ತುಮಕೂರು, ಜುಲೈ 29: ಉಡುಪಿ ಕಾಲೇಜ್ ವಿದ್ಯಾರ್ಥಿನಿಯರ ವಿಡಿಯೋ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಕುಟುಂಬದ ವಿರುದ್ಧ ಟ್ವಿಟ್ ಮಾಡಿದ್ದ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಹಸಂಚಾಲಕಿ ಶಕುಂತಲಾ ನಟರಾಜ್ರನ್ನು ನಿನ್ನೆ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ಇದೀಗ ಟಿವಿ9 ಜತೆ ಮಾತನಾಡಿದ ಅವರು, ಮನೆಗೆ ಬಂದು ಏಕಾಏಕಿ ನನ್ನನ್ನು ಪೊಲೀಸರು ಕರದುಕೊಂಡು ಹೋದರು. ಫೋನ್ ಕಸಿದುಕೊಂಡು ಅಪರಾಧಿ ರೀತಿಯಲ್ಲಿ ನಡೆಸಿಕೊಂಡರು ಎಂದು ಆರೋಪಿಸಿದ್ದಾರೆ.
ನಿನ್ನೆ ಬೆಳಗ್ಗೆ 7.30 ಸುಮಾರಿಗೆ 8 ಜನ ಪೊಲೀಸರು ನಮ್ಮ ಮನೆಗೆ ಬಂದಿದ್ದರು. ಡ್ರೆಸ್ ಬದಲಾಯಿಸಿಕೊಳ್ಳಲು ಬಿಡದೆ, ಮಕ್ಕಳ ಮುಂದೆಯೇ ನನ್ನನ್ನು ಕರೆದುಕೊಂಡು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ಹೋದರು. ಪೊಲೀಸ್ ಠಾಣೆಯಲ್ಲಿ ಹೀಗೆಲ್ಲಾ ಬರೆಯಬೇಡಿ ಎಂದು ಹೇಳಿದರು. ಬಳಿಕ ನಮ್ಮ ಪಕ್ಷದ ನಾಯಕರಾದ ರವಿಕುಮಾರ್, ಸಿದ್ದರಾಜು, ಅಶ್ವತ್ ನಾರಾಯಣ ಬಂದು ಜಾಮೀನು ಕೊಡಿಸಿದರು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ಸರ್ಕಾರ ಹಿಟ್ಲರ್ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಅವರು ಏನಾದರೂ ಪ್ರಶ್ನಾತೀತಾ ನಾಯಕರಾ? ನಾವು ಏನೂ ಪ್ರಶ್ನೆ ಮಾಡಬಾರದಾ ಎಂದು ಪ್ರಶ್ನಿಸಿದರು. ಸಣ್ಣ ವಿಷಯವನ್ನು ದೊಡ್ಡದು ಮಾಡಿ ಕಾನೂನು ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನೆ ಹಾಳಾಗ ಅಂದಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಏಕವಚನದಲ್ಲಿ ಮಾತನಾಡುತ್ತಾರೆ. ಆದರೆ ನಾವು ಅವರ ಮನೆಯ ಬಗ್ಗೆ ಮಾತಾಡಿದಕ್ಕೆ ವೈಯಕ್ತಿವಾಗಿ ತೆಗೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಕುಂತಲಾ ನಟರಾಜ್ ವಾಗ್ದಾಳಿ ಮಾಡಿದ್ದಾರೆ.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R— ಶಕುಂತಲ?Shakunthala (@ShakunthalaHS) July 25, 2023
ಏನೇ ಆದರೂ ಕೂಡ ನನ್ನ ಹೋರಾಟ ಹೀಗೆ ಇರುತ್ತೆ. ಕೇಸ್ ಹಾಕಿದ ತಕ್ಷಣ ನಾನು ತಲೆಕೆಡಿಸಿಕೊಳ್ಳಲ್ಲ. ನನ್ನ ಒಬ್ಬಳ ಧ್ವನಿ ಧಮನ ಮಾಡಿದರೆ, ನನ್ನಂತ ನೂರು ಕಾರ್ಯಕರ್ತರು ಬಿಜೆಪಿಯಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.
ಮುಸ್ಲಿಂ ಯುವತಿಯರು ಟಾಯ್ಲೆಟ್ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ಅವರ ಪ್ರಕಾರ ಮಕ್ಕಳಾಟವಂತೆ. ಸಿಎಂ ಸಿದ್ಧರಾಮಯ್ಯ ಅವರ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ, ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ ಎಂದು ಶಕುಂತಲಾ ನಟರಾಜ್ ನಿನ್ನೆ ಟ್ವೀಟ್ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:24 pm, Sat, 29 July 23