AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಎಸಿ ಹಾಕೊಂಡು ಮಗಿದ್ದಲ್ಲೇ ವ್ಯಕ್ತಿ ಸಾವು; ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ

ತುಮಕೂರಿನ ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಎಸಿ ಹಾಕಿಕೊಂಡು ಕಾರಿನಲ್ಲಿ ಮಲಗಿದ್ದ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಇನ್ನು ದಾವಣಗೆರೆಯಲ್ಲಿ ಗುಡುಗು ಸಿಡಿಲಿನ ಶಬ್ದಕ್ಕೆ ಹೃದಯಾಘಾತವಾಗಿ ಓರ್ವ ಶಿಕ್ಷಕ ನಿಧನರಾಗಿದ್ದಾರೆ.

ಪ್ರತ್ಯೇಕ ಘಟನೆ: ಎಸಿ ಹಾಕೊಂಡು ಮಗಿದ್ದಲ್ಲೇ ವ್ಯಕ್ತಿ ಸಾವು; ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ
ಕಾರು ಅಪಘಾತImage Credit source: tv9 kannada
ಜಗದೀಶ ಬಿ.
| Edited By: |

Updated on:May 18, 2026 | 9:35 PM

Share

ತುಮಕೂರು, ಮೇ 18: ಭೀಕರ ರಸ್ತೆ ಅಪಘಾತದಲ್ಲಿ (accident) ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ (death) ದಾರುಣ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರು ನಿವಾಸಿಗಳಾದ ಜಯಮಾಲಾ (60) ಮತ್ತು ರಾಜೇಶ್ವರಿ (40) ಎಂದು ಗುರುತಿಸಲಾಗಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಜಯಮಾಲಾ ಅವರು ಹಲವು ವರ್ಷಗಳಿಂದ ಮಗಳು ರಾಜೇಶ್ವರಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ತಾಯಿ-ಮಗಳು ಸಾವು
  • AC ಹಾಕಿ ಕಾರಿನಲ್ಲಿ ಮಲಗಿದ್ದ ಚಾಲಕ ಸಾವು
  • ಗುಡುಗು ಸಿಡಿಲಿನ ಅಬ್ಬರಕ್ಕೆ ಹೃದಯಾಘಾತ: ಶಿಕ್ಷಕ ಸಾವು

ನಡೆದಿದ್ದೇನು?

ರಾಜೇಶ್ವರಿ ತಮ್ಮ ಮಗ ಪ್ರೀತಮ್‌ನನ್ನು ಶ್ರವಣಬೆಳಗೊಳದ ಶಾಲೆಗೆ ಸೇರಿಸಲು ಕಾರಿನಲ್ಲಿ ತೆರಳುತ್ತಿದ್ದರು. ಜೊತೆಗೆ ತಾಯಿ ಜಯಮಾಲಾ ಕೂಡ ಇದ್ದರು. ಕುಣಿಗಲ್ ತಾಲ್ಲೂಕಿನ ಉರ್ಕೆಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಯಮಾಲಾ ಹಾಗೂ ರಾಜೇಶ್ವರಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ಮಾರುತಿ ಹಾಗೂ ರಾಜೇಶ್ವರಿ ಮಗ ಪ್ರೀತಮ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

AC ಹಾಕಿಕೊಂಡು ಕಾರಿನಲ್ಲಿ ಮಲಗಿದ್ದ ಚಾಲಕ ಸಾವು

ಗ್ಲಾಸ್ ಏರಿಸಿಕೊಂಡು ಎಸಿ ಹಾಕಿಕೊಂಡು ಕಾರಿನಲ್ಲಿ ಮಲಗಿದ್ದ ಚಾಲಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಪೀಣ್ಯ ಬಳಿ ನೆಲಗೆದರಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಖಾಸಗಿ ಕಂಪನಿಯೊಂದರ ಕಾರು ಚಾಲಕ ರಸ್ತೆ ಪಕ್ಕ ಕಾರು ನಿಲ್ಲಿಸಿ, ಎಲ್ಲಾ ಕಿಟಕಿಗಳನ್ನು ಏರಿಸಿ AC ಹಾಕಿಕೊಂಡು ಮಲಗಿದ್ದರು. ತುಂಬಾ ಹೊತ್ತು ಕಾರು ಅದೇ ಸ್ಥಳದಲ್ಲಿ ನಿಂತಿದ್ದರಿಂದ ಅನುಮಾನಗೊಂಡ ಸಾರ್ವಜನಿಕರು ಕಾರಿನ ಬಳಿ ಹೋಗಿ ಪರಿಶೀಲಿಸಿದ್ದಾರೆ. ಚಾಲಕ ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ ಕಲ್ಲಿನಿಂದ ಕಿಟಕಿ ಗಾಜು ಒಡೆದು ನೋಡಿದಾಗ, ಕಾರಿನೊಳಗೆ ಚಾಲಕ ಮೃತಪಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಪೀಣ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸಿಡಿಲಿನ ಅಬ್ಬರಕ್ಕೆ ಹೃದಯಾಘಾತವಾಗಿ ಶಿಕ್ಷಕ ಸಾವು

ಸಿಡಿಲಿನ ಅಬ್ಬರಕ್ಕೆ ಹೃದಯಾಘಾತವಾಗಿ ಶಿಕ್ಷಕ ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ‌ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ(56) ಮೃತ ದುರ್ದೈವಿ. ಮನೆ ಮುಂದೆ ನಿಂತಿದ್ದಾಗ ಸಿಡಿಲಿನ ಶಬ್ದಕ್ಕೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಬಸ್ ಡಿಕ್ಕಿಯಾಗಿ ಗೂಡ್ಸ್ ಆಟೋ ಚಾಲಕ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಗೂಡ್ಸ್ ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ಕೋಲಾರ ತಾಲೂಕಿನ ಸಿಂಗೇಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ರಾಮುಡು ಮೃತ ಆಟೋ ಚಾಲಕ. ಕೋಲಾರದಲ್ಲಿ ಬಿಸ್ಕತ್ ತುಂಬಿಕೊಂಡು ಆಂಧ್ರಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಬಸ್​ನಲ್ಲಿ ಅಳವಡಿಸಿದ್ದ ಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:34 pm, Mon, 18 May 26

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ