ಪರವಾನಗಿ ಇಲ್ಲದೆ ಓಡಿಸ್ತಿದ್ದ 15 ಆಟೋಗಳು, 1 ಶಾಲಾ ಬಸ್ ವಶಕ್ಕೆ ಪಡೆದ​ ಆರ್​​ಟಿಒ ಅಧಿಕಾರಿಗಳು

ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್​ನ್ನು​ ಆರ್​​ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ ಆರ್​ಟಿಒ ಇನ್ಸ್​ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಾಕ್​ ನೀಡಿದ್ದಾರೆ.

ಪರವಾನಗಿ ಇಲ್ಲದೆ ಓಡಿಸ್ತಿದ್ದ 15 ಆಟೋಗಳು, 1 ಶಾಲಾ ಬಸ್ ವಶಕ್ಕೆ ಪಡೆದ​ ಆರ್​​ಟಿಒ ಅಧಿಕಾರಿಗಳು
ಆರ್​ಟಿಒ ಸೀಜ್​
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 22, 2023 | 10:59 AM

ತುಮಕೂರು, ಸೆ.22: ತುಮಕೂರು ಆರ್​ಟಿಒ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಶಿರಾ ಪಟ್ಟಣ (Sira Town) ದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್​ನ್ನು​ ಆರ್​​ಟಿಒ (RTO Official) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ ಆರ್​ಟಿಒ ಇನ್ಸ್​ಪೆಕ್ಟರ್ ಶರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶಾಕ್​ ನೀಡಿದ್ದಾರೆ. ಬಹಳ ದಿನಗಳಿಂದ ಸಾರಿಗೆ ಇಲಾಖೆಗೆ ಕಣ್ಣುತಪ್ಪಿಸಿ ಈ ವಾಹನಗಳು ಸಂಚರಿಸುತ್ತಿದ್ದವು. ಇದೀಗ ವಶಕ್ಕೆ ಪಡೆದಿದ್ದು, ಸಾರಿಗೆ ಇಲಾಖೆ ಅಧಿಕಾರಿಗಳಿಂದ ತನಿಖೆ ಮುಂದುವರಿದಿದೆ.

ಕೆರೆಗಳಲ್ಲಿ ಅಕ್ರಮ ಮಣ್ಣು ಮಾಫಿಯಾ, ಒಂದು ಲಾರಿ, ಜೆಸಿಬಿ ಪೊಲೀಸರ ವಶಕ್ಕೆ

ಕೋಲಾರ: ಇತ್ತೀಚೆಗೆ ರಾಜ್ಯದ ಗದಗದಲ್ಲಿ ಮಣ್ಣು ಮಾಫಿಯಾ ಬೆಳಕಿಗೆ ಬಂದಿತ್ತು. ಇದೀಗ ಕೋಲಾರ ತಾಲೂಕಿನ ಆಲೇರಿ ಕೆರೆಯಲ್ಲಿ ಅಕ್ರಮ ಮಣ್ಣು ಮಾಫಿಯಾ ನಡೆಯುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಒಂದು ಲಾರಿ, ಜೆಸಿಬಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲಾ ಪಂಚಾಯತ್​​ CEO ಪದ್ಮಾಬಸಂತಪ್ಪ ಸೂಚನೆ ಮೇರೆಗೆ ಕಾರ್ಯಾಚರಣೆ ಮಾಡಲಾಗಿತ್ತು. ಇದೀಗ ಲಾರಿ, ಜೆಸಿಬಿಯನ್ನು ಜಪ್ತಿ ಮಾಡಲಾಗಿದ್ದು, ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ ಖಾಸಗಿ ಬಸ್​​ಗಳು​​: ಬೆಂಗಳೂರು, ಉಡುಪಿಯಲ್ಲಿ ಆರ್​​ಟಿಒ ಅಧಿಕಾರಿಗಳ ಕಾರ್ಯಾಚರಣೆ

ಹಳೇ ವೈಷಮ್ಯ; ಗುಂಪು ಗಲಾಟೆಯಲ್ಲಿ ಐವರಿಗೆ ಚಾಕು ಇರಿತ ಶಿವಮೊಗ್ಗ: ನಗರದ ದ್ರೌಪದಮ್ಮ ಸರ್ಕಲ್​ನಲ್ಲಿ ತಡರಾತ್ರಿ ಹಳೇ ವೈಷಮ್ಯ ಹಿನ್ನಲೆ ಎರಡು ಗುಂಪಿನ ಗಲಾಟೆಯಲ್ಲಿ ಐವರಿಗೆ ಚಾಕು ಇರಿದ ಘಟನೆ ನಡೆದಿದೆ. ಪವನ್ ಹಾಗೂ ಕಿರಣ್ ಎಂಬಾತನ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ