ತುಮಕೂರು: ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಮೂವರು ಸಾವು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು: ಭೀಕರ ರಸ್ತೆ ಅಪಘಾತ ಒಂದೇ ಕುಟುಂಬದ ಮೂವರು ಸಾವು
ರಸ್ತೆ ಅಪಘಾತ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 02, 2023 | 12:00 PM

ತುಮಕೂರು/ಮಂಡ್ಯ ಅ.02: ತುಮಕೂರು (Tumakuru) ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗ್ರಾಮದ ಬಳಿ ದ್ವಿಚಕ್ರವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೈಕ್​​ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತು ಮಂಡ್ಯ (Mandya) ಜಿಲ್ಲೆ, ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಕ್ಯಾಂಟರ್​ಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಸಾವರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೊರಟಗೆರೆ ಭೀಕರ ಅಪಘಾತ: ಮೃತರನ್ನು ತಾಯಿ, ಮಗ ಹಾಗೂ ಅಣ್ಣನ ಮಗ ಎಂದು ಗುರುತಿಸಲಾಗಿದೆ. ಮಧುಗಿರಿಯ ವೀರೇನಹಳ್ಳಿ ತಾಂಡದ ನಿವಾಸಿಗಳಾದ ಮೂವರು ದ್ವಿಚಕ್ರ ವಾಹನದಲ್ಲಿ ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುತ್ತಿದ್ದ ವೇಳೆ, ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದ ಬಳಿ ದುರಂತ ಸಂಭವಿಸಿದೆ.

ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೊರಟಗೆರೆ ಸಬ್ಇಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಬೆಂಗಳೂರಿನಿಂದ ಹೋಗಿ ರೈಲಿಗೆ ತಲೆ ಕೊಟ್ರು

ಕ್ಯಾಂಟರ್​ಗೆ ಬೈಕ್​ ಡಿಕ್ಕಿ: ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕಾಶಿವಿಶ್ವನಾಥ್ (59) ಮೃತ ದುರ್ದೈವಿ. ಮೈಸೂರು ಜಿಲ್ಲೆ ನಂಜನಗೂಡು ನಿವಾಸಿಯಾಗಿದ ಕಾಶಿವಿಶ್ವನಾಥ್ ಮಗನನ್ನ ಬೆಂಗಳೂರಿಗೆ ಬಿಡಲು ಹೋಗುತ್ತಿರುವ ವೇಳೆ, ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಂದೆ ಕಾಶಿವಿಶ್ವನಾಥ್​ ಸ್ಥಳದಲ್ಲೇ ಸಾವೀಗಿಡಾಗಿದ್ದಾನೆ. ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Mon, 2 October 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ