ಏಕಾಏಕಿ ಮನೆಗೆ ನುಗ್ಗಿ ಕರೆದುಕೊಂಡು ಹೋದರು, ಅಪರಾಧಿಯಂತೆ ನಡೆಸಿಕೊಂಡರು: ಪೊಲೀಸರ ವಿರುದ್ಧ ಶಕುಂತಲಾ ನಟರಾಜ್​ ಆರೋಪ

ನಿನ್ನೆ ಬೆಳಗ್ಗೆ 7.30 ಸುಮಾರಿಗೆ 8 ಜನ ಪೊಲೀಸರು ಏಕಾಏಕಿ ಮನೆಗೆ ನುಗ್ಗಿ, ಮಕ್ಕಳ ಮುಂದೆಯೇ ನನ್ನನ್ನು ಕರೆದುಕೊಂಡು ಹೋಗಿದ್ದಾರೆ. ಫೋನ್​​​ ಕಸಿದುಕೊಂಡು ಅಪರಾಧಿ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಸಹಸಂಚಾಲಕಿ ಶಕುಂತಲಾ ನಟರಾಜ್​ ಆರೋಪಿಸಿದ್ದಾರೆ.

Follow us
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2023 | 4:33 PM

ತುಮಕೂರು, ಜುಲೈ 29: ಉಡುಪಿ ಕಾಲೇಜ್ ವಿದ್ಯಾರ್ಥಿನಿಯರ ವಿಡಿಯೋ ಕೇಸ್​​ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಕುಟುಂಬದ ವಿರುದ್ಧ ಟ್ವಿಟ್​​ ಮಾಡಿದ್ದ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹಸಂಚಾಲಕಿ ಶಕುಂತಲಾ ನಟರಾಜ್​​ರನ್ನು ನಿನ್ನೆ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ಇದೀಗ ಟಿವಿ9 ಜತೆ ಮಾತನಾಡಿದ ಅವರು, ಮನೆಗೆ ಬಂದು ಏಕಾಏಕಿ ನನ್ನನ್ನು ಪೊಲೀಸರು ಕರದುಕೊಂಡು ಹೋದರು. ಫೋನ್​​​ ಕಸಿದುಕೊಂಡು ಅಪರಾಧಿ ರೀತಿಯಲ್ಲಿ ನಡೆಸಿಕೊಂಡರು ಎಂದು ಆರೋಪಿಸಿದ್ದಾರೆ.

ನಿನ್ನೆ ಬೆಳಗ್ಗೆ 7.30 ಸುಮಾರಿಗೆ 8 ಜನ ಪೊಲೀಸರು ನಮ್ಮ ಮನೆಗೆ ಬಂದಿದ್ದರು. ಡ್ರೆಸ್​ ಬದಲಾಯಿಸಿಕೊಳ್ಳಲು ಬಿಡದೆ, ಮಕ್ಕಳ ಮುಂದೆಯೇ ನನ್ನನ್ನು ಕರೆದುಕೊಂಡು ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆಗೆ ಹೋದರು. ಪೊಲೀಸ್ ಠಾಣೆಯಲ್ಲಿ ಹೀಗೆಲ್ಲಾ ಬರೆಯಬೇಡಿ ಎಂದು ಹೇಳಿದರು. ಬಳಿಕ ನಮ್ಮ ಪಕ್ಷದ ನಾಯಕರಾದ ರವಿಕುಮಾರ್, ಸಿದ್ದರಾಜು, ಅಶ್ವತ್ ನಾರಾಯಣ ಬಂದು ಜಾಮೀನು ಕೊಡಿಸಿದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ

ಸಿದ್ದರಾಮಯ್ಯ ಸರ್ಕಾರ ಹಿಟ್ಲರ್​ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಅವರು ಏನಾದರೂ ಪ್ರಶ್ನಾತೀತಾ ನಾಯಕರಾ? ನಾವು ಏನೂ ಪ್ರಶ್ನೆ ಮಾಡಬಾರದಾ ಎಂದು ಪ್ರಶ್ನಿಸಿದರು. ಸಣ್ಣ ವಿಷಯವನ್ನು ದೊಡ್ಡದು ಮಾಡಿ ಕಾನೂನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನೆ ಹಾಳಾಗ ಅಂದಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಏಕವಚನದಲ್ಲಿ ಮಾತನಾಡುತ್ತಾರೆ. ಆದರೆ ನಾವು ಅವರ ಮನೆಯ ಬಗ್ಗೆ ಮಾತಾಡಿದಕ್ಕೆ ವೈಯಕ್ತಿವಾಗಿ ತೆಗೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ನಟರಾಜ್ ವಾಗ್ದಾಳಿ ಮಾಡಿದ್ದಾರೆ.

ಏನೇ ಆದರೂ ಕೂಡ ನನ್ನ ಹೋರಾಟ ಹೀಗೆ ಇರುತ್ತೆ. ಕೇಸ್ ಹಾಕಿದ ತಕ್ಷಣ ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಒಬ್ಬಳ ಧ್ವನಿ ಧಮನ ಮಾಡಿದರೆ, ನನ್ನಂತ ನೂರು ಕಾರ್ಯಕರ್ತರು ಬಿಜೆಪಿಯಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.

ಮುಸ್ಲಿಂ ಯುವತಿಯರು ಟಾಯ್ಲೆಟ್​ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​​ ಅವರ ಪ್ರಕಾರ ಮಕ್ಕಳಾಟವಂತೆ. ಸಿಎಂ ಸಿದ್ಧರಾಮಯ್ಯ ಅವರ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ, ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ ಎಂದು ಶಕುಂತಲಾ ನಟರಾಜ್​ ನಿನ್ನೆ ಟ್ವೀಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:24 pm, Sat, 29 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ