AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾದ ಪರಿಣಾಮ ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಘಟನೆ ಸಂಭವಿಸಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ.

ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jan 09, 2026 | 8:51 AM

Share

ತುಮಕೂರು, ಜನವರಿ 9: ತುಮಕೂರು (Tumkur) ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ (Accident) ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಇವರೇ ಮೃತ ದುರ್ದೈವಿಗಳು. ಗಾಯಾಳುಗಳು ಪ್ರಶಾಂತ್ (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಉಲಗಪ್ಪ (32), ರಾಕೇಶ್ (24) ತಿರುಪತಿ (33), ಶ್ರೀನಿವಾಸ್ (32) ಎಂದು ತಿಳಿದುಬಂದಿದೆ.

ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೂಸರ್​​ನಲ್ಲಿ ಒಟ್ಟು 12 ಮಂದಿ ಪ್ರಯಾಣ ಮಾಡುತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಗಳ ಕಳೆದುಕೊಂಡು ತಂದೆ ಉಲಗಪ್ಪ ಕಣ್ಣೀರು

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡು ಆಕೆಯ ತಂದೆ ಉಲಗಪ್ಪ ಕಣ್ಣೀರು ಹಾಕುತ್ತಿದ್ದಾರೆ. ಸಾಕ್ಷಿ ನನ್ನ ಮಗಳು. ಶಬರಿ ಮಲೆಗೆ 5 ರಂದು ತೆರಳಿದ್ದೆವು. ದೇವರ ದರ್ಶನ ಮಾಡಿಕೊಂಡು ವಾಪಾಸ್ ಆಗುತಿದ್ದೆವು. ಮಗಳು ನನ್ನ ಪಕ್ಕದಲ್ಲೇ ಮಲಗಿದ್ದಳು. ಅಪಘಾತ ಹೇಗಾಯಿತು ಎಂದು ಗೊತ್ತಿಲ್ಲ. ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ನಾವು 11 ಜನ ಪ್ರಯಾಣ ಮಾಡುತಿದ್ದೆವು. 10 ಜನ ಅಕ್ಕಪಕ್ಕದ ಊರಿನ ನಾವು ಒಟ್ಟಿಗೆ ಮಾಲೆ ಹಾಕಿದ್ದೆವು. ಒಟ್ಟಾಗಿ ಶಬರಿ ಮಲೆಗೆ ತೆರಳಿದ್ದೆವು. ಕಾರು ಚಾಲಕ ಸೇರಿ 11 ಜನ ಪ್ರಯಾಣ ಮಾಡುತಿದ್ದೆವು. ನನ್ನ ಮಗಳು ಒಂದನೇ ತರಗತಿ ಓದುತಿದ್ದಳು. ಎರಡನೇ ಬಾರಿ ಶಬರಿ ಮಾಲೆಗೆ ಕರೆದೊಯ್ದಿದ್ದೆವು. ಒಳ್ಳೆಯದಾಗಲಿ ಎಂದು ದೇವರ ದರ್ಶನ ಮಾಡಿ ವಾಪಾಸ್ ಆಗುತಿದ್ದೆವು. ಹೀಗಾಗಿದೆ ಎಂದು ಉಲಗಪ್ಪ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಹುಲಿಗಪ್ಪ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 5 ರಂದು ಶಬರಿಮಲೆಗೆ ತೆರಳಿದ್ದ ಮಾಲಾಧಾರಿಗಳು 7 ರಂದು ತಲುಪಿದ್ದರು. ಬುಧವಾರ ಶಬರಿಮಲೆಯಲ್ಲಿ ಅಯ್ಯಪ್ಪ ದರ್ಶನ ಪಡೆದಿದ್ದ ಮಾಲಾಧಾರಿಗಳು ಗುರುವಾರ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ತೆರಳಿದ್ದರು. ಬಳಿಕ ಮಧ್ಯಾಹ್ನ ತಮಿಳುನಾಡಿನ ಪಳನಿಯಿಂದ ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Fri, 9 January 26

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್