನಿಂದ ಆಚೆ ಬಂದ ಡಿ ಗ್ಯಾಂಗ್ ಸದಸ್ಯರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 02, 2024 | 6:03 PM

ತುಮಕೂರು, ಅ.02: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ(Renukaswamy murder case) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಸೇರಿಕೊಂಡು ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ಮೊದಲಿಗೆ ಪೊಲೀಸರ ಬಳಿ ಶರಣಾಗತಿ ಆಗಿದ್ದ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್​ರನ್ನ ಜೂನ್ 26 ಕ್ಕೆ ಬೆಂಗಳೂರು ಪರಪ್ಪನ ಅಗ್ರಹಾರದ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

ಸದ್ಯ 15 ನೇ ಆರೋಪಿಯಾದ ಕಾರ್ತಿಕ್, 16 ಆರೋಪಿ ಕೇಶವಮೂರ್ತಿ, 17 ಆರೋಪಿಯಾದ ನಿಖಿಲ್​ಗೆ ಎರಡು ಲಕ್ಷ ಬಾಂಡ್ ಹಾಗೂ ತಲಾ ಇಬ್ಬರ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಆಗಿದೆ. ಸತತ ಹತ್ತು ದಿನಗಳ ಬಳಿಕ ಬಿಡುಗಡೆ ಆಗಿದ್ದು, ಎ 16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಹಾಗೂ ಇನ್ನಿಬ್ಬರಿಗೆ 57 ನೇ ಸಿಸಿಹೆಚ್ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ; ದಾಸನಿಗೆ ಮತ್ತೆ ನಿರಾಸೆ

ಜಾಮೀನು ಮಂಜೂರು ಆದರೂ ಹತ್ತು ದಿನಗಳಿಂದ ಬಿಡುಗಡೆ ಆಗಿರಲಿಲ್ಲ. ಸದ್ಯ ಸಂಬಂಧಿಕರು ಜಾಮೀನು ಶ್ಯೂರಿಟಿ ನೀಡಿ ಬಿಡುಗಡೆ ಮಾಡಿಸಿದ್ದಾರೆ. ತಡರಾತ್ರಿಯೇ ಮೇಲ್ ಮೂಲಕ ಜಾಮೀನು ಆದೇಶ ಬಂದರೂ ಸಮಯ ಮೀರಿದ ಕಾರಣ ಇಂದು ಬೆಳಿಗ್ಗೆ 10 ಗಂಟೆಗೆ ತುಮಕೂರು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೊರ ಬಂದ ಮೂವರು ಪ್ರತಿಕ್ರಿಯೆ ನೀಡಲು ನಕಾರ ವ್ಯಕ್ತಪಡಿಸಿದ್ದು, ನಮಗೆ ಏನು ಗೊತ್ತಿಲ್ಲ ಎಲ್ಲವೂ ತನಿಖಾಧಿಕಾರಿಗಳ ಮುಂದೆ ವಿವರವಾಗಿ ಹೇಳಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಮತ್ತೋರ್ವ ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿಯೇ ಉಳಿದಿದ್ದು, ಮೂವರು ಬಿಡುಗಡೆ ಆಗಿದ್ದಾರೆ. ಹೊರಬಂದ ಬಳಿಕ ನುಣುಚಿಕೊಳ್ತಿದ್ದ ಮೂವರು ತನ್ನ ಸ್ನೇಹಿತರು ಇನೋವಾ ಕಾರಿನಲ್ಲಿ ಬಂದ ತಕ್ಷಣ ಹತ್ತಿ ಹೊರಟು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್